Lakhimpur Kheri

ಪರಿಹಾರ ಹಣದಿಂದ ನನ್ನ ಮಗ ವಾಪಸ್ ಬರುವನೇ?; ಅಜಯ್ ಮಿಶ್ರಾ ರಾಜಿನಾಮೆ ನೀಡಲೇಬೇಕು: ಲಖೀಂಪುರ ಸಂತ್ರಸ್ತನ ತಂದೆ
ಕೇಂದ್ರ ಸಚಿವ ಅಜಯ್ ಮಿಶ್ರಾ ರಾಜಿನಾಮೆ ನೀಡಲೇಬೇಕು, ಅವರ ಪುತ್ರನನ್ನು ತಕ್ಷಣವೇ ಬಂಧಿಸಬೇಕೆಂದು ಲಖೀಂಪುರ ಖೇರಿ ದುರ್ಘಟನೆಯಲ್ಲಿ ಮಡಿದ ಲವ್ ಪ್ರೀತ್ ಸಿಂಗ್ ತಂದೆ ಸತ್ನಾಮ್ ಸಿಂಗ್ ಒತ್ತಾಯಿಸಿದ್ದಾರೆ.

ಲಖಿಂಪುರ್ ಖೇರಿ ಹಿಂಸಾಚಾರ: ಇಬ್ಬರ ಬಂಧನ; ಮುಂದಿನ ಬೇಟೆ ಮುಖ್ಯ ಆರೋಪಿ ಆಶಿಶ್ ಮಿಶ್ರಾ ಎಂದ ಯುಪಿ ಪೊಲೀಸ್!
ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಲವ್ ಕುಶ್ ಮತ್ತು ಆಶಿಶ್ ಪಾಂಡ್ಯ ಎಂಬುವರನ್ನು ಬಂಧಿಸಿದ್ದು ಶೀಘ್ರವೇ ಮುಖ್ಯ ಆರೋಪಿ ಕೇಂದ್ರ ಸಚಿವ ಅಜಯ್ ಮಿಶ್ರಾ ಪುತ್ರ ಆಶಿಶ್ ಮಿಶ್ರಾರನ್ನು ಬಂಧಿಸುತ್ತೇವೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ: ವಾಸ್ತವಸ್ಥಿತಿ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ 'ಸುಪ್ರೀಂ' ಸೂಚನೆ
ಲಖಿಂಪುರ್ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ವಾಸ್ತವಸ್ಥಿತಿ ವರದಿ ಸಲ್ಲಿಸುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.

ಲಖಿಂಪುರ್ ಖೇರಿ ಹಿಂಸಾಚಾರ: ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖೆಗೆ ಖರ್ಗೆ ಆಗ್ರಹ
ರೈತರು ಸೇರಿದಂತೆ 8 ಮಂದಿ ಸಾವಿಗೆ ಕಾರಣವಾಗಿರುವ ಲಖಿಂಪುರ್ ಖೇರಿ ಹಿಂಸಾಚಾರ ಘಟನೆ ಕುರಿತು ಸುಪ್ರೀಂ ಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸುವಂತೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಆಗ್ರಹಿಸಿದ್ದಾರೆ.

ಲಖಿಂಪುರ್ ಖೇರಿಯತ್ತ ರಾಹುಲ್ ಗಾಂಧಿ, ಸೀತಾಪುರ ಅತಿಥಿಗೃಹ ತಲುಪಿದ ಕಾಂಗ್ರೆಸ್ ನಾಯಕ
ಭಾರೀ ಹೈಡ್ರಾಮದ ನಂತರ ಲಖನೌ ವಿಮಾನ ನಿಲ್ದಾಣದಿಂದ ಲಖಿಂಪುರ ಖೇರಿಗೆ ತೆರಳುತ್ತಿರುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸೀತಾಪುರದ ಪಿಎಸಿ ಅತಿಥಿ ಗೃಹವನ್ನು ತಲುಪಿದ್ದಾರೆ.

ಲಖೀಂಪುರ್ ಖೇರಿ: ಏರ್ ಪೋರ್ಟ್ ನಲ್ಲಿ ರಾಹುಲ್ ಗಾಂಧಿಗೆ ತಡೆ; ಮೃತರ ಕುಟುಂಬಕ್ಕೆ ಛತ್ತೀಸ್ ಘಡ, ಪಂಜಾಬ್ 50 ಲಕ್ಷ ರೂ. ಪರಿಹಾರ ಘೋಷಣೆ
ಪ್ರಿಯಾಂಕಾ ಗಾಂಧಿ ಬೆನ್ನಲ್ಲೇ ಇತ್ತ ರಾಹುಲ್ ಗಾಂಧಿ ಪ್ರವೇಶಕ್ಕೂ ಉತ್ತರ ಪ್ರದೇಶ ಪೊಲೀಸರು ತಡೆ ಹಾಕಿದ್ದು, ಲಖನೌ ಏರ್ ಪೋರ್ಟ್ ನಲ್ಲೇ ಕಾಂಗ್ರೆಸ್ ನಾಯಕನಿಗೆ ತಡೆವೊಡ್ಡಿದ್ದಾರೆ.

ಉತ್ತರ ಪ್ರದೇಶ ಪಾಕಿಸ್ತಾನದಲ್ಲಿದೆಯೇ: ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣದ ಕುರಿತು ಶಿವಸೇನೆ ಆಕ್ರೋಶ
ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ವಿರುದ್ಧ ಶಿವಸೇನೆ ತೀವ್ರ ಕಿಡಿಕಾರಿದ್ದು, ಉತ್ತರ ಪ್ರದೇಶ ಪಾಕಿಸ್ತಾನದಲ್ಲಿದೆಯೇ ಎಂದು ಪ್ರಶ್ನಿಸಿದೆ.

ಲಂಖಿಪುರ್ ಖೇರಿ ಹಿಂಸಾಚಾರ ಪ್ರಕರಣ: ಕಾನೂನಿನ ಪ್ರಕಾರವೇ ನಿರ್ಧಾರ ಕೈಗೊಂಡಿದ್ದೇವೆ ಎಂದ ಉತ್ತಪ್ರದೇಶ ಸರ್ಕಾರ
ಲಖಿಂಪುರ್ ಖೇರಿ ಘಟನೆ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ವಿರೋಧ ಪಕ್ಷಗಳು ಋಣಾತ್ಮಕ ಧೋರಣೆಗಳನ್ನು ಅಳವಡಿಸಿಕೊಂಡಿದೆ. ಹೀಗಾಗಿ ಅಲ್ಲಿನ ವಾತಾವರಣ ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಕಾನೂನಿನ ಪ್ರಕಾರ ನಾವು ನಿರ್ಧಾರಗಳನ್ನು ಕೈಗೊಂಡಿದ್ದೇವೆಂದು ಉತ್ತರಪ್ರದೇಶ ಸರ್ಕಾರ ಬುಧವಾರ ಹೇಳಿದೆ.

ರೈತರ ಮೇಲೆ ‘ವ್ಯವಸ್ಥಿತ ದಾಳಿ’ ನಡೆದಿದ್ದು, ಭಾರತದಲ್ಲಿ ಸರ್ವಾಧಿಕಾರವಿದೆ: ಯೋಗಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿ
ನಾಲ್ವರು ರೈತರು ಸೇರಿ 8 ಮಂದಿ ಸಾವಿಗೀಡಾದ ಉತ್ತರ ಪ್ರದೇಶದ ಲಖಿಂಪುರ್–ಖೇರಿ ಹಿಂಸಾಚಾರದಲ್ಲಿ ರೈತರ ಮೇಲೆ ‘ವ್ಯವಸ್ಥಿತ ದಾಳಿ’ನಡೆದಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಯೋಗಿ ಆದಿತ್ಯನಾಥ್ ಸರ್ಕಾರದ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ್ದಾರೆ.

