ರಾಜ್ಯಅನಧಿಕೃತ ಬಡಾವಣೆಗಳ ಹಾವಳಿ ತಡೆಗಟ್ಟಲು ರೇರಾ ನಿಯಮಕ್ಕೆ ತಿದ್ದುಪಡಿ ತರಲಾಗುವುದು: ಸಚಿವ ಜಮೀರ್
ರಾಜ್ಯದಲ್ಲಿನ ಅನಧಿಕೃತ ಬಡಾವಣೆಗಳ ಹಾವಳಿ ತಡೆಗಟ್ಟಲು ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ನಿಯಮಕ್ಕೆ ತಿದ್ದುಪಡಿ ತರಲು ಚಿಂತನೆ ನಡೆಸಲಾಗುತ್ತಿದೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮಂಗಳವಾರ ಹೇಳಿದ್ದಾರೆ.