lockdown

ಬೆಂಗಳೂರಿನಲ್ಲಿ ಒಂದು ವಾರ ಲಾಕ್ ಡೌನ್: ದಾಖಲೆಯ ಮದ್ಯ ಮಾರಾಟ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಬೆಂಗಳೂರು ನಗರದಲ್ಲಿ ಕಳೆದ ರಾತ್ರಿಯಿಂದ ಒಂದು ವಾರ ಲಾಕ್ ಡೌನ್ ಘೋಷಿಸಿದ್ದಾರೆ. ಈ ಸಂದರ್ಭದಲ್ಲಿ ಮದ್ಯದಂಗಡಿಗಳು ತೆರೆದಿರುವುದಿಲ್ಲವೆಂದು ಮದ್ಯಪ್ರಿಯರು ಒಂದು ವಾರಕ್ಕೆ ಬೇಕಾಗುವಷ್ಟು ಮದ್ಯ ಖರೀದಿಸಿ ಸಂಗ್ರಹಿಸಿಟ್ಟುಕೊಂಡಿದ್ದಾರೆ.

ಕೋವಿಡ್-19 ಪರಿಸ್ಥಿತಿ ಎದುರಿಸಲು ಪೂರ್ಣಪ್ರಮಾಣದಲ್ಲಿ ಸಿದ್ಧಗೊಳ್ಳಲು ಲಾಕ್'ಡೌನ್ ಸಹಾಯಕವಾಗಲಿದೆ: ಸಚಿವ ಆರ್. ಅಶೋಕ್
ರಾಜ್ಯದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ಮಟ್ಟಹಾಕಲು ಬೆಂಗಳೂರಿನಲ್ಲಿ ಮಂಗಳವಾರದಿಂದ 7 ದಿನಗಳ ಕಾಲ ಲಾಕ್'ಡೌನ್ ಘೋಷಣೆ ಮಾಡಲಾಗಿದ್ದು, ಪರಿಸ್ಥಿತಿ ಎದುರಿಸಲು ಪೂರ್ಣಪ್ರಮಾಣದಲ್ಲಿ ಸಿದ್ಧಗೊಳ್ಳಲು ಲಾಕ್'ಡೌನ್ ಸಹಾಯಕವಾಗಲಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಸಿವಿಲ್ ಪೊಲೀಸ್ ವಾರ್ಡನ್ ಆಗಲು ಯುವಜನತೆಗೆ ಬೆಂಗಳೂರು ಪೊಲೀಸ್ ಆಯುಕ್ತರ ಆಹ್ವಾನ
ಮಾರಕ ಕೊರೋನಾ ವೈರಸ್ ವಿರುದ್ಧದ ಹೋರಾಟದಲ್ಲಿ ಪೊಲೀಸರೊಂದಿಗೆ ಕೈ ಜೋಡಿಸುವಂತೆ ಯುವಜನತೆಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಆಹ್ವಾನ ನೀಡಿದ್ದಾರೆ.

ಬೆಂಗಳೂರು ಲಾಕ್ಡೌನ್; ಮೆಡಿಕಲ್ಸ್ ಹೊರತುಪಡಿಸಿ ಎಲ್ಲ ಅಗತ್ಯವಸ್ತುಗಳ ಅಂಗಡಿಗಳನ್ನು ಮಧ್ಯಾಹ್ನ 12ಗಂಟೆಯೊಳಗೆ ಮುಚ್ಚಬೇಕು
ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಇಂದು ರಾತ್ರಿ 8 ಗಂಟೆಯಿಂದ ಜಾರಿಯಾಗಿರುವ ಲಾಕ್ಡೌನ್ ಮುಂದಿನ ಒಂದು ವಾರಗಳ ಕಾಲ ಲಾಕ್ಡೌನ್ ಜಾರಿಯಲ್ಲಿರಲಿದ್ದು, ಈ ಸಂಬಂಧ ನಗರ ಪೊಲೀಸ್ ಆಯುಕ್ತ ಸಾರ್ವಜನಿಕರಿಗೆ ಕೆಲ ಮಾರ್ಗದರ್ಶಿ ಸೂಚನೆಗಳನ್ನು ನೀಡಿದ್ದಾರೆ.

ಲಾಕ್ ಡೌನ್ ಹಿನ್ನೆಲೆ: ತುರ್ತು ಸೇವೆಗಷ್ಟೇ ಬಿಎಂಟಿಸಿ ಸೌಲಭ್ಯ
ಮಹಾಮಾರಿ ಕೋವಿಡ್-19 ಗೆ ನಗರದ ಮತ್ತೋರ್ವ ಕೊರೋನಾ ವಾರಿಯರ್ ಪಿಎಸ್ ಐ ಬಲಿಯಾಗಿದ್ದಾರೆ.

ಬೆಂಗಳೂರು ಲಾಕ್'ಡೌನ್: ರೈಲು, ವಿಮಾನಗಳ ಸಂಚಾರ ಎಂದಿನಂತೆ ಮುಂದುವರಿಕೆ
ಕೊರೋನಾವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರದಲ್ಲಿ ಮತ್ತೆ ಲಾಕ್'ಡೌನ್ ಮಾಡಲಾಗುತ್ತಿದ್ದು, ಲಾಕ್'ಡೌನ್ ನಡುವಲ್ಲೂ ರೈಲು ಹಾಗೂ ವಿಮಾನಗಳ ಸಂಚಾರ ಎಂದಿನಂತೆ ಮುಂದುವರೆಯಲಿದೆ ಎಂದು ಹೇಳಲಾಗುತ್ತಿದೆ.

ಹೆಚ್ಚುತ್ತಿರುವ ಕೊರೋನಾ ಆರ್ಭಟ: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿ
ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ಹೆಚ್ಚಾಗಿದ್ದು, ಪ್ರಮುಖವಾಗಿ ಬೆಂಗಳೂರಿನಲ್ಲಿನ ಪರಿಸ್ಥಿತಿ ಸರ್ಕಾರದ ನಿದ್ರೆಗೆಡುವಂತೆ ಮಾಡಿದೆ. ಹೀಗಾಗಿ ಕೊರೋನಾ ಮಟ್ಟಹಾಕಲು ಸರ್ಕಾರ ಮಂಗಳವಾರ ರಾತ್ರಿಯಿಂದ ಮುಂದಿನ 1 ವಾರಗಳ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಗೊಳಿಸುತ್ತಿದೆ.

ಕೊರೋನಾ ಎಫೆಕ್ಟ್: ಮತ್ತೆ ಬೆಂಗಳೂರು ಲಾಕ್'ಡೌನ್, ಬೇಸರದಲ್ಲಿ ಕೈಗಾರಿಕಾ ವಲಯಗಳು
ಕೊರೋನಾ ಸಂಕಷ್ಟ ಪರಿಸ್ಥಿತಿಯ ಕಟ್ಟಕಡೆಯ ಲಾಕ್'ಡೌನ್ ಎಂದು ಬಿಂಬಿಸಲಾಗುತ್ತಿರುವ 7 ದಿನಗಳ ಅವಧಿಯ ಲಾಕ್ಡೌನ್'ಗೆ ಕ್ಷಣಗಣನೆ ಆರಂಭವಾಗಿದ್ದು, ಮಂಗಳವಾರ ರಾತ್ರಿ 8ರಿಂದ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಬಹುತೇಕ ಸ್ತಬ್ದವಾಗಲಿದೆ. ಮತ್ತೆ ಲಾಕ್ಡೌನ್ ಮಾಡುತ್ತಿರುವ ಹಿನ್ನೆಲೆಯಲ್ಲಿ ಕೈಗಾರಿಕಾ ವಲಯಗಳು ಮಾಲೀಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಒಂದು ವಾರ ಬೆಂಗಳೂರು ಲಾಕ್ ಡೌನ್ :ಏನು ಇರುತ್ತೆ, ಏನು ಇರಲ್ಲ? ಇಲ್ಲಿದೆ ಸರ್ಕಾರದ ಮಾರ್ಗಸೂಚಿ
ಕೋವಿಡ್-19 ಸೋಂಕು ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ಬಿಬಿಎಂಪಿ,ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿ 8 ಗಂಟೆಯಿಂದ ಜುಲೈ 22ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಆದೇಶಿಸಿದ್ದಾರೆ.

