ದೇಶಲಾಕ್ ಡೌನ್ ಆದೇಶ ಪಾಲಿಸಿ ಮನೆಯಲ್ಲೇ ಇರಿ, ಇಲ್ಲವೇ ಕಂಡಲ್ಲಿ ಗುಂಡಿಕ್ಕಲು ಆದೇಶ: ತೆಲಂಗಾಣ ಸಿಎಂ ಕೆಸಿಆರ್ ಎಚ್ಚರಿಕೆ!
ಮಾರಕ ಕೊರೋನಾ ವೈರಸ್ ನಿಯಂತ್ರಣಕ್ಕೆ ದೇಶದಲ್ಲಿ ಹೇರಲಾಗಿರುವ 21 ದಿನಗಳ ಲಾಕ್ ಡೌನ್ ಅವಧಿಯಲ್ಲಿ ಮನೆಯಲ್ಲೇ ಇರಿ. ಲಾಕ್ ಡೌನ್ ನಿಯಮ ಉಲ್ಲಂಘಿಸಿ ಬೀದಿಗಿಳಿದರೆ ಅಥವಾ ಪರಿಸ್ಥಿತಿ ಕೈ ಮೀರುವ ಪರಿಸ್ಥಿತಿ ಬಂದರೆ ಕಂಡಲ್ಲಿ ಗುಂಡಿಡುವಂತೆ ಪೊಲೀಸರಿಗೆ ಆದೇಶ ನೀಡಬೇಕಾಗುತ್ತದೆ ಎಂದು ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಹೇಳಿದ್ದಾರೆ.