lightning

ಬೆಂಗಳೂರು: ಸಿಡಿಲು ಬಡಿದು ಮಹಿಳೆ, 48 ಕುರಿಗಳು ಸಾವು; ಜಿಲ್ಲಾಡಳಿತದಿಂದ 6 ಲಕ್ಷ ರೂ. ಪರಿಹಾರ ಘೋಷಣೆ!
ಸಿಡಿಲು ಬಡಿದು ಮಹಿಳೆ ಹಾಗೂ 48ಕ್ಕೂ ಹೆಚ್ಚು ಕುರಿಗಳು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ನಡೆದಿದೆ.

ಶಿವಮೊಗ್ಗ: ಭದ್ರಾವತಿಯಲ್ಲಿ ಸಿಡಿಲು ಬಡಿದು ಸಹೋದರರಿಬ್ಬರ ಸಾವು
ಶಿವಮೊಗ್ಗ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಬುಧವಾರ ನಡೆದಿದೆ. ಭದ್ರಾವತಿ ಪಟ್ಟಣದ ಹುಣಸಕಟ್ಟೆ ಜಂಕ್ಷನ್‌ನಲ್ಲಿ ಈ ಘಟನೆ ನಡೆದಿದೆ. ಮೃತರನ್ನು 32 ವರ್ಷದ ಬೀರು (ಎಸ್ ಬೀರೇಶ್) ಮತ್ತು 30 ವರ್ಷದ ಎಸ್ ಸುರೇಶ್ ಎಂದು ಗುರುತಿಸಲಾಗಿದೆ.

ಮಧ್ಯ ಪ್ರದೇಶದಲ್ಲಿ ಸಿಡಿಲು ಬಡಿದು ನಾಲ್ವರು ಸಾವು
ಮಧ್ಯ ಪ್ರದೇಶದ ವಿವಿಧ ಸ್ಥಳಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಓರ್ವ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಗುಜರಾತ್ ನಲ್ಲಿ ಅಕಾಲಿಕ ಮಳೆ: ಸಿಡಿಲು ಬಡಿದು 24 ಮಂದಿ ದಾರುಣ ಸಾವು
ಗುಜರಾತಿನಲ್ಲಿ ಸುರಿದ ಅಕಾಲಿಕ ಮಳೆಯ ನಂತರ ಸಿಡಿಲು ಬಡಿದು ಹಲವಾರು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿದ್ದು, ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಾರ್ಖಂಡ್: ಫುಟ್ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದು ಇಬ್ಬರ ಸಾವು
ಫುಟ್ಬಾಲ್ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದು ಇಬ್ಬರ ಸಾವಿಗೀಡಾದ ಘಟನೆ ಜಾರ್ಖಂಡ್ ನಲ್ಲಿ ವರದಿಯಾಗಿದೆ.

ಅಮೆರಿಕ: ಸಿಡಿಲು ಬಡಿದು ಭಾರತೀಯ ವಿದ್ಯಾರ್ಥಿನಿ ಮೆದುಳಿಗೆ ಹಾನಿ; ಸಾವು ಬದುಕಿನ ನಡುವೆ ಹೋರಾಟ!
ಅಮೆರಿಕದ ಹೂಸ್ಟನ್ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಗೆ ಸಿಡಿಲು ಬಡಿದು ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.

ಉತ್ತರ ಪ್ರದೇಶ: ಭಾರೀ ಮಳೆ, ಸಿಡಿಲಿಗೆ 36 ಮಂದಿ ಸಾವು
ಉತ್ತರ ಭಾರತದಲ್ಲಿ ಅಪಾಯಕಾರಿ ವಾತವಾರಣದಿಂದಾಗಿ ಕಳೆದ 24 ಗಂಟೆಗಳಲ್ಲಿ 36 ಮಂದಿ ಸಾವನ್ನಪ್ಪಿದ್ದಾರೆ. ಈ ಪೈಕಿ 12 ಜನರು ಸಿಡಿಲಿಗೆ ಬಲಿಯಾಗಿದ್ದಾರೆ. ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿರುವುದಾಗಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಆಗಸದಲ್ಲಿ ಏರ್ ಏಷ್ಯಾ ವಿಮಾನಕ್ಕೆ ಸಿಡಿಲು ಹೊಡೆತ: ಬೆಂಗಳೂರಿಗೆ ಹಿಂದಿರುಗಿದ ವಿಮಾನ!
ಅಪರೂಪದಲ್ಲಿ ಅಪರೂಪ ಎಂಬಂತೆ ಬೆಂಗಳೂರಿನಿಂದ ಹೈದರಾಬಾದ್‌ಗೆ ತೆರಳುತ್ತಿದ್ದ ಏರ್‌ಏಷ್ಯಾ ಇಂಡಿಯಾ ವಿಮಾನಕ್ಕೆ ಸಿಡಿಲು ಬಡಿದಿದೆ. ಇದರಿಂದ ವಿಮಾನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹಿಂದಿರುಗಿದೆ.

ಬೆಂಗಳೂರು: ಮರದ ಕೆಳಗೆ ನಿಂತಿದ್ದವರಿಗೆ ಸಿಡಿಲು ಬಡಿದು ತಂದೆ ಸಾವು, ಮಗನಿಗೆ ಗಾಯ
ಕಳೆದ ಕೆಲವು ದಿನಗಳಿಂದ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿದ್ದು ನಿನ್ನೆ ಸಂಜೆ ಸುರಿದ ಗುಡುಗು ಸಹಿತ ಮಳೆಯ ವೇಳೆ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಬಲಿಯಾಗಿದ್ದಾರೆ.

