ರಾಜಕೀಯಗುಜರಾತ್ ನಂತೆ ಕರ್ನಾಟಕದಲ್ಲೂ ಹಿರಿಯರು ಚುನಾವಣೆಯಿಂದ ಹಿಂದೆ ಸರಿದು ಯುವಕರಿಗೆ ದಾರಿ ಮಾಡಿಕೊಡಬೇಕು: ಬಿಜೆಪಿ ಸಂಸದ
2023 ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈ ನಡುವಲ್ಲೇ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು, ಗುಜರಾತ್ ರಾಜ್ಯದಂತೆ ಕರ್ನಾಟಕದಲ್ಲೂ ಪಕ್ಷದ ಹಿರಿಯ ನಾಯಕರು ಚುನಾವಣೆಯಿಂದ ಹಿಂದೆ ಸರಿದು ಯುವಕರಿಗೆ ದಾರಿ ಮಾಡಿಕೊಡಬೇಕೆಂದು ಹೇಳಿದ್ದಾರೆ.