ರಾಜ್ಯಖಾಸಗಿ ಕ್ಷೇತ್ರದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಶೀಘ್ರದಲ್ಲೇ ಸರ್ಕಾರ ಆದೇಶ
ರಾಜ್ಯ ಸರ್ಕಾರದಿಂದ ಯಾವುದೇ ರಿಯಾಯಿತಿಯನ್ನು ಪಡೆಯದ ಖಾಸಗಿ ಸಂಸ್ಥೆಗಳೂ ಕೂಡ ತಮ್ಮಲ್ಲಿನ ಸಿ ಮತ್ತು ಡಿ ವೃಂದದಲ್ಲಿನ ಎಲ್ಲಾ ಉದ್ಯೋಗಗಳನ್ನು ಕನ್ನಡಿಗರಿಗೆ ಮೀಸಲಿಡುವಂತೆ ಹಾಲಿ ಜಾರಿ ಇರುವ ಆದೇಶವನ್ನು ಅನ್ವಯಿಸುವ ಬಗ್ಗೆ ಸರ್ಕಾರ ಚಿಂತನೆ ಮಾಡುತ್ತಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.