legislative council

ವಿಧಾನಪರಿಷತ್ ಚುನಾವಣೆ: ಮಂಡ್ಯದಲ್ಲಿ ರೈತ ಸಂಘ, ಅಂಬರೀಶ್ ಅಭಿಮಾನಿಗಳ ಬೆಂಬಲ ಪಡೆಯಲು ಅಭ್ಯರ್ಥಿಗಳ ಕಸರತ್ತು!
ಮಂಡ್ಯದಲ್ಲಿ ವಿಧಾನಪರಿಷತ್ ಚುನಾವಣಾ ಪ್ರಚಾರದ ಬಿಸಿ ಹೆಚ್ಚುತ್ತಿದ್ದು, ಪ್ರತಿಷ್ಠಿತ ಸ್ಥಾನವನ್ನು ಗೆಲ್ಲಲು ಮೂರು ಪ್ರಮುಖ ರಾಜಕೀಯ ಪಕ್ಷಗಳು ಕರ್ನಾಟಕ ರಾಜ್ಯ ರೈತ ಸಂಘ (ಕೆಆರ್‌ಆರ್‌ಎಸ್) ಮತ್ತು ಅಂಬರೀಶ್ ಅವರ ಅಭಿಮಾನಿಗಳ ಮನ ಸೆಳೆಯಲು ಮುಂದಾಗಿದ್ದಾರೆ.

ವಿಧಾನ ಪರಿಷತ್ ಚುನಾವಣೆ: 17 ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯದ 25 ಸ್ಥಾನಗಳಿಗೆ ನಡೆಯಲಿರುವ ಮೇಲ್ಮನೆ ಚುನಾವಣೆಗೆ ಕಾಂಗ್ರೆಸ್ ಕೊನೆಗೂ ಅಳೆದುತೂಗಿ 17 ಮಂದಿಯ ಹೆಸರನ್ನು ಘೋಷಿಸಿದೆ.

ವಿಧಾನಪರಿಷತ್ ಚುನಾವಣೆ: 20 ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ರಾಜ್ಯ ವಿಧಾನ ಪರಿಷತ್‌ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯು ಶುಕ್ರವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 13-15 ಸ್ಥಾನ ಗೆಲ್ಲುವ ಗುರಿ ಹೊಂದಿದೆ: ಮಹೇಶ್ ತೆಂಗಿನಕಾಯಿ
ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ 13-15 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ ಅವರು ಬುಧವಾರ ಹೇಳಿದ್ದಾರೆ.

ಕಾಂಗ್ರೆಸ್, ಜೆಡಿಸ್ ಸಭಾತ್ಯಾಗದ ನಡುವೆ ಮೇಲ್ಮನೆಯಲ್ಲಿ ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕ ಅಂಗೀಕಾರ
ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಸಭಾತ್ಯಾಗದ ನಡುವೆ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮೀಸಲಾತಿ ಮತ್ತು ಕ್ಷೇತ್ರಗಳ ಪುನರ್ ವಿಂಗಡಣೆ ಅಧಿಕಾರವನ್ನು ಚುನಾವಣಾ ಆಯೋಗದಿಂದ ವಾಪಸ್ ಪಡೆಯುವ ಕರ್ನಾಟಕ ಗ್ರಾಮ...

ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳಾಯ್ತು... ಬಸವರಾಜ ಹೊರಟ್ಟಿಗೆ ಇನ್ನೂ ಸಿಕ್ಕಿಲ್ಲ ಅಧಿಕೃತ ಸರ್ಕಾರಿ ನಿವಾಸ!
ವಿಧಾನ ಪರಿಷತ್ ಸಭಾಪತಿಯಾಗಿ 6 ತಿಂಗಳು ಕಳೆದರೂ ಬಸವರಾಜ ಹೊರಟ್ಟಿಯವರಿಗೆ ಸರ್ಕಾರದ ಅಧಿಕೃತ ನಿವಾಸ ದೊರೆತಿಲ್ಲ. ಇದು ಅಸಮಾಧಾನಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಎಸ್.ಎಲ್. ಧರ್ಮೇಗೌಡ ಆತ್ಮಹತ್ಯೆ, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
ವಿಧಾನ ಪರಿಷತ್ತಿನ ಉಪ ಸಭಾಪತಿ ಹಾಗೂ ಜೆಡಿಎಸ್ ನಾಯಕ ಎಸ್ ಎಲ್ ಧರ್ಮೇಗೌಡರ ಮೃತದೇಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ರೈಲ್ವೆ ಹಳಿ ಪಕ್ಕ ಪತ್ತೆಯಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಹ ಸಿಕ್ಕಿದೆ.

ಮೇಲ್ಮನೆ ಗದ್ದಲ: ಪರಿಷತ್ ಕಾರ್ಯದರ್ಶಿಗೆ ಶೋಕಾಸ್ ನೋಟೀಸ್; ಸಮಗ್ರ ವರದಿ ಸಲ್ಲಿಸುವಂತೆ ಸಭಾಪತಿ ಸೂಚನೆ
ಸದನ ಕಾರ್ಯಕಲಾಪ ದಾರಿ ತಪ್ಪಲು ಮತ್ತು ಕರ್ತವ್ಯ ನಿರ್ವಹಣೆಯಲ್ಲಿ ಅತೀವ ನಿರ್ಲಕ್ಷ್ಯ ತೋರಿರುವ ವಿಧಾನಪರಿಷತ್ ಕಾರ್ಯದರ್ಶಿಯವರಿಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

ಕಲಾಪದಲ್ಲಿ ಭಯದ ವಾತಾವರಣವಿತ್ತು: ರಾಜ್ಯಪಾಲರಿಗೆ ಸಭಾಪತಿ ವರದಿ
ಮಂಗಳವಾರ ವಿಧಾನ ಪರಿಷತ್ತಿನಲ್ಲಿ ನಡೆದ ಘಟನಾವಳಿಗಳ ವಿವರವನ್ನು ವಿಧಾನಪರಿಷತ್ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ರಾಜ್ಯಪಾಲರಿಗೆ ವರದಿ ಸಲ್ಲಿಸಿದ್ದಾರೆ.

