lockdown

ಜೂನ್ 15ರವರೆಗೆ ಲಾಕ್ ಡೌನ್ ವಿಸ್ತರಿಸಬೇಕೆಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ: ಸಚಿವ ಭೈರತಿ ಬಸವರಾಜ್
ಕೊರೋನಾ ಲಾಕ್ ಡೌನ್ ನ್ನು ಜೂನ್ 15ರವರೆಗೂ ವಿಸ್ತರಿಸಬೇಕೆಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರನ್ನು ಮನವಿ ಮಾಡಿಕೊಳ್ಳುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ.

ಕೊರೋನಾ ಲಾಕ್ಡೌನ್ ಅಂತ್ಯ ಜನರ ಕೈಯಲ್ಲೇ ಇದೆ: ತಮಿಳುನಾಡು ಸಿಎಂ ಸ್ಟಾಲಿನ್
ಕೊರೋನಾ ವೈರಸ್ ಸಾಂಕ್ರಾಮಿಕ ರೋಗ ನಿಗ್ರಹಿಸಲು ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುವುದನ್ನು ಹೊರತುಪಡಿಸಿ ಬೇರಾವುದೇ ಮಾರ್ಗವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಮಂಗಳವಾರ ಹೇಳಿದ್ದಾರೆ.

ಪಾಸಿಟಿವಿಟಿ ದರ ಶೇ.5ಕ್ಕಿಂತ ಕೆಳಗಿಳಿವವರೆಗೆ ಲಾಕ್ಡೌನ್ ವಿಸ್ತರಿಸಿ: ಸರ್ಕಾರಕ್ಕೆ ತಜ್ಞರ ಸಮಿತಿ ಸಲಹೆ
ನಿತ್ಯದ ಸೋಂಕಿನ ಪ್ರಮಾಣ 5 ಸಾವಿರದೊಳಗೆ ಬರಬೇಕು ಹಾಗೂ ಪಾಸಿಟಿವಿಟಿ ದರ ಶೇ.5 ಮತ್ತು ಸಾವಿನ ದರ ಶೇ.1ರ ಮಿತಿಯೊಳಗೆ ಬರಬೇಕು. ಇಷ್ಟು ಬೆಳವಣಿಗೆಗಳು ಕಂಡು ಬರುವವರೆಗೂ ರಾಜ್ಯದಲ್ಲಿ ಲಾಕ್ಡೌನ್ ಮುಂದುವರೆಸಬೇಕು.ಈ ಗುರಿ ಸಾಧನೆ ಜೂ.7ರೊಳಗೆ ಅಸಂಭವವಾದ ಕಾರಣ ಕನಿಷ್ಟ ಒಂದು ವಾರ ಲಾಕ್ಡೌನ್ ವಿಸ್ತರಿಸಿ ಎಂದು ಕೊರೋನಾ ತಾಂತ್ರಿಕ...

ಹಂತ ಹಂತವಾಗಿ ಲಾಕ್ ಡೌನ್ ನಿರ್ಬಂಧ ತೆರವುಗೊಳಿಸಲು ರಾಜ್ಯ ಸರ್ಕಾರ ಚಿಂತನೆ: ಸಚಿವ ಆರ್. ಅಶೋಕ್
ಬೆಂಗಳೂರಿನಲ್ಲಿ ಕೋವಿಡ್-19 ಸೋಂಕಿನ ಪ್ರಕರಣಗಳು ದಿನವೊಂದಕ್ಕೆ 1 ಸಾವಿರಕ್ಕಿಂತಲೂ ಕಡಿಮೆಯಾದಾಗ ಕೋವಿಡ್-19 ನಿರ್ಬಂಧಗಳನ್ನು ಸಡಿಲಗೊಳಿಸಿ ಹಂತ ಹಂತವಾಗಿ ಲಾಕ್ ಡೌನ್ ತೆರವುಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವುದಾಗಿ ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.

ಜೂನ್ 7ರ ವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಲ್ಲಿ ಇರಲಿದೆ: ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟನೆ
ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಲಾಕ್ಡೌನ್ ಜಾರಿಯಲ್ಲಿ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಕೆಲ ರಿಯಾಯಿತಿಯೊಂದಿಗೆ ಜೂ.7ರವರೆಗೂ ನಿರ್ಬಂಧ ಮುಂದುವರಿಕೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಾಕ್ಡೌನ್ ಅವಧಿಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಸೋಂಕು ಪ್ರಕರಣಗಳು ಕಡಿಮೆಯಾಗದ ಕಾರಣ, ಕೆಲ ರಿಯಾಯಿತಿಯೊಂದಿಗೆ ಲಾಕ್ಡೌನ್ ನಿರ್ಬಂಧಗಳು ಬರುವ ಜೂನ್ 7 ವರೆಗೂ ಮುಂದುವರೆಯಲಿದೆ.

ಸೋಮವಾರದಿಂದ ಶಿವಮೊಗ್ಗದಲ್ಲಿ ಸಂಪೂರ್ಣ ಲಾಕ್ ಡೌನ್: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗದಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಸೋಮವಾರದಿಂದ ಸಂಪೂರ್ಣ ಲಾಕ್ ಡೌನ್ ಹೇರಲು ನಿರ್ಧರಿಸಿರುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ.

ಲಾಕ್ ಡೌನ್ ವಿಸ್ತರಣೆ ಕುರಿತು ಜೂನ್ 5 ರಂದು ನಿರ್ಧಾರ: ಕರ್ನಾಟಕ ಸಿಎಂ ಬಿ.ಎಸ್. ಯಡಿಯೂರಪ್ಪ
ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ನೋಡಿಕೊಂಡು ಲಾಕ್ ಡೌನ್ ವಿಸ್ತರಣೆ ಕುರಿತು ಜೂನ್ 5 ರಂದು ನಿರ್ಧರಿಸಲಾಗುತ್ತದೆ ಎಂದು ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಲಾಕ್‌ಡೌನ್‌ನಿಂದ ರೈತರಿಗೆ 1 ಲಕ್ಷ ಕೋಟಿ ರೂ. ನಷ್ಟ: ರಾಜ್ಯ ರೈತ ಸಂಘ
ಕೋವಿಡ್ -19 ಎರಡನೇ ಅಲೆಯನ್ನು ನಿಗ್ರಹಿಸಲು ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ರೈತರಿಗೆ ಉಂಟಾದ ನಷ್ಟವನ್ನು ಒಂದು ಲಕ್ಷ ಕೋಟಿ ರೂ. ಎಂದು ಅಂದಾಜಿಸಲಾಗಿದೆ...

