Kulgam

ಕುಲ್ಗಾಮ್ ಎನ್ಕೌಂಟರ್: ಉಗ್ರರು-ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ, ನಾಲ್ವರು ಯೋಧರಿಗೆ ಗಾಯ
ಕುಲ್ಗಾಮ್ ಜಿಲ್ಲೆಯ ದೇವ್‌ಸರ್ ಪ್ರದೇಶದ ಅಧಿಗಾಮ್ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು.

ಕುಲ್ಗಾಮ್‌ನಲ್ಲಿ ಅವಳಿ ಎನ್‌ಕೌಂಟರ್: ಮೃತ ಉಗ್ರರ ಸಂಖ್ಯೆ 5ಕ್ಕೆ ಏರಿಕೆ, ರಜೌರಿಯಲ್ಲಿ ಗುಂಡಿನ ದಾಳಿ, ಯೋಧ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಲ್ಲಿ ಮತ್ತೊಬ್ಬ ಉಗ್ರನ ಹತ್ಯೆಯ ಬಳಿಕ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ನಡೆಯುತ್ತಿರುವ ಎರಡು ಎನ್‌ಕೌಂಟರ್‌ಗಳಲ್ಲಿ ಮೃತಪಟ್ಟ ಉಗ್ರರ ಸಂಖ್ಯೆ 5ಕ್ಕೆ ಏರಿಕೆಯಾಗಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಕಾಶ್ಮೀರ: ಕುಲ್ಗಾಮ್‌ನಲ್ಲಿ ಉಗ್ರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಯೋಧ ಹುತಾತ್ಮ
ಗುಂಡಿನ ಚಕಮಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಭಾರತೀಯ ಸೇನೆಯ ಯೋಧ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕುಲ್ಗಾಂ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ!
ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ಕುಲ್ಗಾಮ್‌ನಲ್ಲಿ ಉಗ್ರರೊಂದಿಗೆ ಎನ್‌ಕೌಂಟರ್; ಮೂವರು ಭದ್ರತಾ ಸಿಬ್ಬಂದಿಗೆ ಗಾಯ
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶುಕ್ರವಾರ ಉಗ್ರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ; ರಜೆಯ ಮೇಲೆ ಮನೆಗೆ ಬಂದಿದ್ದ ಯೋಧ ನಾಪತ್ತೆ, ಭಾರಿ ಶೋಧ ಕಾರ್ಯಾಚರಣೆ
ರಜೆಯ ಮೇಲೆ ಬಂದಿದ್ದ ಸೇನೆಯ ಯೋಧ ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಿಂದ ನಾಪತ್ತೆಯಾಗಿದ್ದು, ಭದ್ರತಾ ಪಡೆಗಳು ಭಾರಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಎನ್ ಕೌಂಟರ್ ಮುನ್ನ ಉಗ್ರನಿಗೆ ಭಾರತೀಯ ಸೇನಾಧಿಕಾರಿಯ ವಿಡಿಯೋ ಕಾಲ್- ವೀಡಿಯೋ ವೈರಲ್
ಎನ್ ಕೌಂಟರ್ ಮುನ್ನ ಜೈಷ್ ಉಗ್ರನೊಂದಿಗೆ ಭಾರತೀಯ ಸೇನಾಧಿಕಾರಿಯೊಬ್ಬರು ವಿಡಿಯೋ ಕಾಲ್ ಮೂಲಕ ಮಾತನಾಡಿರುವ ವಿಡಿಯೋವೊಂದು ವೈರಲ್ ಆಗಿದೆ. ಮಂಗಳವಾರ ನಡೆದ ಎನ್ ಕೌಂಟರ್ ವೇಳೆ ಶರಣಾಗುವಂತೆ ಉಗ್ರನಿಗೆ ಭಾರತೀಯ ಸೇನಾಧಿಕಾರಿ ಹೇಳಿದ್ದಾರೆ. ಆದರೆ, ಅದನ್ನು ಉಗ್ರ ನಿರಾಕರಿಸಿದ್ದಾನೆ.

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್
ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಭಯೋತ್ಪಾಕರು, ಭದ್ರತಾ ಸಿಬ್ಬಂದಿಗಳ ನಡುವೆ ಬೆಳ್ಳಂಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ.

ಜಮ್ಮು-ಕಾಶ್ಮೀರದ ಕುಲ್ಗಾಮ್ ನಲ್ಲಿ ಎನ್ ಕೌಂಟರ್: ಇಬ್ಬರು ಸ್ಥಳೀಯ ಉಗ್ರರು ಪೊಲೀಸರ ಮುಂದೆ ಶರಣು
ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಡಿಗಮ್ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿಯಿಂದ ಆರಂಭವಾದ ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರು ಪೊಲೀಸರ ಮುಂದೆ ಶರಣಾಗಿದ್ದಾರೆ.

