ರಾಜ್ಯನೀತಿ ಸಂಹಿತೆ ಜಾರಿ: ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆ ತೀವ್ರ, ಅಗತ್ಯ ದಾಖಲೆಗಳ ಇಟ್ಟುಕೊಳ್ಳುವಂತೆ ಚುನಾವಣಾ ಆಯೋಗ ಸೂಚನೆ
ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಗಿದ್ದು, ಚೆಕ್ ಪೋಸ್ಟ್ ಗಳಲ್ಲ ತಪಾಸಣೆ ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕು ಸಾಗಣೆ ಮಾಡುವವರು ಸೂಕ್ತ ಕಾನೂನು ದಾಖಲೆಗಳನ್ನು ಹೊಂದಿರಬೇಕು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಮಂಗಳವಾರ ಸೂಚನೆ ನೀಡಿದೆ.