legislative council

ವಿಧಾನಪರಿಷತ್: ವಿಪಕ್ಷಗಳ ಪ್ರತಿಭಟನೆ ನಡುವೆ 'ದ್ವೇಷ ಭಾಷಣ' ಮಸೂದೆಗೆ ಮೇಲ್ಮನೆ ಅಂಗೀಕಾರ!
ವಿರೋಧ ಪಕ್ಷಗಳು ಇದನ್ನು 'ಭಾಷಣ ಸ್ವಾತಂತ್ರ್ಯದ ಮೇಲೆ ನೇರ ದಾಳಿ, ರಾಜಕೀಯ ದ್ವೇಷಗಳಿಗೆ ಅಪಾಯಕಾರಿ ಅಸ್ತ್ರ ಎಂದು ಕರೆದು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದವು.

ಕಲಾಪಕ್ಕೆ ಚಕ್ಕರ್.. ಪ್ರತಿಭಟನೆಗೆ ಹಾಜರ್... ವಿಧಾನ ಪರಿಷತ್ ಸದನ ಖಾಲಿ.. ಖಾಲಿ: ವಿಪಕ್ಷ ನಾಯಕರ ತೀವ್ರ ಆಕ್ಷೇಪ
ಇಂದು ಬೆಳಗ್ಗೆ ಸದನದ ಕಲಾಪ ಆರಂಭವಾಗುತ್ತಿದ್ದಂತೆ, ಖಜಾನೆ ಪೀಠಗಳು ಖಾಲಿಯಾಗಿದ್ದವು. ಸಚಿವ ಸತೀಶ್ ಜಾರಕಿಹೊಳಿ ಸರ್ಕಾರದ ಏಕೈಕ ಪ್ರತಿನಿಧಿಯಾಗಿದ್ದರು.

ರಾಜ್ಯದಲ್ಲಿ 'ಹೆಣ್ಣು ಭ್ರೂಣ ಹತ್ಯೆ' ತಡೆಗೆ ಎಲ್ಲಾ ಜಿಲ್ಲೆಗಳಲ್ಲಿ ಪ್ರತ್ಯೇಕ ನೋಡಲ್ ಅಧಿಕಾರಿಗಳ ನೇಮಕ: ದಿನೇಶ್ ಗುಂಡೂರಾವ್
ಬಿಜೆಪಿ ಸದಸ್ಯ ಸಿ.ಟಿ. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಹೆಣ್ಣು ಭ್ರೂಣ ಹತ್ಯೆ ಖಂಡಿತ ನಿಂತಿಲ್ಲ. ನೀವು ಲಿಂಗ ಅನುಪಾತವನ್ನು ನೋಡಿದರೆ, ಬಹಳಷ್ಟು ವ್ಯತ್ಯಾಸವಿದೆ. ಇದು ನಡೆಯುತ್ತಿದೆ ಎಂದು ನಾನು ಒಪ್ಪಿಕೊಳ್ಳುತ್ತೇನೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದ ಎಲ್ಲಾ ತಾಲ್ಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳು 24 ಗಂಟೆಗಳ ಸೇವೆ: ದಿನೇಶ್ ಗುಂಡೂರಾವ್
ಪ್ರಶ್ನೋತ್ತರ ವೇಳೆಯಲ್ಲಿ ಕುಷ್ಟಗಿಯ ಬಿಜೆಪಿ ಶಾಸಕ ದೊಡ್ಡನಗೌಡ ಹೆಚ್ ಪಾಟೀಲ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಗತ್ಯ ಸಂಖ್ಯೆಯ ವೈದ್ಯರು, ತಜ್ಞರು ಮತ್ತು ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ಮೂಲಕ ಈ ಗುರಿ ಸಾಧಿಸಲಾಗುತ್ತಿದೆ ಎಂದರು.

ಪೊಲೀಸ್, ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯ
ಒಲಿಂಪಿಕ್ಸ್, ಪ್ಯಾರಾಲಿಂಪಿಕ್ಸ್, ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ 13 ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೇಮಕಾತಿ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025: ವಿಧಾನ ಪರಿಷತ್ತಿನಲ್ಲೂ ಅಂಗೀಕಾರ
ಈ ವಿಧೇಯಕದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಸಂವಿಧಾನದ 74ನೇ ತಿದ್ದುಪಡಿ ಅಡಿಯಲ್ಲಿ ಬರುವ ಪಾಲಿಕೆಗಳ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂಬ ಅಂಶವನ್ನು ಸ್ಪಷ್ಟಪಡಿಸಲಾಗಿದೆ.

ಮೇಲ್ಮನೆಯಲ್ಲಿ 45 ವರ್ಷ ಪೂರೈಸಿದ ಬಸವರಾಜ ಹೊರಟ್ಟಿ: ಪಕ್ಷಾತೀತವಾಗಿ ಅಭಿನಂದನೆ; ಯಶಸ್ಸಿನ ಗುಟ್ಟು ಬಿಚ್ಚಿಟ್ಟ ಸಭಾಪತಿ
ವಿಧಾನ ಪರಿಷತ್ತಿಗೆ ಶಿಕ್ಷಕರ ಮತ ಕ್ಷೇತ್ರದಿಂದ ಎಂಟು ಬಾರಿ ನಿರಂತರವಾಗಿ ಆಯ್ಕೆಯಾಗಿ 45 ವರ್ಷ ಪೂರೈಸಿದ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ, ಪರಿಷತ್ತಿನ ಸದಸ್ಯರು ಕಲಾಪದ ವೇಳೆ ಮೆಚ್ಚುಗೆ ಸೂಚಿಸಿದರು.

ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಮನಿರ್ದೇಶನ: ಲಖನ್ ಜಾರಕಿಹೊಳಿ ಮತದತ್ತ ಎಲ್ಲರ 'ಕಣ್ಣು'!
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು; ಎನ್‌ಆರ್‌ಐ ಫೋರಂ ಉಪಾಧ್ಯಕ್ಷೆ ಆರತಿ ಕೃಷ್ಣ, ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು, ಮತ್ತು ದಲಿತ ಮುಖಂಡ ಸಾಗರ್ ಅವರ ಹೆಸರು ಫೈನಲ್

ಆಕ್ರಮಣಕಾರಿಯಾಗಿ ಧ್ವನಿ ಎತ್ತುವ ಉತ್ತಮ ವಾಗ್ಮಿಗಳನ್ನು MLC ಗಳಾಗಿ ಆಯ್ಕೆ: ಡಿಕೆಶಿ
"ಪರಿಷತ್ ಅಭ್ಯರ್ಥಿಗಳ ಆಯ್ಕೆ ಕುರಿತು ಈಗಾಗಲೇ ಎರಡು ಸುತ್ತಿನ ಚರ್ಚೆಗಳು ನಡೆದಿವೆ. ಹೆಚ್ಚಿನ ಚರ್ಚೆಯ ಅಗತ್ಯವಿದೆ" ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರೂ ಆಗಿರುವ ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

