lingayats

ಕಾಂಗ್ರೆಸ್ ಮೂರನೇ ಪಟ್ಟಿಯಲ್ಲಿ 16 ಕ್ಷೇತ್ರಗಳಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡುವಂತೆ ಹೆಚ್ಚಿದ ಒತ್ತಡ
ಅಭ್ಯರ್ಥಿಗಳ ಪಟ್ಟಿ ನೋಡಿದರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಇನ್ನೂ ಜಾತಿ ಸಮೀಕರಣ ಮತ್ತು ಲಿಂಗಾಯತ ಮತಗಳ ಮಹತ್ವವನ್ನು ಅರ್ಥಮಾಡಿಕೊಂಡಿಲ್ಲ ಎಂದು ಸಮುದಾಯದ ಮುಖಂಡರು ಪ್ರತಿಪಾದಿಸಿದ್ದಾರೆ.

ಮುಸ್ಲಿಮರ ಶೇ 4ರಷ್ಟು ಮೀಸಲಾತಿ ರದ್ದು: ಸರ್ಕಾರದ ನಿರ್ಧಾರದ ಬಗ್ಗೆ ತಜ್ಞರು ಏನಂತಾರೆ?
2B ಮೀಸಲಾತಿಯು ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾಗಿತ್ತು. ಆದರೆ, ಇಡಬ್ಲ್ಯುಎಸ್ ಮೀಸಲಾತಿಯು ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಮಾತ್ರ ಲಭ್ಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ.

ಪ್ರತ್ಯೇತ ಧರ್ಮಕ್ಕೆ ಆಗ್ರಹ: ಲಿಂಗಾಯತ ಸಮುದಾಯದ 2 ದಿನಗಳ ಸಮಾವೇಶ ಮುಕ್ತಾಯ
ಜಾಗತಿಕ ಲಿಂಗಾಯತ ಮಹಾಸಭಾದ ಮೊದಲ ಸಮಾವೇಶ ಬಸವಕಲ್ಯಾಣದಲ್ಲಿ (ಬೀದರ್ ಜಿಲ್ಲೆ) ಭಾನುವಾರ ಮುಕ್ತಾಯಗೊಂಡಿದ್ದು, ನಿರೀಕ್ಷೆಯಂತೆಯೇ ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವಂತೆ ಮಾಡಿರುವ ಶಿಫಾರಸನ್ನು ಅಂಗೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

ಜ.14, 15 ಸಿದ್ದರಾಮೇಶ್ವರರ ಜಯಂತಿ: ಮುಖ್ಯ ಅತಿಥಿಯಾಗಿ ಸಿದ್ದರಾಮಯ್ಯಗೆ ಆಹ್ವಾನ, ಲಿಂಗಾಯತ ಸಮುದಾಯ ಓಲೈಕೆ ಸಾಧ್ಯತೆ
2018ರ ವಿಧಾನಸಭಾ ಚುನಾವಣೆಗೂ ಮುನ್ನ ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ಕಲ್ಪಿಸುವ ಮೂಲಕ ವೀರಶೈವ ಲಿಂಗಾಯತ ಸಮುದಾಯವನ್ನು ಒಡೆಯಲು ಯತ್ನಿಸುತ್ತಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ವಿಧಾನಸಭೆಯ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಲಿಂಗಾಯತ ಸಮುದಾಯಕ್ಕೆ ಸೇರಿದ ಕಾರ್ಯಕ್ರಮವೊಂದಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನ ನೀಡಲಾಗಿದ

ಬಿಎಸ್'ವೈರತ್ತ ವಾಲಿರುವ ಲಿಂಗಾಯತ ನಾಯಕರನ್ನು ಚುನಾವಣೆಗೂ ಮುನ್ನ ಕಾಂಗ್ರೆಸ್'ಗೆ ಕರೆತರಲು ಯತ್ನಿಸುತ್ತೇವೆ: ಎಂ.ಬಿ. ಪಾಟೀಲ್
ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರತ್ತ ವಾಲಿರುವ ಲಿಂಗಾಯತ ನಾಯಕರನ್ನು ಕಾಂಗ್ರೆಸ್'ಗೆ ಕರೆತರಲು ಪ್ರಯತ್ನ ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಅವರು ಹೇಳಿದ್ದಾರೆ.

ಲಿಂಗಾಯತ ಸಮುದಾಯಕ್ಕೂ ಮೀಸಲಾತಿ ಅಗತ್ಯ: ಮುರುಘಾ ಮಠದ ಶ್ರೀ
ಎಲ್ಲಾ ಜಾತಿಗಳಲ್ಲೂ ಬಡವರು, ಶೋಷಿತರು ಇದ್ದು, ವೀರಶೈವ ಲಿಂಗಾಯತ ಸಮುದಾಯಕ್ಕೂಮೀಸಲಾತಿ ಆಗತ್ಯವಿದೆ. ಕೇಂದ್ರದಲ್ಲಿ ಪ್ರಾತಿನಿಧ್ಯ ದೊರೆಯಬೇಕಿದೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಅಭಿಪ್ರಾಯಪಟ್ಟಿದ್ದಾರೆ.

ಲಿಂಗಾಯತರ ಮನಗೆಲ್ಲಲು ಭಾವನಾತ್ಮಕ ಮಾರ್ಗ ಹಿಡಿದ ಯಡಿಯೂರಪ್ಪ: ವಿರೋಧ ಪಕ್ಷಗಳಿಂದ ತೀವ್ರ ಕಿಡಿ
ಮುಂದಿನ ಲಿಂಗಾಯತ ನಾಯಕನಿಗಾಗಿ ಬಿಜೆಪಿಯ ಕೇಂದ್ರೀಯ ನಾಯಕತ್ವ ಹುಡುಕಾಟ ನಡೆಸುತ್ತಿದ್ದು, ಈ ನಡುವಲ್ಲೇ ಲಿಂಗಾಯತರ ಮನ ಗೆಲ್ಲಲು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಭಾವನಾತ್ಮಕ ಮಾರ್ಗ ಹಿಡಿದಿದ್ದು, ಅದಕ್ಕೆ ವಿರೋಧ ಪಕ್ಷಗಳು ತೀವ್ರವಾಗಿ ಕಿಡಿಕಾರುತ್ತಿವೆ.

ಸಿದ್ದರಾಮಯ್ಯ ಲಿಂಗಾಯತರೇನ್ರಿ? ಮಾಜಿ ಸಿಎಂ ವಿರುದ್ಧ ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ವೀರಶೈವರು ಮತ್ತು ಲಿಂಗಾಯತರು ಒಂದೇ ನಾಣ್ಯದ ಎರಡು ಮುಖ ಎಂದು ಹಿರಿಯ ಕ್ಜಾಂಗ್ರೆಸ್ ನಾಯಕ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ದೈವೀ ವ್ಯಕ್ತಿತ್ವಕ್ಕೆ ನಿದರ್ಶನ: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ತಟಸ್ಥ ನಿಲುವು ತಾಳಿದ್ದ ಶ್ರೀಗಳು
ನಡೆದಾಡುವ ದೇವರು ಡಾ. ಶಿವಕುಮಾರ ಸ್ವಾಮಿಗಳ ವ್ಯಕ್ತಿತ್ವ ದೊಡ್ಡದೆನ್ನಲು ಅವರ ಜೀವನದಲ್ಲೇ ಅನೇಕ ಘಟನೆಗಳು ನಿದರ್ಶನವಾಗಿದೆ. ಅಂತಹುದರಲ್ಲಿ ಲಿಂಗಾಯತ ಧರ್ಮದ ಕುರಿತಂತೆ.....

