Leopard

ಚಿರತೆ ಕಾಟ: ಬೆಂಗಳೂರು ವಿವಿ ವಿದ್ಯಾರ್ಥಿಗಳು, ಅಧ್ಯಾಪಕರಿಗೆ ಮುನ್ನೆಚ್ಚರಿಕೆಯ ಸೂಚನೆ
ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡ ಬಗ್ಗೆ ಮಾಧ್ಯಮಗಳ ವರದಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು, ಅಧ್ಯಾಪಕರು ಮತ್ತಿತರ ಸಿಬ್ಬಂದಿಗೆ ಬೆಂಗಳೂರು ವಿಶ್ವವಿದ್ಯಾಲಯ ಮುನ್ನೆಚ್ಚರಿಕೆಯ ಸೂಚನೆ ನೀಡಿದೆ.

ತುಮಕೂರು: ಬೇಟೆ ಅರಸಿ ಬಂದ ಚಿರತೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವು!
ಆಹಾರ ಹುಡುಕಿಕೊಂಡು ಬಂದ ಚಿರತೆಯೊಂದು ವಿದ್ಯುತ್ ಟ್ರಾನ್ಸ್ ಫಾರ್ಮರ್ ಗೆ ಸಿಲುಕಿ ಸಾವನ್ನಪ್ಪಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.

ಮೈಸೂರು ಬಳಿ ಮತ್ತೆ ಕಾಣಿಸಿಕೊಂಡ ಚಿರತೆ; ತಾಯೂರು ಗ್ರಾಮದಲ್ಲಿ ದೃಶ್ಯ ಮೊಬೈಲ್‌ನಲ್ಲಿ ಸೆರೆ
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚಿರತೆ ಹಾವಳಿ ಮುಂದುವರೆದಿದ್ದು, ನಗರದ ತಿ.ನರಸೀಪುರ ತಾಲ್ಲೂಕಿನ ಸುತ್ತಮುತ್ತಲ ಗ್ರಾಮಗಳಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದೆ.

ಮೈಸೂರಿನಲ್ಲಿ ಚಿರತೆ ದಾಳಿಗೆ ಯುವತಿ ಸಾವು: ಶೂಟೌಟ್ ಗೆ ಸರ್ಕಾರ ಆದೇಶ; 7.5 ಲಕ್ಷ ರೂ. ಪರಿಹಾರ ಘೋಷಣೆ, ಉದ್ಯೋಗ ಭರವಸೆ
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನಲ್ಲಿ ಒಂದೇ ತಿಂಗಳಲ್ಲಿ ಚಿರತೆ ಎರಡು ಮಂದಿಯನ್ನು ಬಲಿತೆಗೆದುಕೊಂಡ ನಂತರ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ ಕಂಡಲ್ಲಿ ಗುಂಡಿಕ್ಕಿ ಕೊಲ್ಲುವ ಆದೇಶ ಹೊರಡಿಸಿದ್ದು, ಕಾರ್ಯಾಚರಣೆಗಿಳಿದಿದೆ.

ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು
ಐದು ವರ್ಷದ ಗಂಡು ಚಿರತೆಯೊಂದು ಗುರುವಾರ ಭೂತಪುರ ಮಂಡಲದ ತಾಟಿಕೊಂಡ ಗ್ರಾಮದ ಬಳಿ ಹೈದರಾಬಾದ್-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ44ರ ಪಕ್ಕದಲ್ಲಿ ಶವವಾಗಿ ಪತ್ತೆಯಾಗಿದೆ.

ಮೈಸೂರು: ಟಿ ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಂದು ಬಲಿ; ಕಾಲೇಜು ವಿದ್ಯಾರ್ಥಿನಿ ಸಾವು
ಮೈಸೂರು ಜಿಲ್ಲೆಯ ಟಿ ನರಸೀಪುರದ ತಾಲೂಕಿನಲ್ಲಿ ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ.ಎಲ್.ಹುಂಡಿ ಗ್ರಾಮದ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ ಚಿರತೆ ಮತ್ತೊಂದು ಬಲಿಯನ್ನು ಪಡೆದಿದೆ.

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಮರಿ ಸಾವು
ಬೆಂಗಳೂರು ರೈಲ್ವೆ ವಿಭಾಗದಲ್ಲಿ ಚಲಿಸುತ್ತಿದ್ದ ರೈಲಿಗೆ ಸಿಲುಕಿ ತೀವ್ರವಾಗಿ ಗಾಯಗೊಂಡಿದ್ದ ಎರಡು ವರ್ಷದ ಗಂಡು ಚಿರತೆಯೊಂದು ಮಂಗಳವಾರ ಮುಂಜಾನೆ ಸಾವನ್ನಪ್ಪಿದೆ.

ಮಂಡ್ಯ: ಕೆಆರ್ ಎಸ್ ಬೃಂದಾವನದಲ್ಲಿ ಚಿರತೆ ಪ್ರತ್ಯಕ್ಷ! ಪ್ರವಾಸಿಗರಲ್ಲಿ ಆತಂಕ
ಶ್ರೀರಂಗಪಟ್ಟಣ ತಾಲೂಕಿನ ಕೆ. ಆರ್. ಬೃಂದಾವನದಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಪ್ರವಾಸಿಗರಲ್ಲಿ ನಡುಕು ಹುಟ್ಟಿಸಿದೆ. ಭಾನುವಾರ ಸಂಜೆ 6 ಗಂಟೆ ಸಮಯದಲ್ಲಿ ಬೃಂದಾವನದ ಮೀನುಗಾರಿಕೆ ಇಲಾಖೆಯ ಅಕ್ಟೇರಿಯಂ ಬಳಿಯ ರಾಯಲ್ ಆರ್ಕಿಡ್ ಹೋಟೆಲ್ ಕಡೆ ಚಿರತೆ ಹೋಗುತ್ತಿರುವುದು ಭದ್ರತಾ ಸಿಬ್ಬಂದಿಯ ಗಮನಕ್ಕೆ ಬಂದಿದೆ.

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೃತ ಚಿರತೆ ಪತ್ತೆ: ಅರಣ್ಯ ಇಲಾಖೆ ಅಧಿಕಾರಿಗಳಿಂದ ತನಿಖೆ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ.

