land acquisition

ದಾಖಲೆ ತಿರುಚಿ 20 ಎಕರೆ ಭೂಮಿ ಕಬಳಿಸಿಕ ಆರೋಪ: ಸಚಿವ ಕೃಷ್ಣ ಬೈರೇಗೌಡ ರಾಜೀನಾಮೆಗೆ BJP ಆಗ್ರಹ
ಕೆರೆ ಮತ್ತು ಸ್ಮಶಾನಕ್ಕೆ ಸೇರಿದ ಒಟ್ಟು 21ಎಕರೆ 16 ಗುಂಟೆ ಜಮೀನಿನ ದಾಖಲೆಗಳನ್ನು ತಿದ್ದಿ, ಖರಾಬು ಎಂದು ನಕಲಿ ದಾಖಲೆ ಸೃಷ್ಟಿಸಲಾಗಿದೆ. 2001–02ರಲ್ಲಿ ಈ ಕೃತ್ಯ ನಡೆದಿದೆ. ಕೃಷ್ಣಬೈರೇಗೌಡ ಮತ್ತು ಅವರ ಕುಟುಂಬದ ಹೆಸರಿಗೆ ಬರೆಸಲಾಗಿದೆ.

ರಾಜ್ಯ ಸರ್ಕಾರದ ಅಸಹಕಾರ: ಭೂಸ್ವಾಧೀನ ಪ್ರಕ್ರಿಯೆ ವಿಳಂಬ, ಕರ್ನಾಟಕದ ಪ್ರಮುಖ ರೈಲ್ವೆ ಯೋಜನೆಗಳು ಸ್ಥಗಿತ- ಅಶ್ವಿನಿ ವೈಷ್ಣವ್
ಕರ್ನಾಟಕದೊಂದಿಗೆ 50:50 ವೆಚ್ಚ ಹಂಚಿಕೆಯಲ್ಲಿ ಮಂಜೂರಾದ ಧಾರವಾಡ-ಬೆಳಗಾವಿ ಮೂಲಕ ಕಿತ್ತೂರು ಹೊಸ ಮಾರ್ಗ ಯೋಜನೆ (73 ಕಿಮೀ), ಬಾಕಿ ಭೂಸ್ವಾಧೀನದಿಂದಾಗಿ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಒಪ್ಪಂದದ ಪ್ರಕಾರ, ರಾಜ್ಯವು ಭೂಮಿಯನ್ನು ಉಚಿತವಾಗಿ ಒದಗಿಸಬೇಕು.

ಈಜಿಪುರ ಮೇಲ್ಸೇತುವೆ: ಸೇಂಟ್ ಜಾನ್ಸ್ ಆಸ್ಪತ್ರೆಯ ಭೂಸ್ವಾಧೀನ ತ್ವರಿತಗೊಳಿಸಲು ರಾಮಲಿಂಗಾ ರೆಡ್ಡಿ ಆಗ್ರಹ
ಆದರೆ ಸೇಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಭೂಸ್ವಾಧೀನ ಆತಂಕವಾಗಿದೆ. ಏಕೆಂದರೆ ಆಸ್ಪತ್ರೆ ಆಡಳಿತವು ಟಿಡಿಆರ್ ಸೂತ್ರಕ್ಕೆ ಇನ್ನೂ ಒಪ್ಪಿಗೆ ನೀಡಿಲ್ಲ. ಈ ಪ್ರಾಜೆಕ್ಟ್ ನಿರ್ಣಾಯಕ ಭಾಗದ ಶೇಕಡಾ 20 ರಷ್ಟು ಈ ಭಾಗದಲ್ಲಿದೆ ಎಂದು ಎಂಜಿನಿಯರ್ ಒಬ್ಬರು ಹೇಳಿದ್ದಾರೆ.

ಭೂಸ್ವಾಧೀನಕ್ಕೆ ಬಿಜೆಪಿ ಸರ್ಕಾರಕ್ಕೆ ಸಹಕಾರ ಕೊಟ್ಟವರು ನನ್ನನ್ನು ಪ್ರಶ್ನೆ ಮಾಡುತ್ತಿರುವುದೇಕೆ; ಅಧಿಕಾರ ಇದ್ದಾಗ ಅಶೋಕ್, ದೇವೇಗೌಡರು ಸರಿಪಡಿಸಲಿಲ್ಲವೇಕೆ?
ದೇವೇಗೌಡರು ತಮ್ಮ ಮಗನ ಮೂಲಕ ಏಕೆ ಬಿಡಿಸಲಿಲ್ಲ? ಆಗ ಇದು ಅವರದೇ ಕ್ಷೇತ್ರವಾಗಿತ್ತು. ಆಗ ನಾನು ಮಂತ್ರಿಯಾಗಿರಲಿಲ್ಲ, ಅವರ ಮಗನಿಗೆ ಇದು ಸರಿ ಇಲ್ಲ ಬೇಡ ಎಂದು ಹೇಳಬಹುದಿತ್ತಲ್ಲವೇ?

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ವಿರೋಧಿಸಿ ಆಹೋರಾತ್ರಿ ಧರಣಿ: ಕ್ರಿಮಿನಾಶಕ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ
ಭೂ ಸ್ವಾಧೀನ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹಾಗೂ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ್ ನೇತೃತ್ವದ ಬಿಜೆಪಿ ತಂಡ ಸ್ಥಳಕ್ಕೆ ಭೇಟಿ ನೀಡಿತ್ತು.

ಭೂಸ್ವಾಧೀನ ವಿರೋಧಿ ಪ್ರತಿಭಟನೆ: ನಟ ಪ್ರಕಾಶ್ ರೈ ಆಂಧ್ರ, ತಮಿಳುನಾಡಿನಲ್ಲೇಕೆ ಹೋರಾಟ ನಡೆಸುತ್ತಿಲ್ಲ- MB ಪಾಟೀಲ್ ಕಿಡಿ
ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಹೋರಾಟದ ಹಕ್ಕಿದೆ. ನಾನೂ ಹೋರಾಟ ಮಾಡಿಕೊಂಡೇ ಬಂದಿರುವವನು. ಈ ವಿಷಯ ಬಹುಭಾಷಾ ನಟ ಪ್ರಕಾಶ್ ರೈಗೆ ಗೊತ್ತಿರಲಿಕ್ಕಿಲ್ಲ.

ದೇವನಹಳ್ಳಿ ರೈತರ ಹೋರಾಟ: ಇಂದೇ ಸರ್ಕಾರದ ನಿಲುವು ಪ್ರಕಟಿಸಲು ಸಾಧ್ಯವಿಲ್ಲ, ಜುಲೈ15ಕ್ಕೆ ಮತ್ತೆ ಸಭೆ; ಸಿಎಂ ಸಿದ್ದರಾಮಯ್ಯ
ಕಾನೂನು ಸಮಸ್ಯೆ ನಿವಾರಿಸಲು ಸರ್ಕಾರಕ್ಕೆ ಹತ್ತು ದಿನಗಳ ಕಾಲಾವಾಕಾಶ ಬೇಕಿದೆ. ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಂಡು ಜುಲೈ 15 ರಂದು ರೈತ ಹೋರಾಟಗಾರರೊಂದಿಗೆ ಸಭೆ ನಡೆಸಲು ತೀರ್ಮಾನಿಸಲಾಗಿದೆ.

ಭೂಸ್ವಾಧೀನ ಪ್ರಕ್ರಿಯೆ ನಿಲ್ಲಿಸಿ: ದೇವನಹಳ್ಳಿ ರೈತರಿಂದ ಸಿಎಂಗೆ ಮನವಿ
ಚನ್ನರಾಯಪಟ್ಟಣ ಹೋಬಳಿಯಲ್ಲಿ 1,777 ಎಕರೆ ಫಲವತ್ತಾದ, ಬಹು ಬೆಳೆಗಳನ್ನು ಬೆಳೆಯುವ ಕೃಷಿಭೂಮಿಯ ಸ್ವಾಧೀನ ಪ್ರಕ್ರಿಯೆಗಳನ್ನು ತಕ್ಷಣ ಹಿಂಪಡೆಯಬೇಕೆಂದು ಒತ್ತಾಯಿಸಿದ್ದಾರೆ.

ದೇವನಹಳ್ಳಿಯಲ್ಲಿ ಏರೋಸ್ಪೇಸ್ ಯೋಜನೆಗೆ ಭೂಸ್ವಾಧೀನ: ರೈತರ ತೀವ್ರ ವಿರೋಧ
ರಕ್ಷಣಾ ಮತ್ತು ಏರೋಪ್ಸೇಸ್ ಪಾರ್ಕ್ ಯೋಜನೆಗೆ 1,777 ಎಕರೆಗಳನ್ನು ಸ್ವಾಧೀನಪಡಿಸಿಕೊಂಡಿದ್ದಕ್ಕಾಗಿ ಕೆಐಎಡಿಬಿಯಿಂದ ನೊಟೀಸ್ ಪಡೆದಿರುವ 13 ಹಳ್ಳಿಗಳ ನೂರಾರು ರೈತರು ಇಂದು ದುಃಖದಲ್ಲಿ ಕೈತೊಳೆಯುವ ಪರಿಸ್ಥಿತಿ ಉಂಟಾಗಿದೆ.

