Life imprisonment

ಮುಂಬೈ ಹೊಟೇಲ್ ಉದ್ಯಮಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ
2001ರಲ್ಲಿ ಮುಂಬೈನ ಹೊಟೇಲ್ ಉದ್ಯಮಿ ಜಯಾ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ವಿಚಾರವಾದಿ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ ಶಿಕ್ಷೆ, ಮೂವರ ಖುಲಾಸೆ
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಶುಕ್ರವಾರ ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದ್ದು, ಮೂವರು ಆರೋಪಿಗಳನ್ನು ಖುಲಾಸೆಗೊಳಿಸಿದೆ.

ನಕಲಿ ಗನ್ ಲೈಸೆನ್ಸ್ ಪ್ರಕರಣ: ಗ್ಯಾಂಗ್ ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ
ನಕಲಿ ಗನ್ ಲೈಸೆನ್ಸ್ ಪ್ರಕರಣದಲ್ಲಿ ಗ್ಯಾಂಗ್ ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿಗೆ ವಾರಣಾಸಿಯ ವಿಶೇಷ ನ್ಯಾಯಾಲಯ ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಬೆಂಗಳೂರಿನಲ್ಲಿ ಚರ್ಚ್ ಸ್ಫೋಟ ಪ್ರಕರಣ; ಅಪರಾಧಿಗೆ ಎರಡು ವಾರಗಳ ಕಾಲ ಪೆರೋಲ್ ನೀಡಿದ ಹೈಕೋರ್ಟ್
ಚರ್ಚ್ ಸ್ಫೋಟ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಗೆ ಕರ್ನಾಟಕ ಹೈಕೋರ್ಟ್ ಎರಡು ವಾರಗಳ ಕಾಲ ಪೆರೋಲ್ ನೀಡಿದೆ. 2000ರ ಜುಲೈನಲ್ಲಿ ಬೆಂಗಳೂರಿನಲ್ಲಿ ನಡೆದ ಚರ್ಚ್ ಸ್ಫೋಟ ಪ್ರಕರಣದ ಅಪರಾಧಿಗಳಲ್ಲಿ ಮೊಹಮ್ಮದ್ ಅಖಿಲ್ ಒಬ್ಬಾತ.

ಪರ್ತಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ: 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಪತ್ರಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಲೈಂಗಿಕ ಕಾರ್ಯಕರ್ತೆಯ ಹತ್ಯೆ: ಮಂಡ್ಯದ ವ್ಯಕ್ತಿಗೆ ಜೀವಾವಧಿ, ಅಲ್ಲದೇ 7 ವರ್ಷ ಕಠಿಣ ಜೈಲು ಶಿಕ್ಷೆ!
ದಶಕದ ಹಿಂದೆ ಮೈಸೂರಿನಲ್ಲಿ ಲೈಂಗಿಕ ಕಾರ್ಯಕರ್ತೆಯೊಬ್ಬರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಕೊಮ್ಮೇರಹಳ್ಳಿಯ ವ್ಯಕ್ತಿಯೊಬ್ಬನಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ಮತ್ತು 30,000 ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ಕೊಲೆ ಮಾಡುವ ಮೊದಲು ಆಕೆಯನ್ನು ದರೋಡೆ ಮಾಡಿದ್ದಕ್ಕಾಗಿ ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿದೆ.

ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ; ಶಿಕ್ಷಕನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ನ್ಯಾಯಾಲಯ!
ಅಪ್ರಾಪ್ತ ಬಾಲಕನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಶಿಕ್ಷಕನಿಗೆ ಮಂಗಳೂರು ತ್ವರಿತಗತಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

ಕೌಟುಂಬಿಕ ದೌರ್ಜನ್ಯ: ಶಿಕ್ಷೆಗೆ ಗುರಿಯಾಗಿಯಾಗಿಸಿದ್ದ ಪತ್ನಿ ಮೇಲೆ ದ್ವೇಷ, ಜೈಲಿನಿಂದ ಬರುತ್ತಿದ್ದಂತೆಯೇ ಕತ್ತು ಕೊಯ್ದು ಹತ್ಯೆ!
ಕುಡಿದು ಬಂದು ಚಿತ್ರಹಿಂಸೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಜೈಲು ಶಿಕ್ಷೆಗೊಳಗಾಗುವಂತೆ ಮಾಡಿದ್ದ ಪತ್ನಿ ಮೇಲೆ ದ್ವೇಷ ಬೆಳೆಸಿಕೊಂಡಿದ್ದ ಪತಿಯೊಬ್ಬ, ಜೈಲಿನಿಂದ ಹೊರಬರುತ್ತಿದ್ದಂತೆಯೇ ಕತ್ತು ಕೊಯ್ದು ಭೀಕರವಾಗಿ ಹತ್ಯೆ ಮಾಡಿರುವ ಘಟನೆಯೊಂದು ನಗರದಲ್ಲಿ ನಡೆದಿದೆ.

ರಾಯ್ ಹತ್ಯೆ ಪ್ರಕರಣ: ಮುಖ್ತಾರ್ ಅನ್ಸಾರಿಗೆ ಜೀವಾವಧಿ ಶಿಕ್ಷೆ
1991ರಲ್ಲಿ ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಪ್ರಮುಖ ಆರೋಪಿ ಮುಕ್ತಾರ್ ಅನ್ಸಾರಿಗೆ ವಾರಣಾಸಿಯ ಎಂಪಿ, ಎಂಎಲ್ಎ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ.

