LET terrorist

ಜಮ್ಮು-ಕಾಶ್ಮೀರದ ಶೋಪಿಯಾನ್ ನಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರ ಹತ್ಯೆ
ಲಷ್ಕರ್ ಇ ತೊಯ್ಬಾ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಮಂಗಳವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೃತಪಟ್ಟಿದ್ದಾರೆ.

26/11 ರ ದಾಳಿಗೆ ಉಗ್ರ ತರಬೇತಿ ನೀಡಿದ್ದ ಎಲ್ಇಟಿ ಭಯೋತ್ಪಾದಕ ಪಾಕ್ ಜೈಲಿನಲ್ಲಿ ಸಾವು!
2008 ರಲ್ಲಿ ಮುಂಬೈ ಉಗ್ರ ದಾಳಿಗೆ ಭಯೋತ್ಪಾದಕರಿಗೆ ತರಬೇತಿ ನೀಡಿದ್ದ ಎಲ್ಇಟಿ ಭಯೋತ್ಪಾದಕ ಹಫೀಜ್ ಅಬ್ದುಲ್ ಸಲಾಮ್ ಭುಟ್ಟಾವಿ ಪಾಕಿಸ್ತಾನದ ಜೈಲಿನಲ್ಲಿ ಸಾವನ್ನಪ್ಪಿದ್ದಾರೆ.

ಜಮ್ಮು-ಕಾಶ್ಮೀರ: ಎಲ್ಇಟಿ ಉಗ್ರ ಆದಿಲ್ ಅಹ್ ದಾರ್ ಬಂಧನ
ಜಮ್ಮು ಮತ್ತು ಕಾಶ್ಮೀರದ ಮೊಹಂದಪುರದಲ್ಲಿ ಭಾನುವಾರ ಭಾರತೀಯ ಸೇನಾಪಡೆ ಪಾಕಿಸ್ತಾನ ಮೂಲದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಭಯೋತ್ಪಾದಕನನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ: 3 ಎಲ್ ಇಟಿ ಉಗ್ರರು ಹತ
ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ರಾತ್ರಿಯಿಂದ ಭಾನುವಾರ ನಸುಕಿನ ಜಾವದವರೆಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರದ ಬುದ್ಗಾಮ್ ನಲ್ಲಿ ಎಲ್ ಇಟಿ ಉಗ್ರನ ಬಂಧನ: ಶಸಾಸ್ತ್ರ ವಶ
ಜಮ್ಮು-ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿ ಲಷ್ಕರ್ -ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಭದ್ರತಾ ಪಡೆಗಳು ಬಂಧಿಸಿದ್ದು, ಆತನಿಂದ ಶಸಾಸ್ತ್ರಗಳನ್ನು ವಶ ಪಡಿಸಿಕೊಂಡಿವೆ ಎಂದು ಪೊಲೀಸರು ಶನಿವಾರ ಹೇಳಿದ್ದಾರೆ.

ಪುಲ್ವಾಮದಲ್ಲಿ ಭಾರತೀಯ ಸೇನಾಪಡೆಯ ಭರ್ಜರಿ ಬೇಟೆ: 5 ಎಲ್ಇಟಿ ಉಗ್ರರ ಬಂಧನ
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೇನಾಪಡೆ ಶನಿವಾರ ಭರ್ಜರಿ ಬೇಟೆ ನಡೆಸಿದ್ದು, ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಐವರು ಭಯೋತ್ಪಾದಕರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಶ್ರೀನಗರದಲ್ಲಿ ಜಮ್ಮು-ಕಾಶ್ಮೀರ ಪೊಲೀಸರಿಂದ ಎಲ್ ಇಟಿ ಉಗ್ರರ ಅಡಗುತಾಣ ಪತ್ತೆ
ಶ್ರೀನಗರ ಜಿಲ್ಲೆಯ ರಾಜೌರಿಕಾದಲ್ ಪ್ರದೇಶದಲ್ಲಿ ಭಯೋತ್ಪಾದಕ ಅಡಗು ತಾಣವೊಂದನ್ನು ಪತ್ತೆ ಹಚ್ಚಲಾಗಿದ್ದು, ಇಬ್ಬರು ಉಗ್ರರ ಸಹಚರರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಶ್ರೀನಗರದಲ್ಲಿ ಎನ್'ಕೌಂಟರ್: ಎಲ್ಇಟಿ ಟಾಪ್ ಕಮಾಂಡರ್ ಅಬ್ರಾರ್ ಹತ್ಯೆ
ಶ್ರೀನಗರದಲ್ಲಿ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಅಬ್ರಾರ್ ಎಂಬಾತನನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರ: ಕುಲ್ಗಾಂನಲ್ಲಿ ಭದ್ರತಾ ಪಡೆಗಳಿಗೆ ಇಬ್ಬರು ಎಲ್‌ಇಟಿ ಉಗ್ರರು ಶರಣು
ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಟೋಂಗ್‌ಡೌನು ಎಂಬಲ್ಲಿ ಭದ್ರತಾ ಪಡೆಗಳೊಂದಿಗೆ ಮುಖಾಮುಖಿಯಾದ ಸಂದರ್ಭದಲ್ಲಿ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಉಗ್ರ ಸಂಘಟನೆಗೆ ಸೇರಿದ ಇಬ್ಬರು ಭಯೋತ್ಪಾದಕರು, ಶಸ್ತ್ರ ತ್ಯಾಗ ಮಾಡಿ ಶರಣಾಗತರಾಗಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.

