ರಾಜಕೀಯಶೋಭಾ ಕರಂದ್ಲಾಜೆಗೆ ಗಂಡನನ್ನು ಕಳೆದುಕೊಂಡ ನೋವಿಲ್ಲ: ಮಾಜಿ ಸಚಿವೆ, ನಟಿ ಉಮಾಶ್ರೀ
ಐಎಎಸ್ ಅಧಿಕಾರಿ ದಿವಂಗತ ಡಿ.ಕೆ ರವಿ ಹೆಸರು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದು ಹೇಳುವ ಮೂಲಕ ಆರ್.ಆರ್ ನಗರ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರನ್ನು ಮೂದಲಿಸಿರುವ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕಿಯರು ಒಕ್ಕೊರಲಿನಿಂದ ಹರಿಹಾಯ್ದಿದ್ದಾರೆ.