Laxmi Hebbalkar

ಸಿ.ಟಿ ರವಿ ಪ್ರಕರಣ: ಬಿಜೆಪಿಗೆ ಇಕ್ಕಟ್ಟು; ಕಾಂಗ್ರೆಸ್ ಕೈಗೆ ಹೊಸ ಅಸ್ತ್ರ (ಸುದ್ದಿ ವಿಶ್ಲೇಷಣೆ)
ಚಿಂತಕರ ಚಾವಡಿ ಎಂಬ ಪ್ರಶಂಸೆಗೆ ಪಾತ್ರವಾಗಿ ಸಂಸದೀಯ ವ್ಯವಸ್ಥೆಯಲ್ಲಿ ಹೆಸರು ಗಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತು ಇತ್ತೀಚಿನ ವರ್ಷಗಳಲ್ಲಿ ಅದರ ಮೌಲ್ಯ ಕಳೆದುಕೊಳ್ಳುತ್ತಿದೆ ಎಂಬ ಟೀಕೆಗಳು ವ್ಯಕ್ತವಾಗುತ್ತಿವೆ.

ಅಶ್ಲೀಲ ಪದ ಬಳಕೆ ಪ್ರಕರಣ: ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ
ಸಿಟಿ ರವಿ ಅವರನ್ನ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಬೆಳಗಾವಿ 5ನೇ ಜೆಎಂಎಫ್‌ಸಿ ಕೋರ್ಟ್‌ನ ನ್ಯಾಯಾಧೀರಾದ ಸ್ಪರ್ಶಾ ಡಿಸೋಜಾ ಅವರು ಆದೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಟಿ ರವಿಯನ್ನು ಪೊಲೀಸರು ಬೆಂಗಳೂರಿಗೆ ಕರೆತರುತ್ತಿದ್ದಾರೆ.

ಗೂಂಡಾಗಳು ಸುವರ್ಣ ಸೌಧದೊಳಕ್ಕೆ ಹೇಗೆ ಬಂದರು? ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ?: HDK
ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್'ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ

ಸಿ.ಟಿ ರವಿ ಕೀಳುಭಾಷೆ ಬಳಸಿದ್ದಾರೆ, ಅದಕ್ಕೆ ಬಂಧನವಾಗಿದೆ: ಸಿದ್ದರಾಮಯ್ಯ
ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ.ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ.

ಅಶ್ಲೀಲ ಪದ ಬಳಕೆ ಪ್ರಕರಣ: ಕೋರ್ಟ್ ಮುಂದೆ BJP MLC ಸಿಟಿ ರವಿ ಹಾಜರು, ವಿಚಾರಣೆ ಮಧ್ನಾಹ್ನ 3 ಗಂಟೆಗೆ ಮುಂದೂಡಿಕೆ!
ರವಿ ಪರ ವಕೀಲ ಎಂಬಿ ಜಿರಲಿ ವಾದ ಮಂಡಿಸಿದರು. ಅಲ್ಲದೆ ಜಾಮೀನು ನೀಡುವಂತೆ ಮನವಿ ಮಾಡಿದರು. ಇದೀಗ ಜಾಮೀನು ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಮಧ್ಯಾಹ್ನ 3 ಗಂಟೆಗೆ ಪ್ರಾರಂಭವಾಗುವ ವಿಚಾರಣೆ ವೇಳೆ ಲಕ್ಷ್ಮೀ ಹೆಬ್ಬಾಳ್ಕರ್ ಪರ ವಕೀಲರು ವಾದ ಮಂಡಿಸಲಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿ.ಟಿ ರವಿ ಮಾತನಾಡಿದ್ದು ರೆಕಾರ್ಡ್ ಆಗಿಲ್ಲ: ಸಭಾಪತಿ ಹೊರಟ್ಟಿ
ಸಿ.ಟಿ ರವಿಯವರು ಮಾತನಾಡಿದ್ದು ಆಡಿಯೋ ರೆಕಾರ್ಡ್ ಆಗಿಲ್ಲ ಸಾಕ್ಷಿಗಳು ಮಾತ್ರ ಇವೆ. ರೆಕಾರ್ಡ್ ಹುಡುಕಿದ್ದೇನೆ ನಮಗೆ ಆಡಿಯೋ ಸಿಕ್ಕಿಲ್ಲ. ನಾಲ್ಕು ಜನರು ಸಾಕ್ಷಿ ಹೇಳಿದ್ದಾರೆ. ಸಿಟಿ ರವಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಇಬ್ಬರ ದೂರನ್ನೂ ಪಡೆದಿದ್ದೇವೆ ಎಂದು ತಿಳಿಸಿದರು.

ನಾನು ಸಿ.ಟಿ ರವಿಗೆ ಕೊಲೆಗಡುಕ ಅಂದಿದ್ದು ನಿಜ, ಅವರು ನನಗೆ ಬಳಸಬಾರದ ಪದ ಬಳಸಿದರು: ಸುದ್ದಿಗೋಷ್ಠಿಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕಣ್ಣೀರು!
ಧರಣಿ ಮುಗಿಸಿ ಸೀಟ್ ಮೇಲೆ ಕುಳಿತಿದ್ದೆವು. ಆಗ ಸಿಟಿ ರವಿ ಅವರು ಇದ್ದಕ್ಕಿದ್ದಂತೆ ಬಂದು ರಾಹುಲ್ ಗಾಂಧಿಗೆ ಡ್ರಗ್ ಎಡಿಕ್ಟ್ ಎಂದರು, ಆಗ ನನಗೆ ಕೋಪ ಬಂದು, ತಾವು ಕೂಡ ಆಕ್ಸಿಡೆಂಟ್ ಮಾಡಿದ್ದೀರಿ ನೀವು ಕೊಲೆಗಾರರಾಗ್ತಿರಿ ಅಂದೆ.

ಬಿಜೆಪಿಗೆ ಮಾನ- ಮರ್ಯಾದೆ ಇಲ್ಲ; ಸಂಸ್ಕೃತಿ ಬಗ್ಗೆ ಮಾತನಾಡುವವರಿಂದ ಭಾರತ ಮಾತೆಗೆ ಅವಮಾನ: ಡಿ.ಕೆ ಶಿವಕುಮಾರ್
ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ.


