Law and order

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್ಪಿ, ಡಿಸಿಪಿಗಳೇ ಹೊಣೆ: ಸಿಎಂ ಸಿದ್ದರಾಮಯ್ಯ
ಕಾನೂನು ಸುವ್ಯವಸ್ಥೆ ಸರಿ ಇದ್ದರೆ ರಾಜ್ಯ ಅಭಿವೃದ್ಧಿಯಾಗುತ್ತದೆ. ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಎಸ್ಪಿ ಹಾಗೂ ಡಿಸಿಪಿಗಳನ್ನು ಹೊಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಕಾನೂನು ಸುವ್ಯವಸ್ಥೆಯನ್ನು ಹಸ್ತಾಂತರಿಸಿ, ದೆಹಲಿಯನ್ನು ಸುರಕ್ಷಿತವಾಗಿಸುವುದು ಹೇಗೆಂದು ತೋರಿಸುತ್ತೇವೆ: ಕೇಜ್ರಿವಾಲ್
ನಿಮಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ, ಅದನ್ನು ನಮಗೆ ನೀಡಿ. ದೆಹಲಿಯನ್ನು ಸುರಕ್ಷಿತ ನಗರವನ್ನಾಗಿ ಮಾಡುವುದು ಹೇಗೆಂದು ನಾವು ತೋರಿಸುತ್ತೇವೆ' ಎಂದು ಕೇಜ್ರಿವಾಲ್ ಹೇಳಿದ್ದಾರೆ.

ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಸುವ್ಯವಸ್ಥೆ ಇದ್ದಿದ್ದರೆ ದೆಹಲಿ ಅತ್ಯಂತ ಸುರಕ್ಷಿತವಾಗಿರುತ್ತಿತ್ತು: ಅರವಿಂದ ಕೇಜ್ರಿವಾಲ್
ಲೆಫ್ಟಿನೆಂಟ್ ಗವರ್ನರ್ ಬದಲಿಗೆ ಎಎಪಿ ಸರ್ಕಾರದ ಅಡಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯು ಇದ್ದಿದ್ದರೆ ರಾಷ್ಟ್ರ ರಾಜಧಾನಿ ಸುರಕ್ಷಿತ ಸ್ಥಳವಾಗುತ್ತಿತ್ತು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ಹನುಮ ಜಯಂತಿ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಿ: ಗೃಹ ಸಚಿವಾಲಯ ಸೂಚನೆ
ಹನುಮ ಜಯಂತಿಯ ಪೂರ್ವಭಾವಿಯಾಗಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು, ಶಾಂತಿಯುತವಾಗಿ ಹಬ್ಬವನ್ನು ಆಚರಿಸಲು ಮತ್ತು ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಭಂಗ ತರುವ ಯಾವುದೇ ಅಂಶಗಳ ಮೇಲೆ ನಿಗಾ ವಹಿಸುವಂತೆ ಕೇಂದ್ರವು ಎಲ್ಲಾ ರಾಜ್ಯಗಳಿಗೆ ಬುಧವಾರ ಸೂಚಿಸಿದೆ.

ಮುಖ್ಯಮಂತ್ರಿ ಭಗವಂತ ಮಾನ್ ನೇತೃತ್ವದಲ್ಲಿ ಪಂಜಾಬ್‌ನ ಕಾನೂನು ಮತ್ತು ಸುವ್ಯವಸ್ಥೆ ಸುಧಾರಿಸಿದೆ: ಅರವಿಂದ ಕೇಜ್ರಿವಾಲ್
ಮುಖ್ಯಮಂತ್ರಿ ಭಗವಂತ್ ಮಾನ್ ಅವರ ನೇತೃತ್ವದಲ್ಲಿ ಪಂಜಾಬ್‌ನ ಕಾನೂನು ಮತ್ತು ಸುವ್ಯವಸ್ಥೆ ಭಾರಿ ಸುಧಾರಣೆಯನ್ನು ಕಂಡಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭಾನುವಾರ ಹೇಳಿದ್ದಾರೆ.

ಗಡಿ ವಿವಾದ ಬಿಸಿಯಾಗಿರುವ ಈ ಸಂದರ್ಭದಲ್ಲಿ ಮಹಾರಾಷ್ಟ್ರ ಸಚಿವರು ರಾಜ್ಯಕ್ಕೆ ಬರುವುದು ಸೂಕ್ತವಲ್ಲ: ಸಿಎಂ ಬೊಮ್ಮಾಯಿ
ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳಲ್ಲಿ ಗಡಿ ವಿವಾದ ತಾರಕಕ್ಕೇರಿದ್ದು, ಈ ಸಂದರ್ಭದಲ್ಲಿ ಮಹಾರಾಷ್ಟ್ರ ರಾಜ್ಯದ ಸಚಿವರು ರಾಜ್ಯಕ್ಕೆ ಬರುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸೋಮವಾರ ಹೇಳಿದ್ದಾರೆ.

ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ಒತ್ತಡವಿರಲಿದೆ; ಆದರೆ ನಿಭಾಯಿಸುತ್ತೇವೆ; ಎಡಿಜಿಪಿ ಅಲೋಕ್ ಕುಮಾರ್
ರಾಜ್ಯದಲ್ಲಿನ ಕೋಮು ಸೌಹಾರ್ದತೆಯ ವಾತಾವರಣ ಹದಗೆಟ್ಟಿದ್ದು ಇಂತಹ ಪರಿಸ್ಥಿತಿಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಅತ್ಯಂತ ಹೆಚ್ಚಿನ ಒತ್ತಡದಲ್ಲಿದ್ದಾರೆ.

ದೇಶಭಕ್ತರ ಮೂರ್ತಿಗಳಿಗೆ ಅಗೌರವ ತೋರಿಸುವುದು ಸರಿಯಲ್ಲ, ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದರೆ ಸರ್ಕಾರ ಸಹಿಸುವುದಿಲ್ಲ: ಸಿಎಂ ಬೊಮ್ಮಾಯಿ
ದೇಶಭಕ್ತರ ಮೂರ್ತಿಗಳನ್ನು ಅವರು ದೇಶಕ್ಕೆ ಮಾಡಿದ ತ್ಯಾಗ, ಬಲಿದಾನ, ಸೇವೆಗಳ ಗೌರವಾರ್ಥವಾಗಿ ಸ್ಥಾಪನೆ ಮಾಡಲಾಗುತ್ತದೆ. ಅದು ಶಿವಾಜಿ ಮಹಾರಾಜರ ಪ್ರತಿಮಯಾಗಿರಲಿ, ಸಂಗೊಳ್ಳಿ ರಾಯಣ್ಣ ಪ್ರತಿಮೆಯಾಗಿರಲಿ, ಅವರಿಗೆ ಗೌರವವನ್ನು ಕೊಡಬೇಕಾದದ್ದು ನಮ್ಮ ಕರ್ತವ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಂದಿನ ತಿಂಗಳು ಕಾನೂನು ಮತ್ತು ಸುವ್ಯವಸ್ಥೆ ವಿಭಾಗಕ್ಕೆ ಹೊಸ ಎಡಿಜಿಪಿ ನೇಮಕ
ಮುಂದಿನ ಕೆಲ ದಿನಗಳಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಯಿದೆ. ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮುಖ್ಯಸ್ಥರು, ಎಎಂ ಪ್ರಸಾದ್ ಅವರನ್ನು ಎಡಿಜಿಪಿಯಾಗಿ ನೇಮಿಸಲಾಗುವುದು.

