Lok Sabha Election 2024

ಮಂಡ್ಯ-ಹಾಸನ ಟಿಕೆಟ್ ಹಂಚಿಕೆ ಕಗ್ಗಂಟು: ಮಾಜಿ ಸಿಎಂ ಕುಮಾರಸ್ವಾಮಿ ದೆಹಲಿಗೆ ದೌಡು
ಇಂದು ಅಮಿತ್ ಶಾ ಭೇಟಿ, ಮೈತ್ರಿ ಅಭ್ಯರ್ಥಿಗಳ ಆಯ್ಕೆ ಗೊಂದಲಕ್ಕೆ ಇಂದೇ ಬೀಳುತ್ತಾ ತೆರೆ?

'ಮಂಡ್ಯ ಮಣ್ಣಿನ ಋಣ, ಮಂಡ್ಯ ಮಣ್ಣಿನ ಗುಣ ಎಂದೆಂದಿಗೂ ಬಿಡಲ್ಲ, ಈ ಮಣ್ಣನ್ನೂ ಬಿಡಲ್ಲ'!
ಈ ಮಂಡ್ಯ ನೆಲದ ಗುಣ, ಋಣವನ್ನು ನಾನು ಮರೆಯಲು ಸಾಧ್ಯವೇ ಇಲ್ಲ, ಅದೇ ರೀತಿ ಈ ಮಣ್ಣನ್ನು ನಾನು ಬಿಡುವುದೂ ಇಲ್ಲ ಎನ್ನುವ ಮೂಲಕ ದಳಪತಿಗಳಿಗೆ ಜೆಡಿಎಸ್-ಬಿಜೆಪಿ ಮೈತ್ರಿ ನಾಯಕರಿಗೆ ಸುಮಲತಾ ಸಂದೇಶ ರವಾನಿಸಿದ್ದಾರೆ.

'ನನಗೂ ತುಮಕೂರಿಗೂ ಅವಿನಾಭಾವ ಸಂಬಂಧ, ಹೈಕಮಾಂಡ್ ಅವಕಾಶ ಕೊಟ್ಟರೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ'

ಇಂದಿನಿಂದ ಎರಡು ದಿನ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಸಮಾವೇಶ
ಲೋಕಸಭೆ ಚುನಾವಣೆ ಗೆಲ್ಲುವ ತಂತ್ರ ಚರ್ಚೆ

ಲೋಕಸಭೆ ಚುನಾವಣೆ ಮುನ್ನ ಸಿಎಎ ಜಾರಿ, NDA 400ಕ್ಕೂ ಹೆಚ್ಚು ಸೀಟು ಗೆದ್ದು ಅಧಿಕಾರಕ್ಕೆ ಬರುವುದು ನಿಶ್ಚಿತ: ಅಮಿತ್ ಶಾ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ 370 ಮತ್ತು ಎನ್‌ಡಿಎ ಒಕ್ಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಮೂರನೇ ಅವಧಿಗೆ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಡ್ಯ ಲೋಕಸಭೆ ಕದನ ಕುತೂಹಲ: ಪ್ರಧಾನಿ ಮೋದಿ ಭೇಟಿಯಾದ ಸಂಸದೆ ಸುಮಲತಾ; ಟಿಕೆಟ್ ಗೆ ಬೇಡಿಕೆ?
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಯಾರು ಕಣಕ್ಕಿಳಿಯುತ್ತಾರೆ ಎಂಬ ಕುತೂಹಲ ಸಾಕಷ್ಟಿದೆ. ಈಗಾಗಲೇ ಬಿಜೆಪಿಗೆ ಬಾಹ್ಯ ಬೆಂಬಲ ಘೋಷಿಸಿರುವ ಸಂಸದೆ ಸುಮಲತಾ ಅಂಬರೀಷ್ ಈ ಬಾರಿ ಕೂಡ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಲೋಕಸಭೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ, ನನ್ನನ್ನು ಏನು ಫುಟ್ಬಾಲ್ ರೀತಿ ತಿಳಿದಿದ್ದಾರೇನೋ: ಪ್ರಕಾಶ್ ಹುಕ್ಕೇರಿ
ನಾನು ಯಾವುದೇ ಕಾರಣಕ್ಕೂ ಚೆಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ನನ್ನನ್ನು ಫುಟ್ಬಾಲ್ ರೀತಿ ಬಳಸಿಕೊಳ್ಳಬಾರದು ಎಂದು ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಿಧಾನಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಸಿಡಿಮಿಡಿಗೊಂಡಿದ್ದಾರೆ.

ಈ ಬಾರಿ ಕೂಡ ಚುನಾವಣೆಯಲ್ಲಿ ಗೆದ್ದರೆ ಮೋದಿ ಪುಟಿನ್ ರೀತಿ ವರ್ತಿಸಬಹುದು: ಮಲ್ಲಿಕಾರ್ಜುನ ಖರ್ಗೆ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸತತ ಮೂರನೇ ಬಾರಿಗೆ ಗೆದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಾಧಿಕಾರಿಯಂತೆ ವರ್ತಿಸಬಹುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಯನಾಡಿನಿಂದಲೇ ಸ್ಪರ್ಧಿಸುತ್ತಾರೆ: ಕಾಂಗ್ರೆಸ್ ಸಂಸದ ಕೆ.ಮುರಳೀಧರನ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರದಿಂದಲೇ ಸ್ಪರ್ಧಿಸಲಿದ್ದಾರೆ ಎಂದು ಕಾಂಗ್ರೆಸ್ ಸಂಸದ ಕೆ.ಮುರಳೀಧರನ್ ಹೇಳಿದ್ದಾರೆ.

