ದೇಶತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಮುಲಾಯಂ ಸಿಂಗ್ ಯಾದವ್ ಪ್ರಜಾಪ್ರಭುತ್ವದ ಪ್ರಮುಖ ಸೈನಿಕರಾಗಿದ್ದರು: ಪ್ರಧಾನಿ ಮೋದಿ ಸಂತಾಪ
ಇಂದು ಸೋಮವಾರ ಬೆಳಗ್ಗೆ ನಿಧನರಾದ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರ ಅಂತ್ಯಕ್ರಿಯೆ ಉತ್ತರ ಪ್ರದೇಶದ ಅವರ ಪೂರ್ವಜ ಗ್ರಾಮವಾದ ಸೈಫೈಯಲ್ಲಿ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮೃತರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.