Lok Sabha Election 2024

ಲೋಕಸಭೆ ಚುನಾವಣೆ ಏಪ್ರಿಲ್ 16ಕ್ಕೆ: ಚುನಾವಣಾ ಆಯೋಗದಿಂದ ತಾತ್ಕಾಲಿಕ ದಿನಾಂಕ ಪ್ರಕಟ
ಲೋಕಸಭಾ ಚುನಾವಣೆಯ ತಾತ್ಕಾಲಿಕ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ ಚುನಾವಣಾ ಆಯೋಗ ಪತ್ರ ಬರೆದಿದೆ.

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಹೆಚ್ಚು ಸ್ಥಾನ ಗೆದ್ದರೆ ಸಿದ್ದರಾಮಯ್ಯ ಪೂರ್ಣಾವಧಿ ಮುಖ್ಯಮಂತ್ರಿ: ಡಾ. ಯತೀಂದ್ರ
ಸಿಎಂ ಹುದ್ದೆ ಮತ್ತೆ ಸುದ್ದಿಯಾಗಿದೆ. ಈ ಬಾರಿ ಸುದ್ದಿಯಾಗಿರುವುದು ಸ್ವತಃ ಸಿಎಂ ಸಿದ್ದರಾಮಯ್ಯ ಪುತ್ರ ಡಾ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಯಿಂದ.

ಸುಮಲತಾ ಅವರೇನು ನನ್ನ ಶತ್ರುನಾ? ಅವರನ್ನು ಭೇಟಿ ಮಾಡಿದರೆ ತಪ್ಪೇನಿದೆ?: ಹೆಚ್ ಡಿ ಕುಮಾರಸ್ವಾಮಿ
ಲೋಕಸಭೆ ಚುನಾವಣೆಗೆ ಈವರೆಗೂ ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆಯಾಗಿಲ್ಲ. ಮುಂದೆ ಭೇಟಿ ಮಾಡುವ ಅವಶ್ಯಕತೆ ಬಂದರೆ ಸಂಸದೆ ಸುಮಲತಾ ಅವರನ್ನು ಕೂಡಾ ಭೇಟಿ ಆಗುತ್ತೇನೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ನಿನ್ನೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ್ದರು.

ಲೋಕಸಭೆ ಚುನಾವಣೆ 2024: ಪ್ರಧಾನಿ ಮೋದಿ ಜ.13ರಂದು ಬಿಹಾರದ ಬೆಟ್ಟಿಯಾದಿಂದ ಚುನಾವಣಾ ರ್ಯಾಲಿ ಪ್ರಾರಂಭ ಸಾಧ್ಯತೆ
ಲೋಕಸಭೆ ಚುನಾವಣೆ 2024ಕ್ಕೆ ಇನ್ನು ಕೆಲವೇ ತಿಂಗಳು ಬಾಕಿ. ರಾಜಕೀಯ ಪಕ್ಷಗಳಿಂದ ಚಟುವಟಿಕೆಗಳು ಗರಿಗೆದರಿವೆ. ಮುಂಬರುವ ಲೋಕಸಭೆ ಚುನಾವಣೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಿಹಾರದ ಚಂಪರನ್ ನಿಂದ ಜನವರಿ 13ಕ್ಕೆ ಪ್ರಚಾರವನ್ನು ಆರಂಭಿಸುವ ಸಾಧ್ಯತೆಯಿದೆ.

ಪಕ್ಷದ ಪ್ರಮುಖ ನಾಯಕರೊಂದಿಗೆ ಬಿ ವೈ ವಿಜಯೇಂದ್ರ ಸಭೆ: ಯತ್ನಾಳ್, ಸೋಮಣ್ಣ ಗೈರು
2024ರ ಲೋಕಸಭೆ ಚುನಾವಣೆಗೆ ವೇದಿಕೆ ಸಿದ್ಧವಾಗುತ್ತಿದೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ತಮ್ಮದೇ ಆದ ರಾಜಕೀಯ ತಂತ್ರಗಾರಿಕೆಯನ್ನು ಆರಂಭಿಸಿವೆ. ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಬಿ.ವೈ.ವಿಜಯೇಂದ್ರ ಅವರು ನಿನ್ನೆ ಗುರುವಾರ ಪಕ್ಷದ ಪ್ರಮುಖ 25 ನಾಯಕರ ಜೊತೆ ಸಭೆ ನಡೆಸಿ ತಮ್ಮ ಮುಂದಿನ ಧ್ಯೇಯೋದ್ದೇಶ,

ಲೋಕಸಭೆ ಟಿಕೆಟ್ ಆಕಾಂಕ್ಷಿ ನಾನಲ್ಲ, ಹೈಕಮಾಂಡ್ ಸೂಚಿಸಿದರೆ ಸ್ಪರ್ಧಿಸುವೆ: ಜಗದೀಶ್ ಶೆಟ್ಟರ್- ಸಿಎಂ ಸಿದ್ದರಾಮಯ್ಯ ಉಪಹಾರ ಕೂಟ
ಮುಂಬರುವ ಲೋಕಸಭಾ ಚುನಾವಣೆಗೆ ಧಾರವಾಡ ಕ್ಷೇತ್ರದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸ್ಪರ್ಧೆ ಮಾಡಲಿದ್ದಾರೆಯೇ ಎಂಬ ವದಂತಿ ಇತ್ತೀಚೆಗೆ ಸದ್ದು ಮಾಡಿತ್ತು. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ 68ನೇ ಜನ್ಮ ದಿನ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿರುವ ಅವರ ನಿವಾಸಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಶೆಟ್ಟರ್ ಮತ್ತು ಅವರ ಕುಟುಂಬಸ್ಥರ ಜೊತೆ ಕೆಲಕಾಲ ಮಾತನಾಡಿದರ

ಲೋಕಸಭೆಯಲ್ಲಿ 17 ಸದಸ್ಯರ ರಾಜೀನಾಮೆ, ಆದರೆ ಉಪ ಚುನಾವಣೆ ಇಲ್ಲ, ಏಕೆ?
11 ಸಂಸದರು ರಾಜೀನಾಮೆ ನೀಡಿದ ನಂತರ ಲೋಕಸಭೆಯಲ್ಲಿ ಭಾರತೀಯ ಜನತಾ ಪಕ್ಷದ ಸದಸ್ಯರ ಸಂಖ್ಯೆ 300 ರಿಂದ 289 ಕ್ಕೆ ಇಳಿದಿದೆ.

ನಾನು ಮಂಡ್ಯ ಸೊಸೆ, ನಾನ್ಯಾಕೆ ಕ್ಷೇತ್ರ ಬಿಟ್ಕೊಡಲಿ: ಸಂಸದೆ ಸುಮಲತಾ ಅಂಬರೀಷ್
ನಾನು ಮಂಡ್ಯ ಸೊಸೆ, ಯಾವತ್ತೂ ಮಂಡ್ಯ ಬಿಡಲ್ಲ. ಮುಂದೊಮ್ಮೆ ರಾಜಕಾರಣ ಬಿಡಬಹುದು ಆದರೆ ಸ್ವಾಭಿಮಾನ, ಸಿದ್ದಾಂತ ಬಿಡಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಪುನರುಚ್ಛರಿಸಿದ್ದಾರೆ.

ಮೈತ್ರಿ ಬಗ್ಗೆ ನಾಳೆ ವಿವರವಾಗಿ ಹೇಳುತ್ತೇನೆ, ಅಗತ್ಯಬಿದ್ದರೆ ದೇವೇಗೌಡ-ಪ್ರಧಾನಿ ಮೋದಿ ಭೇಟಿ: ಹೆಚ್ ಡಿ ಕುಮಾರಸ್ವಾಮಿ
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕತೆ ಹಿನ್ನೆಲೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ದೆಹಲಿಗೆ ಹೊರಟಿದ್ದಾರೆ. ಅವರಿಗೆ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಸಾಥ್ ನೀಡಿದ್ದಾರೆ.

