ರಾಜ್ಯಕುಶಾಲನಗರದಲ್ಲಿ 7.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕೆಎಸ್ಆರ್ಟಿಸಿ ಬಸ್ ಡಿಪೋ ನಿರ್ಮಾಣ
ಕಳೆದ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕುಶಾಲನಗರದ ನೂತನ ಕೆಎಸ್ಆರ್ಟಿಸಿ ಬಸ್ ಘಟಕದ ನಿರ್ಮಾಣ ಕಾರ್ಯ ಆರಂಭವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇತ್ತೀಚೆಗೆ ಕುಶಾಲನಗರ-ಮಡಿಕೇರಿ ರಸ್ತೆಯ ಬಸವನಹಳ್ಳಿ ಬಳಿ ನಿರ್ಮಿಸುತ್ತಿರುವ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದ್ದು, 7.5 ಕೋಟಿ ರೂ.ವೆಚ್ಚದಲ್ಲಿ ಸುಸಜ್ಜಿತ ಡಿಪೋ ನಿರ್ಮಾಣ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.