ರಾಜ್ಯ ಬಜೆಟ್ಸುಸ್ತಿ ಬಡ್ಡಿ ಮನ್ನಾ ಮಾಡಿರುವುದು ಒಳ್ಳೆಯ ಬೆಳವಣಿಗೆ: ಕುರುಬೂರು ಶಾಂತಕುಮಾರ್
ಕೃಷಿ ಕ್ಷೇತ್ರಕ್ಕೆ 32,259 ಕೋಟಿ ರೂಪಾಯಿಗಳನ್ನು ಮೀಸಲಾಗಿರುವುದು, ಏತ ನೀರಾವರಿ ಯೋಜನೆಗಳಿಗೆ 5,000 ಕೋಟಿ ಎತ್ತಿನಹೊಳೆ ಯೋಜನೆಗೆ 1500 ಕೋಟಿ, ಮಹಾದಾಯಿ ಯೋಜನೆಗೆ 500 ಕೋಟಿ ರೂಪಾಯಿ ಮೀಸಲಾಗಿರುವುದು ಸ್ವಾಗತಾರ್ಹ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯಿಸಿದ್ದಾರೆ.