lightning

ಬಿಹಾರ: ಸಿಡಿಲು ಬಡಿದು 7 ಮಂದಿ ದುರ್ಮರಣ
ಸಿಡಿಲಿನ ಹೊಡೆತಕ್ಕೆ ಬಿಹಾರದ ಬಾಂಕಾ ಜಿಲ್ಲೆಯಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ. ಬಾಂಕಾ ಜಿಲ್ಲೆಯಲ್ಲಿ ಸಿಡಿಲಿಗೆ 7 ಮಂದಿ ಮೃತಪಟ್ಟ ಸಂಗತಿಯಿಂದ ಬೇಸರವಾಗಿದೆ ಎಂದು ಆರೋಗ್ಯ ಸಚಿವ ಮಂಗಲ್ ಪಾಂಡೆ ಮಾಹಿತಿ ನೀಡಿದ್ದಾರೆ.

ರಾಜಸ್ಥಾನದಲ್ಲಿ ಸಿಡಿಲು ಬಡಿದು 23 ಜನರ ಸಾವು, 27 ಮಂದಿಗೆ ಗಾಯ
ರಾಜಧಾನಿ ಜೈಪುರದಲ್ಲಿ 12 ಜನರು ಸೇರಿದಂತೆ ರಾಜಸ್ಥಾನದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 23 ಜನರು ಸಾವನ್ನಪ್ಪಿದ್ದು, 27 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ಹೇಳಿದ್ದಾರೆ.

ಬಂಟ್ವಾಳ: ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳಿಗೆ ಗಾಯ
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ವೀರಕಂಭ ಗ್ರಾಮದ ಕಲ್ಮಲೆ ಎಂಬವರ ಮನೆಗೆ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಗಾಯಗೊಂಡಿದ್ದಾರೆ.

ಅಸ್ಸಾಂನಲ್ಲಿ ಸಿಡಿಲು ಬಡೆದು 18 ಕಾಡಾನೆಗಳು ಸಾವು
ಮಧ್ಯ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸಿಡಿಲು ಬಡಿದು 18 ಕಾಡಾನೆಗಳು ಸಾವನ್ನಪ್ಪಿವೆ.

ವಿಜಯಪುರ ನಗರದಲ್ಲಿ ಸಿಡಿಲು ಬಡಿದು ಮೂವರು ಸಾವು, ಇಬ್ಬರಿಗೆ ಗಂಭೀರ ಸುಟ್ಟಗಾಯ
ವಿಜಯಪುರ ನಗರದ ತಕ್ಕೆ ಮಸೀದಿ ಬಳಿ ಬುಧವಾರ ರಾತ್ರಿ ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ.

ಬೆಳಗಾವಿ: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಇನ್ನೊಬ್ಬ ಮಹಿಳೆ ಗಂಭೀರ
ಮಂಗಳವಾರ ಸಂಜೆ ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಚಿಕ್ಕಲ್ಗೆರಿ ಗ್ರಾಮದಲ್ಲಿ ಕೃಷಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರು ಮಹಿಳಾ ಕಾರ್ಮಿಕರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಇನ್ನೊಬ್ಬ ಮಹಿಳೆ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶ: ಗುಡುಗು, ಮಿಂಚಿಗೆ 23 ಮಂದಿ ಬಲಿ, 29 ಮಂದಿಗೆ ಗಾಯ
ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಲ್ಲಿ ನಿನ್ನೆ ಭಾರೀ ಪ್ರಮಾಣದ ಸಿಡಿಲು, ಮಿಂಚು ಬಡಿದು ಕನಿಷ್ಠ 23 ಮಂದಿ ಮೃತಪಟ್ಟಿದ್ದು 29 ಮಂದಿ ಗಾಯಗೊಂಡಿದ್ದಾರೆ.

ಬಿಹಾರ: ಸಿಡಿಲಿನ ಅಬ್ಬರಕ್ಕೆ 83 ಮಂದಿ ಬಲಿ: ಪರಿಹಾರ ಘೋಷಿಸಿದ ಸರ್ಕಾರ; ಪ್ರಧಾನಿ ಮೋದಿ ಸಂತಾಪ
ಸಿಡಿಲಿನ ಅಬ್ಬರಕ್ಕೆ ಬಿಹಾರದಲ್ಲಿ ಕಳೆದ ಎರಡು ದಿನಗಳಲ್ಲಿ ಬರೋಬ್ಬರಿ 83 ಜನರು ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ 4 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ.

ಚಿಕ್ಕೋಡಿ: ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ವ್ಯಕ್ತಿ ದುರ್ಮರಣ
ಹೊಲದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಸಾವನಪ್ಪಿದ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಶನಿವಾರ ಸಂಜೆ ನಡೆದಿದೆ.

