lockdown

ಲಾಕ್ ಡೌನ್ ವಿಸ್ತರಣೆ ಬಗ್ಗೆ ಇಂದು ಸಂಜೆ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ನಿರ್ಧಾರ: ಆರೋಗ್ಯ ಸಚಿವ ಡಾ. ಸುಧಾಕರ್
ಇಂದು ಸಾಯಂಕಾಲ ಮುಖ್ಯಮಂತ್ರಿ ಯಡಿಯೂರಪ್ಪನವರು ಸಭೆ ಕರೆದಿದ್ದಾರೆ, ಅದರಲ್ಲಿ ನಾವೆಲ್ಲರೂ ಕೋವಿಡ್-19 ವಿಚಾರವಾಗಿ ಕೂಲಂಕಷವಾಗಿ ಚರ್ಚೆ ಮಾಡಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ತಿಳಿಸಿದ್ದಾರೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ
ರಾಷ್ಟ್ರ ರಾಜಧಾನಿಯಲ್ಲಿ ಮತ್ತೆ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ಮೇ.24ರ ವರೆಗೆ ಈ ಲಾಕ್ ಡೌನ್ ಜಾರಿಯಲ್ಲಿರಲಿದೆ.

ಗರೀಬ್ ಕಲ್ಯಾಣ ಯೋಜನೆಯಡಿ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ ಉಚಿತವಾಗಿ 5 ಕೆಜಿ ಅಕ್ಕಿ
ಕೋವಿಡ್ ಸಾಂಕ್ರಾಮಿಕ ಹರಡಿರುವ ಕಾರಣಕ್ಕಾಗಿ ಕರ್ನಾಟಕ ರಾಜ್ಯದಲ್ಲಿ ತಂದಿರುವ ಲಾಕ್ ಡೌನ್ ನಿಂದಾಗಿ ಬಡವರು, ನಿರ್ಗತಿಕರು, ಕೆಳ ಮಧ್ಯಮ ವರ್ಗದವರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.

ಕೊರೋನಾ ಲಾಕ್ ಡೌನ್ ಇದ್ದರೂ 'ಎಣ್ಣೆ ಪ್ರಿಯ'ರಿಗೇನೂ ಇಲ್ಲ ಬರ, ಭರ್ಜರಿಯಾಗಿಯೇ ಸಾಗುತ್ತಿದೆ ವ್ಯಾಪಾರ!
ಕೊರೋನಾ ಸಾಂಕ್ರಾಮಿಕ ವ್ಯಾಪಕವಾಗಿ ಹರಡಿ ಲಾಕ್ ಡೌನ್ ಹೇರಿಕೆಯಾದರೂ ಕೂಡ ಮದ್ಯ ಮಾರಾಟದ ಮೇಲೆ ರಾಜ್ಯದಲ್ಲಿ ಅಷ್ಟೊಂದು ಹೊಡೆತ ಬಿದ್ದಿಲ್ಲ.

ಕೋವಿಡ್-19: ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೂ ಲಾಕ್ ಡೌನ್ ವಿಸ್ತರಣೆ
ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗದ ಹಿನ್ನಲೆಯಲ್ಲಿ ಅಲ್ಲಿನ ಸರ್ಕಾರ ಮೇ 30ರವರೆಗೂ ಸಂಪೂರ್ಣ ಲಾಕ್ಡೌನ್ ಅನ್ನು ವಿಸ್ತರಿಸಿದೆ.

ಮಹಾರಾಷ್ಟ್ರದಲ್ಲಿ ಜೂನ್ 1 ರವರೆಗೆ ಕೋವಿಡ್ ಲಾಕ್ ಡೌನ್ ವಿಸ್ತರಣೆ
ಕೋವಿಡ್-19 ಎರಡನೇ ಅಲೆ ನಿಯಂತ್ರಣ ಬಾರದಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಈಗಿರುವ ಲಾಕ್ ಡೌನ್ ನ್ನು ಜೂನ್ 1ರವರೆಗೆ ವಿಸ್ತರಿಸಿದೆ.

ಲಾಕ್‌ಡೌನ್ ಅವಧಿಯಲ್ಲಿ ಬಡವರಿಗೆ ಹಣಕಾಸು ನೆರವಿನ ಪ್ಯಾಕೇಜ್ ನೀಡಿ: ಕಾಂಗ್ರೆಸ್ ಪುನರುಚ್ಚಾರ
ಲಾಕ್ ಡೌನ್ ಹೇರಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಬಡವರಿಗೆ ವಿಶೇಷ ಹಣಕಾಸು ಪ್ಯಾಕೇಜ್ ನೀಡುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ ಕೆ ಶಿವಕುಮಾರ್ ಮಂಗಳವಾರ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಕೋವಿಡ್-19: ತೆಲಂಗಾಣದಲ್ಲಿ ನಾಳೆಯಿಂದ ಹತ್ತು ದಿನ ಲಾಕ್‌ಡೌನ್ ಘೋಷಣೆ
ನೆರೆಯ ತೆಲಂಗಾಣದಲ್ಲೂ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮೇ 12 ರಂದು (ಬುಧವಾರ) ಬೆಳಗ್ಗೆ 10 ಗಂಟೆಯಿಂದ ಪ್ರಾರಂಭವಾಗಿ ಹತ್ತು ದಿನಗಳವರೆಗೆ ರಾಜ್ಯಾದ್ಯಂತ ಸಂಪೂರ್ಣ ಲಾಕ್‌ಡೌನ್ ವಿಧಿಸಲು ತೆಲಂಗಾಣ ಸಚಿವ ಸಂಪುಟ ಮಂಗಳವಾರ ನಿರ್ಧರಿಸಿದೆ.

ಪಾಟ್ನಾ: ಕೋವಿಡ್ 19 ನಿಯಮ ಉಲ್ಲಂಘನೆ, ಪಪ್ಪು ಯಾದವ್ ಬಂಧನ
ಕೋವಿಡ್ 19 ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಜನ ಅಧಿಕಾರ್ ಪಾರ್ಟಿ ಮುಖಂಡ ಪಪ್ಪು ಯಾದವ್ ಅವರನ್ನು ಬಂಧಿಸಲಾಗಿದೆ.

