letter

ರೈತರು, ಕಾರ್ಮಿಕರ ಪ್ರತಿಭಟನೆ: ಮಾತುಕತೆಗೆ ಆಹ್ವಾನಿಸಿ ಸಮಸ್ಯೆ ಬಗೆಹರಿಸಲು ಸಿದ್ದರಾಮಯ್ಯ ಆಗ್ರಹ
ರಾಜ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ರೈತರು ಮತ್ತು ಕಾರ್ಮಿಕರು ಚಳವಳಿ, ಪ್ರತಿಭಟನೆ ಹಾಗೂ ಸತ್ಯಾಗ್ರಹಗಳಲ್ಲಿ ತೊಡಗಿದ್ದಾರೆ. ಪ್ರತಿಭಟನೆಯಲ್ಲಿ ನಿರತರಾಗಿರುವ ರೈತರು, ಕಾರ್ಮಿಕರನ್ನು ಮಾತುಕತೆಗೆ ಕರೆದು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

'ಬೇರೆ ರೈತ ಸಂಘಟನೆಗಳ ಜೊತೆ ಪರ್ಯಾಯ ಮಾತುಕತೆ ನಡೆಸುವುದನ್ನು ನಿಲ್ಲಿಸಿ': ಪ್ರತಿಭಟನಾ ನಿರತ ರೈತ ಮುಖಂಡರಿಂದ ಕೇಂದ್ರಕ್ಕೆ ಪತ್ರ
ಕೇಂದ್ರ ಸರ್ಕಾರದ ನೂತನ ಕೃಷಿ ಮಸೂದೆಗಳನ್ನು ವಿರೋಧಿಸಿ ಪ್ರತಿಭಟನೆ ಮುಂದುವರಿಸಿರುವ ಸುಮಾರು 40 ರೈತ ಸಂಘಟನೆಗಳು ಬುಧವಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ನೂತನ ಕೃಷಿ ಮಸೂದೆ ಬಗ್ಗೆ ಇತರ ರೈತ ಸಂಘಟನೆಗಳೊಂದಿಗೆ ಪರ್ಯಾಯ ಮಾತುಕತೆ ನಡೆಸುವುದನ್ನು ನಿಲ್ಲಿಸುವಂತೆ ಒತ್ತಾಯಿಸಿವೆ.

ರಾಜ್ಯದಲ್ಲಿ ಪ್ರಜಾಪ್ರಭುತ್ವ ಅಸ್ಥಿತ್ವದಲ್ಲಿದೆಯೇ? ವಿಪಕ್ಷ ನಾಯಕನ ಪತ್ರಗಳಿಗೆ ಉತ್ತರಿಸುವ ಸೌಜನ್ಯವಿಲ್ಲವೇ?: ಸಿದ್ದರಾಮಯ್ಯ
ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರಿಗೆ ಮೂರು ಬಾರಿ ಪತ್ರ ಬರೆದೆ. ಈವರೆಗೂ ಉತ್ತರ ಬರಲಿಲ್ಲ. ವಿರೋಧ ಪಕ್ಷ ನಾಯಕನ ಪತ್ರಗಳಿಗೆ ಉತ್ತರ ನೀಡುವ ಸೌಜನ್ಯ ಇವರಿಗಿಲ್ಲ ’ಎಂದೂ ಕಿಡಿಕಾರಿದರು.

ಕಾಫಿ ಬೆಳೆಗಾರರಿಗೆ ನೆರವು ಕೋರಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗೆ ಸಂಸದೆ ಶೋಭಾ ಕರಂದ್ಲಾಜೆ ಪತ್ರ!
ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕಾಫಿ ಬೆಳೆಗಾರರಿಗೆ ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಬೇಕೆಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಸಂಸದೆ ಶೋಭಾ ಕರಂದ್ಲಾಜೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಅಕ್ಷಯ ಪಾತ್ರ ಪ್ರತಿಷ್ಠಾನವನ್ನು ಆಡಳಿತಾಧಿಕಾರಿಗೆ ವಹಿಸಿ: ಲಹರ್ ಸಿಂಗ್
ಅಕ್ಷಯ ಪಾತ್ರ ಪ್ರತಿಷ್ಠಾನದಲ್ಲಿ ನಡೆದಿದೆ ಎನ್ನಲಾದ ಅಧಿಕಾರ, ಸಂಪನ್ಮೂಲ ದುರುಪಯೋಗ ಮತ್ತು ಲೆಕ್ಕಪತ್ರದಲ್ಲಿ ಬದಲಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತಿಷ್ಠಾನವನ್ನು ಆಡಳಿತಾಧಿಕಾರಿಗೆ ವಹಿಸಬೇಕೆಂದು ಬಿಜೆಪಿ ಎಂಎಲ್ ಸಿ ಲಹರ್ ಸಿಂಗ್ ಸಿರೋಯ ಹೇಳಿದ್ದಾರೆ.

ಅಮೆರಿಕದ ನೂತನ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಗೆ ತಮಿಳಿನಲ್ಲಿ ಪತ್ರ ಬರೆದ ಡಿಎಂಕೆ ನಾಯಕ!
ಅಮೆರಿಕದ ನೂತನ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಕ್ಕೆ ಭಾರತೀಯ ಮೂಲದ ಕಮಲಾ ಹ್ಯಾರಿಸ್ ಅವರಿಗೆ ಡಿಎಂಕೆ ಅಧ್ಯಕ್ಷ ಎಂ. ಕೆ. ಸ್ಟಾಲಿನ್ ತಮಿಳಿನಲ್ಲಿ ಪತ್ರ ಬರೆದಿದ್ದು, ತಮಿಳುನಾಡಿನೊಂದಿಗೆ ಆಕೆಯ ನಂಟನ್ನು ನೆನಪು ಮಾಡಿದ್ದಾರೆ.

ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಕಡ್ಡಾಯ: ಸ್ಪಷ್ಟನೆಗಾಗಿ ಆರೋಗ್ಯ ಇಲಾಖೆಗೆ ಪತ್ರ ಬರೆದ ಬಿಬಿಎಂಪಿ
ಕಾರಿನಲ್ಲಿ ಒಬ್ಬರೇ ಪ್ರಯಾಣಿಸಿದರೂ ಮಾಸ್ಕ್ ಬಳಕೆ ಕಡ್ಡಾಯ ಮಾಡಲಾಗಿದ್ದು, ಇದೀಗ ಸಾರ್ವಜನಿಕರಿಂದ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ಕೋರಿ ಆರೋಗ್ಯ ಇಲಾಖೆಗೆ ಬಿಬಿಎಂಪಿ ಪತ್ರ ಬರೆದಿದೆ.

ರಾಜ್ಯಕ್ಕೆ ರೂ.10,000 ಕೋಟಿ ವಿಶೇಷ ನೆರೆ ಪ್ಯಾಕೇಜ್ ನೀಡಿ: ಪ್ರಧಾನಿ ಮೋದಿಗೆ ಸಿಎಂ ಯಡಿಯೂರಪ್ಪ ಪತ್ರ
ರಾಜ್ಯದಲ್ಲಿ ಕಳೆದ 2 ತಿಂಗಳಿಂದ ಉಂಟಾಗಿರುವ ಅತಿವೃಷ್ಟಿ ಹಾಗೂ ಪ್ರವಾಹ ಪರಿಸ್ಥಿತಿಯಿಂದ ಒಟ್ಟಾರೆ ರೂ.21,609 ಕೋಟಿಗಳಷ್ಟು ನಷ್ಟವುಂಟಾಗಿದ್ದು, ತುರ್ತು ಪರಿಹಾರವಾಗಿ ರೂ. 10 ಸಾವಿರ ಕೋಟಿ ವಿಶೇಷ ಪ್ಯಾಕೇಜ್ ನೀಡುವಂತೆ ಕೋರಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪತ್ರ ಬರೆದಿದ್ದಾರೆಂದು ತಿಳಿದುಬಂದಿದೆ.

ಸಗಣಿಯಿಂದ ಮಾಡಿದ ಚಿಪ್ ಮೊಬೈಲ್ ರೇಡಿಯೇಷನ್ ಕಡಿಮೆ ಮಾಡುತ್ತದೆ ಎಂಬುದನ್ನು ಸಾಬೀತುಪಡಿಸಿ: ವಿಜ್ಞಾನಿಗಳ ಸವಾಲು
ದನದ ಸಗಣಿಯಿಂದ ಮಾಡಿದ ಚಿಪ್ ಮೊಬೈಲ್ ರೇಡಿಯೇಷನ್'ನ್ನು ಕಡಿಮೆ ಮಾಡುತ್ತದೆ ಎಂಬ ನಿಮ್ಮ ಹೇಳಿಕೆಯನ್ನು ಸಾಬೀತುಪಡಿಸಿ ಎಂದು 600ಕ್ಕೂ ಹೆಚ್ಚು ವಿಜ್ಞಾನಿಗಳು ರಾಷ್ಟ್ರೀಯ ಕಾಮಧೇನು ಆಯೋಗದ ಅಧ್ಯಕ್ಷ ವಲ್ಲಭ ಭಾಯಿ ಕಥಿರಿಯಾ ಅವರಿಗೆ ಪತ್ರ ಬರೆದಿದ್ದಾರೆ.

