Kumaraswamy

ಸಾಲಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭ
ರೈತರ ಸಾಲ ಮನ್ನಾ ಮಾಹಿತಿ ಪಡೆಯಲು ಜೆಡಿಎಸ್ ಸಹಾಯವಾಣಿ ಆರಂಭಿಸಿರುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮೈತ್ರಿ ಸರ್ಕಾರ ಪತನ ವಿಚಾರ ಗಂಭೀರತೆ ನಡುವಲ್ಲೇ ಲಂಡನ್'ನತ್ತ ಎಚ್.ಡಿ.ಕುಮಾರಸ್ವಾಮಿ
ರಾಜ್ಯ ರಾಜಕಾರಣದಲ್ಲಿ ಮೈತ್ರಿ ಸರ್ಕಾರದ ಪತನ ವಿಚಾರ ಗಂಭೀರತೆ ಪಡೆಯುತ್ತಿದ್ದು, ಮೈತ್ರಿ ಸರ್ಕಾರ ಪತನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನೇ ಕಾರಣರನ್ನಾಗಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಂತ್ರರೂಪಿಸುತ್ತಿರುವ...

ಯಾರಿಗೆ ನೋವಾದರೂ, ಸತ್ತರೂ ವರಿಷ್ಠರಿಗೆ ಏನೂ ಅನಿಸಲ್ಲ: ಜೆಡಿಎಸ್ ಶಾಸಕ ಪುಟ್ಟಣ್ಣ ಗುಡ್ ಬೈ!
ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಪಕ್ಷ ಬಿಡಲು ತೀರ್ಮಾನಿಸಿದ್ದೇನೆ, ಇನ್ನೂ ಹಲವು ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಯಾವ ರೀತಿ ಬೆಂಬಲ ಎಂಬುದನ್ನು ಶೆಟ್ಟರ್ ಸ್ಪಷ್ಟಪಡಿಸಲಿ: ಕುಮಾರಸ್ವಾಮಿ
ಸಚಿವ ಜಗದೀಶ್ ಶೆಟ್ಟರ್ ಅವರು ಜೆಡಿಎಸ್ ಪಕ್ಷದಿಂದ ಯಾವ ರೀತಿಯ ಬೆಂಬಲ ನಿರೀಕ್ಷಿಸುತ್ತಾರೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

'ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು?'
ಲೋಕಸಭೆ ಚುನಾವಣೆಯಲ್ಲಿ ನೀವು ಕೊಟ್ಟ ಸಹಕಾರ ಎಂಥದ್ದು? ಸರ್ಕಾರ ಬೀಳಿಸಿದ ಶಾಸಕರ ಎದೆ ಬಗೆದರೆ ಅಲ್ಲಿ ಕಾಣುತ್ತಿದ್ದವರು ಯಾರು? ಈ "ಯಾರು''ಎಂಬ ಪ್ರಶ್ನೆಗೆ ನೀವು ಪ್ರಾಮಾಣಿಕವಾಗಿ ಉತ್ತರಿಸುವಿರಾ?

ಪ್ರವಾಹ ಪರಿಹಾರ: ಸರ್ಕಾರದ ವಿರುದ್ಧ ಹರಿಹಾಯ್ದ ಮಾಜಿ ಸಿಎಂ ಕುಮಾರಸ್ವಾಮಿ
ಪ್ರವಾಹದಿಂದಾದಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ರೈತರ ನಿರೀಕ್ಷೆಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು, ರಾಜ್ಯದ ಆಡಳಿತಾರೂಢ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ 2 ತಿಂಗಳುಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸಲು ಸಾಧ್ಯವಿಲ್ಲ: ಕುಮಾರಸ್ವಾಮಿ
ರಾಜ್ಯದ ಜನರನ್ನು ಲೂಟಿ ಮಾಡುವ ಸಲುವಾಗಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಇನ್ನು ಎರಡು ತಿಂಗಳಿಗೂ ಹೆಚ್ಚು ಕಾಲ ಅಧಿಕಾರ ನಡೆಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ,ಕುಮಾರಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.

ಫೋನ್ ಟ್ಯಾಪಿಂಗ್: ಸ್ವಾಮಿಗಳ ಬಗೆಗೆ ಅನುಮಾನ ಪಟ್ಟಿಲ್ಲ, ವರದಿಯಿಂದ ನೋವಾಗಿದೆ- ಕುಮಾರಸ್ವಾಮಿ
ತಮ್ಮ ಅಧಿಕಾರವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಯ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ವರದಿಗಳು, ರಾಜಕೀಯ ನಾಯಕರ ಹೇಳಿಕೆಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಮಾಜಿ ಸಿಎಂ ಸೂಚನೆ ಮೇರೆಗೆ ಟೆಲಿಫೋನ್ ಕದ್ದಾಲಿಕೆ ಮಾಡಲಾಗಿತ್ತು: ಅಲೋಕ್ ಕುಮಾರ್
ಟೆಲಿಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಸಿಬಿಐ ಅಧಿಕಾರಿಗಳು ರಾಜ್ಯ ಸಶಸ್ತ್ರ ಮೀಸಲು ಪಡೆಯ ಎಡಿಜಿಪಿ ಹಾಗೂ ಬೆಂಗಳೂರು ನಗರದ ಹಿಂದಿನ ಆಯುಕ್ತ ಅಲೋಕ್ ಕುಮಾರ್ ಅವರ ವಿಚಾರಣೆಯನ್ನು 2ನೇ ದಿನವಾದ ಶುಕ್ರವಾರವೂ ಮುಂದುವರಿಸಿತ್ತು...

