ರಾಜ್ಯವಿದ್ಯುತ್ ಸ್ಪರ್ಶದಿಂದ ಲೈನ್ ಮನ್ ಸಾವು ಪ್ರಕರಣ, ತನಿಖೆ ವರದಿ ನಂತರ ಸೂಕ್ತ ಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್
ಫಜಲಪುರ ತಾಲೂಕಿನ ಚೌಡಾಪುರ ಉಪವಿಭಾಗದಲ್ಲಿ ವಿದ್ಯುತ್ ಸ್ಪರ್ಶದಿಂದ ಲೈನ್ ಮನ್ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದ್ದು,ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ವಿಧಾನಸಭೆಯಲ್ಲಿಂದು ತಿಳಿಸಿದರು.