Life Sentence

ವಿಚಾರವಾದಿ ದಾಭೋಲ್ಕರ್ ಹತ್ಯೆ ಪ್ರಕರಣ: ಸಚಿನ್ ಅಂದುರೆಗೆ ಜಾಮೀನು; ಜೀವಾವಧಿ ಶಿಕ್ಷೆ ಅಮಾನತು
ವಿಚಾರವಾದಿ ಗೋವಿಂದ್ ಪನ್ಸಾರೆ ಹತ್ಯೆ ಪ್ರಕರಣದಲ್ಲೂ ಸಚಿನ್ ಅಂದುರೆಗೆ ಈಗಾಗಲೇ ಜಾಮೀನು ದೊರೆತಿತ್ತು. ಆದರೆ, ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಜಾಮೀನು ಸಿಗದ ಹಿನ್ನೆಲೆಯಲ್ಲಿ ಅವರು ಜೈಲಿನಲ್ಲೇ ಮುಂದುವರಿದಿದ್ದರು.

ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ; ಪ್ರಜ್ವಲ್ ರೇವಣ್ಣಗೆ ಸಮವಸ್ತ್ರ, ಕೈದಿ ಸಂಖ್ಯೆ ನೀಡಿದ ಜೈಲು ಸಿಬ್ಬಂದಿ
ಮಾಜಿ ಪ್ರಧಾನಿ ಮತ್ತು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರ ಮೊಮ್ಮಗ ಪ್ರಜ್ವಲ್ ಶನಿವಾರ ತಪ್ಪಿತಸ್ಥರೆಂದು ಸಾಬೀತಾದ ನಂತರ ಜೈಲಿನಲ್ಲಿ ತಮ್ಮ ಮೊದಲ ರಾತ್ರಿಯನ್ನು ಕಳೆದಿದ್ದಾರೆ.

ಬೆಂಗಳೂರು: ಭಾವಿ ಪತ್ನಿಯಿಂದ ಟೆಕ್ಕಿ ಹತ್ಯೆ ಪ್ರಕರಣ; ಕ್ಷಮಾದಾನ ಕೋರಲು ಶುಭಾಗೆ ಅವಕಾಶ; ಅಪರೂಪದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್
ಶುಭಾ ಹಾಗೂ ಪ್ರಕರಣ ಇತರೆ ಮೂವರು ಆರೋಪಿಗಳು ಸಂಚು ರೂಪಿಸಿ ಗಿರೀಶ್ ಅವರನ್ನು ಕೊಲೆ ಮಾಡಿರುವುದು ಎಲ್ಲ ಸಾಕ್ಷ್ಯಧಾರಗಳಿಂದ ಸಾಬೀತಾಗಿರುವುದರಿಂದ ಆರೋಪಿಗಳಿಗೆ ಹೈಕೋರ್ಟ್ ವಿಧಿಸಿರುವ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿಯಲಾಗುತ್ತಿದೆ.

ಪತ್ನಿಯ ಶೀಲ ಶಂಕಿಸಿ, ವಕೀಲನ ಹತ್ಯೆಗೈದಿದ್ದ ಉದ್ಯಮಿ ರಾಜೇಶ್ ಗೌಡಗೆ ಜೀವಾವಧಿ ಶಿಕ್ಷೆ!
ನೆಲಮಂಗಲದ ವಕೀಲ ಕೇಶವಮೂರ್ತಿ ಅವರ ಪುತ್ರ ವಕೀಲ ಅಮಿತ್ ಕೇಶವಮೂರ್ತಿ ಕೊಲೆ ಪ್ರಕರಣದಲ್ಲಿ ದೋಷಿಯಾಗಿರುವ ಉದ್ಯಮಿ ರಾಜೇಶ್ ಗೌಡಗೆ ಜೀವಾವಧಿ ಶಿಕ್ಷೆ ಮತ್ತು ರೂ.1 ಲಕ್ಷ ದಂಡ ವಿಧಿಸಿ ಬೆಂಗಳೂರಿನ ಗ್ರಾಮಾಂತರ ನ್ಯಾಯಾಲಯ ಆದೇಶ ಪ್ರಕಟಿಸಿದೆ.

ಗುಜರಾತ್: ಜೀವಾವಧಿ ಶಿಕ್ಷೆ ವಿಧಿಸಿದಕ್ಕೆ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಅಪರಾಧಿ
ಬಾಲಕಿಯ ಅತ್ಯಾಚಾರ ಮತ್ತು ಹತ್ಯೆ ಹಿನ್ನೆಲೆ ಯುವಕನಿಗೆ ಜೀವಾವಧಿ ಶಿಕ್ಷೆ ವಿಧಿಸುತ್ತಿದ್ದಂತೆ ಕುಪಿತಗೊಂಡ ಯುವಕ ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಘಟನೆ ಸೂರತ್ ನ್ಯಾಯಾಲಯದಲ್ಲಿ ನಡೆದಿದೆ.

ಹಾವಿನಿಂದ ಕಚ್ಚಿಸಿ ಪತ್ನಿಯ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ
ಅಂಗವಿಕಲೆಯಾಗಿದ್ದ ಪತ್ನಿ ಉತ್ರಾ ಅವರನ್ನು ಕೊಲೆ ಮಾಡಿದ ಆರೋಪ ಹೊತ್ತಿದ್ದ ಪತಿ ಸೂರಜ್ ಮೇಲಿನ ಎಲ್ಲಾ ಆರೋಪಗಳು ಸಾಬೀತಾಗಿದ್ದು, ಹಾವು ಕಚ್ಚಿಸಿ ಪತ್ನಿ ಕೊಲೆ ಮಾಡಿರುವುದು ದೃಢಪಟ್ಟಿದೆ. ಈ ಪ್ರಕರಣದಲ್ಲಿ ದೋಷಿಯಾಗಿರುವ ಸೂರಜ್‌ಗೆ ನ್ಯಾಯಾಲಯವು ಬುಧವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ಸಿಸ್ಟರ್ ಅಭಯಾ ಕೊಲೆ ಪ್ರಕರಣ: ತಪ್ಪಿತಸ್ಥರಾದ ಫಾದರ್ ಥಾಮಸ್, ಸೆಫಿಗೆ ಜೀವಾವಧಿ ಶಿಕ್ಷೆ
ಕೇರಳ ರಾಜ್ಯದಲ್ಲಿ ತೀವ್ರ ಕೋಲಾಹಲ ಸೃಷ್ಟಿಸಿದ್ದ ಸಿಸ್ಟರ್ ಅಭಯಾ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿರುವನಂತಪುರಂ ಸಿಬಿಐ ವಿಶೇಷ ನ್ಯಾಯಾಲಯ ಬುಧವಾರ ಶಿಕ್ಷೆ ಪ್ರಕಟಿಸಿದ್ದು, ತಪ್ಪಿತಸ್ಥರಾದ ಫಾದರ್ ಥಾಮಸ್, ಸಿಸ್ಟರ್ ಸೆಫಿ ಇಬ್ಬರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ.

ಜ್ಞಾನಭಾರತಿ ಸಾಮೂಹಿಕ ಅತ್ಯಾಚಾರ ಪ್ರಕರಣ: 7 ಮಂದಿಗೆ ಜೀವಾವಧಿ ಶಿಕ್ಷೆ ಕಾಯಂ
ಜ್ಞಾನಭಾರತಿ ಆವರಣದಲ್ಲಿ 2012ರಲ್ಲಿ ನಡೆದಿದ್ದ ಕಾನೂನು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ದೋಷಿಗಳಿಗೆ ಅಧೀನ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ.

ಚಾಮರಾಜನಗರ : ಬಂಜೆ ಎಂದು ಸೊಸೆಗೆ ಬೆಂಕಿ ಹಚ್ಚಿದ ಪಾಪಿಗಳಿಗೆ ಜೀವಾವಧಿ ಶಿಕ್ಷೆ
ಬಂಜೆ ಎಂದು ಸೊಸೆಗೆ ಬೆಂಕಿ ಹಚ್ಚಿ ಕೊಲೆ ಮಾಡಿದ್ದ ಅಪರಾಧಿಗಳಿಗೆ ಜಿಲ್ಲಾ ಸೆಷನ್ಸ್ ಮತ್ತು ಪ್ರಧಾನ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

