Lingayat

ಕಾಂಗ್ರೆಸ್ ನಲ್ಲಿ ಲಿಂಗಾಯತ ಕಡೆಗಣನೆ ಆರೋಪ: ಶಾಮನೂರು ಶಿವಶಂಕರಪ್ಪ ಹೇಳಿಕೆಗೆ ರಾಥೋಡ್ ಅಸಮಾಧಾನ
ಲಿಂಗಾಯತ ನಾಯಕರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬ ಹಿರಿಯ ಕಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿಕೆ ಕುರಿತು ಕಾಂಗ್ರೆಸ್ ಪಾಳಯದಲ್ಲಿ ಸಾಕಷ್ಟು ಚರ್ಚೆಗಳು ಶುರುವಾಗಿದ್ದು, ಈ ಬಗ್ಗೆ ಹಲವು ನಾಯಕರು ಅಸಮಾಧಾನ ಹೊರಹಾಕುತ್ತಿದ್ದಾರೆ.

ಬಿಜೆಪಿಯಲ್ಲಿ ಲಿಂಗಾಯತರ ಕಡೆಗಣನೆ, ಬಕೆಟ್ ಹಿಡಿದವರಿಗೆ ರಾಜಮರ್ಯಾದೆ: ಪ್ರದೀಪ್ ಶೆಟ್ಟರ್ ಸಿಟ್ಟಿಗೆ ಕಾರಣವೇನು?
ಬಿಜೆಪಿಯಲ್ಲಿ ಪಕ್ಷ ನಿಷ್ಠೆ ಬಿಟ್ಟು ಬಕೆಟ್ ಹಿಡಿದವರಿಗೆ ಮನ್ನಣೆ ನೀಡಲಾಗುತ್ತಿದೆ. ಅಲ್ಲದೇ ಲಿಂಗಾಯತ ನಾಯಕರನ್ನು ವ್ಯವಸ್ಥಿತವಾಗಿ ತುಳಿಯಲಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಮೊದಲ ಬಾರಿಗೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ನೂತನ ಕಾಂಗ್ರೆಸ್ ಸರ್ಕಾರ ಲಿಂಗಾಯತ, ದಲಿತ ಸಮುದಾಯಗಳಿಗೆ 'ತಕ್ಕ ಪಾಲು' ನೀಡಲಿ: ಎಂ.ಬಿ.ಪಾಟೀಲ್
ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿ ಸ್ಥಾನ ನಿರಾಕರಿಸಿರುವ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಶಾಸಕ ಎಂ.ಬಿ.ಪಾಟೀಲ್ ಅವರು ಶುಕ್ರವಾರ ಲಿಂಗಾಯತ ಮತ್ತು ದಲಿತ ಸೇರಿದಂತೆ ಎಲ್ಲಾ ಸಮುದಾಯಗಳಿಗೆ 'ತಕ್ಕ ಪಾಲು' ನೀಡಬೇಕು ಎಂದು ಹೇಳಿದ್ದಾರೆ.

ಬಿಜೆಪಿಯಲ್ಲಿ ಗುಲಾಮಿ ಸಂಸ್ಕೃತಿ, ಜೀ ಹುಜೂರ್ ಅನ್ನೋರನ್ನ ಅಕ್ಕಪಕ್ಕ ಇಟ್ಕೊಳ್ತಾರೆ: ಸಂತೋಷ್ ವಿರುದ್ಧ ಶೆಟ್ಟರ್ ವಾಗ್ದಾಳಿ
ಬಿಜೆಪಿಯಲ್ಲಿ ಬಲಾಢ್ಯ ಹಿರಿಯ ನಾಯಕರನ್ನು ಮುಗಿಸುವ ಷಡ್ಯಂತ್ರ ನಡೆಯುತ್ತಿದೆ.ಎರಡು ವರ್ಷ ಮುಖ್ಯಮಂತ್ರಿಯಾದ ನಂತರ ಯಡಿಯೂರಪ್ಪನವರನ್ನು ಅಧಿಕಾರದಿಂದ ಇಳಿಸಲಾಯಿತು. ಅವರೇ ಸ್ವಪ್ರೇರಣೆಯಿಂದ, ಸ್ವಇಚ್ಛೆಯಿಂದ ರಾಜೀನಾಮೆ ನೀಡಿದರು ಎಂದು ಸುದ್ದಿ ಹರಡಿಸಲಾಯಿತು.

ಯಾವುದೇ ಕಾರಣಕ್ಕೂ ಬಿಜೆಪಿ ಲಿಂಗಾಯತರನ್ನು ಸಿಎಂ ಮಾಡಲ್ಲ: ಕುಮಾರಸ್ವಾಮಿ
ಯಾವುದೇ ಕಾರಣಕ್ಕೂ ಬಿಜೆಪಿ ಈ ಬಾರಿ ಲಿಂಗಾಯತರನ್ನು ಮುಖ್ಯಮಂತ್ರಿ ಮಾಡುವುದಿಲ್ಲ ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ.

ಶಿವಮೊಗ್ಗ: ಬಿಎಸ್ ಯಡಿಯೂರಪ್ಪ ನಿವಾಸದಲ್ಲಿ ಲಿಂಗಾಯತ ಮುಖಂಡರ ಸಭೆ, ಈಶ್ವರಪ್ಪ ಭಾಗಿ
ಲಿಂಗಾಯತ ಸಮುದಾಯದ ಇಬ್ಬರು ಹಿರಿಯ ನಾಯಕರು ಭಾರತೀಯ ಜನತಾ ಪಾರ್ಟಿಯಿಂದ ನಿರ್ಗಮಿಸಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ಲಿಂಗಾಯತ ಮುಖಂಡರೊಂದಿಗೆ ಸೋಮವಾರ ಮತ್ತೊಂದು ಸುತ್ತಿನ ಸಭೆ ನಡೆಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ: ಹೊಸ ಮುಖಗಳಿಗೆ ಬಿಜೆಪಿ ಮಣೆ; ಹಾಲಿ ಶಾಸಕರ ವಿರುದ್ಧ ಅಲೆ, ಪಕ್ಷಕ್ಕೆ 'ಪ್ಲಸ್' ಆಗಲಿದೆ ಎಂದ ಸಮೀಕ್ಷೆ
ಹಾಲಿ ಶಾಸಕರನ್ನು ಕೆಳಗಿಳಿಸಿ ಕೆಲವು ಹೊಸ ಮುಖಗಳಿಗೆ ಟಿಕೆಟ್ ನೀಡಿರುವ ಬಿಜೆಪಿಯ ನಿರ್ಧಾರದಿಂದ ಕೆಲವು ನಾಯಕರಿಗೆ ಅಸಮಾಧಾನ ಉಂಟುಮಾಡಿತು. ಆದರೆ, ಇದು ಪಕ್ಷದ ಭವಿಷ್ಯವನ್ನು ಭದ್ರವಾಗಿಡಲು ಸಹಾಯ ಮಾಡುವ ಸಾಧ್ಯತೆ ಇದೆ ಎಂದು ಬಿಜೆಪಿಯ ಆಂತರಿಕ ಸಮೀಕ್ಷೆಯೊಂದು ಹೇಳಿದೆ.

ರಾಜ್ಯದಲ್ಲಿ ಲಿಂಗಾಯತ ಸಮುದಾಯದ ಸಂಪೂರ್ಣ ಬೆಂಬಲ ಬಿಜೆಪಿಗಿದೆ: ಬಿವೈ ವಿಜಯೇಂದ್ರ
ಲಿಂಗಾಯತ ಸಮುದಾಯದಲ್ಲಿ ಒಡಕು ಮೂಡಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದ್ದು, ಈ ಬಾರಿಯ ಚುನಾವಣೆಯಲ್ಲಿ ರಾಜ್ಯದಲ್ಲಿ ಲಿಂಗಾಯ ಸಮುದಾಯದ ಸಂಪೂರ್ಣ ಬೆಂಬಲ ಬಿಜೆಪಿಗೆ ಸಿಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ ಅವರು ಬುಧವಾರ ಹೇಳಿದ್ದಾರೆ.

ಟಿಕೆಟ್ ಘೋಷಣೆಯಾಗದಿದ್ದರೂ ನಾಮಪತ್ರ ಸಲ್ಲಿಸಿದ ಗಂಗಾಂಬಿಕೆ: ಲಿಂಗಾಯತರ ಲಾಬಿಗೆ ಮಣಿಯುತ್ತಾ ಕಾಂಗ್ರೆಸ್ ಹೈಕಮಾಂಡ್!
ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದು, ಗುರುವಾರದಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಈ ಬಾರಿಯ ಚುನಾವಣೆಯಲ್ಲಿ ಲಿಂಗಾಯತರಿಗೆ ಶೇ.70ರಷ್ಟು ಟಿಕೆಟ್ ಗಳನ್ನು ನೀಡಬೇಕೆಂಬ ಬೇಡಿಕೆಗಳು ಕೇಳಿ ಬಂದಿದ್ದು, ಈ ನಡುವಲ್ಲೇ ಬಿಬಿಎಂಪಿ ಮಾಜಿ ಮೇಯರ್ ಗಂಗಾಂಬಿಕೆಯವರು ಟಿಕೆಟ್ ಅಧಿಕೃತವಾಗಿ ಘೋಷಣೆ ಆಗದಿದ್ದರೂ, ಗುರುವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

