ದೇಶಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವ ಮೊದಲು ಎರಡು ಬಾರಿ ಯೋಚಿಸಿ: ಮಾಲ್ಡೀವ್ಸ್ಗೆ ಲಕ್ಷದ್ವೀಪ ಸಂಸದ
ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ ನಂತರ ಭಾರತ-ಮಾಲ್ಡೀವ್ಸ್ ಮಧ್ಯೆ ಎದ್ದಿರುವ ವಿವಾದ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಲಕ್ಷದ್ವೀಪ ಲೋಕಸಭಾ ಸಂಸದ ಮೊಹಮ್ಮದ್ ಫೈಜಲ್, ಭಾರತದ ಆಂತರಿಕ ವಿಷಯಗಳ ಬಗ್ಗೆ ಪ್ರತಿಕ್ರಿಯಿಸುವ ಮೊದಲು ಎರಡು ಬಾರಿ ಯೋಚಿಸಿ ಮಾತನಾಡಿ ಎಂದು ಹೇಳಿದ್ದಾರೆ.