Lok Sabha election results 2024

ಲೋಕಸಭೆ ಚುನಾವಣೆ 2024 ಮತ ಎಣಿಕೆ; ವಹಿವಾಟು ಆರಂಭಕ್ಕೆ ಷೇರುಪೇಟೆ ಕುಸಿತ
ಲೋಕಸಭೆ ಚುನಾವಣೆ 2024ರ ಫಲಿತಾಂಶದ ಮತ ಎಣಿಕೆ ಸಾಗುತ್ತಿದ್ದಂತೆ ಆರಂಭಿಕ ಟ್ರೆಂಡ್ ಪ್ರಕಾರ ಎನ್ ಡಿಎ ಮುನ್ನಡೆ ಸಾಧಿಸುತ್ತಿದ್ದು, ಮಂಗಳವಾರ ಷೇರುಪೇಟೆ ವಹಿವಾಟು ಆರಂಭಕ್ಕೆ ಕುಸಿತ ಕಂಡುಬಂತು.

Election Results 2024: NDA ಮೈತ್ರಿಕೂಟ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ
ಲೋಕಸಭೆ ಚುನಾವಣೆ 2024ರ ಮತ ಎಣಿಕೆ ಪ್ರಗತಿಯಲ್ಲಿದೆ. ಇತ್ತೀಚಿನ ಟ್ರೆಂಡ್‌ಗಳ ಪ್ರಕಾರ ಭಾರತೀಯ ಜನತಾ ಪಾರ್ಟಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು(NDA) 200 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

Lok Sabha Election Results 2024: ಅಂಚೆ ಮತಗಳ ಎಣಿಕೆ; ಕರ್ನಾಟಕದಲ್ಲಿ 11 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ
ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಲ್ಲಿ ಅಂಚೆ ಮತಗಳ ಎಣಿಕೆಯನ್ನು ಮೊದಲು ಕೈಗೆತ್ತಿಕೊಂಡಿದ್ದು, ಬಿಜೆಪಿ 11 ಸ್ಥಾನಗಳಲ್ಲಿ, ಕಾಂಗ್ರೆಸ್ 4 ಮತ್ತು ಜೆಡಿಎಸ್ 2 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (ಬಿಜೆಪಿ) ಕ್ರಮವಾಗಿ ಮಂಡ್ಯ ಮತ್ತು ಧಾರವಾಡ ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Lok Sabha polls 2024 results: ಮತ ಎಣಿಕೆ ಬಿರುಸಿನಲ್ಲಿ, ಆರಂಭಿಕ ಟ್ರೆಂಡ್ ನಲ್ಲಿ ಎನ್ ಡಿಎ ಮುನ್ನಡೆ
ಒಂದೂವರೆ ತಿಂಗಳ ಕಾಲ ನಡೆದ 18 ನೇ ಲೋಕಸಭಾ ಸದಸ್ಯರ ಆಯ್ಕೆಗೆ ಮತದಾನ ಪ್ರಕ್ರಿಯೆಯ ನಂತರ ಇಂದು ಜೂನ್ 4ರಂದು ಅಂಚೆ ಮತ ಎಣಿಕೆ ಮುಕ್ತಾಯವಾಗಿ ವಿದ್ಯುನ್ಮಾನ ಮತ ಎಣಿಕೆಯ ಆರಂಭ ಪ್ರಕ್ರಿಯೆಯಲ್ಲಿ ದೇಶದಲ್ಲಿ ಒಟ್ಟಾರೆಯಾಗಿ ಎನ್ ಡಿಎ ಮೈತ್ರಿಕೂಟ ಅಭ್ಯರ್ಥಿಗಳು ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.

''ಅಬ್ ಕಿ ಬಾರ್ 400 ಪಾರ್''; Exit Poll ಭವಿಷ್ಯ ನಿಜವಾದರೆ, ನೆಹರೂ ದಾಖಲೆ ಸರಿಗಟ್ಟಲಿದ್ದಾರೆ Narendra Modi!
ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ತೀವ್ರ ಕುತೂಹಲ ಕೆರಳಿಸಿರುವ ಈ ಬಾರಿಯ ಚುನಾವಣೆಯಲ್ಲಿ ಮತ್ತೆ ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಅಧಿಕಾರದ ಗದ್ದುಗೆ ಎರಲಿದೆ ಎಂದು ಬಹುತೇಕ Exit Poll ಸರ್ವೆಗಳು ಭವಿಷ್ಯ ನುಡಿದಿವೆ.

LokSabha Election 2024 Results: ಕರ್ನಾಟಕದ 29 ಮತ ಎಣಿಕೆ ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಸಿಬ್ಬಂದಿ ನಿಯೋಜನೆ, ನಾಳೆ ಮದ್ಯ ಮಾರಾಟ ಇಲ್ಲ!
ಹಾಲಿ ಲೋಕಸಭಾ ಚುನಾವಣೆ 2024ರ ಫಲಿತಾಂಶ ಘೋಷಣೆಗೆ ಕ್ಷಣಗಣನೆ ಆರಂಭವಾಗಿದ್ದು, ಕರ್ನಾಟಕದಲ್ಲಿ ಮತಎಣಿಕೆ ಕಾರ್ಯಕ್ಕೆ ರಾಜ್ಯ ಚುನಾವಣಾ ಆಯೋಗದ ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ.

ಲೋಕಸಭೆ ಚುನಾವಣೆ ಫಲಿತಾಂಶ: ಕಾಂಗ್ರೆಸ್ ಸರ್ಕಾರ, ಬಿಜೆಪಿ ನಾಯಕತ್ವ ಮೇಲೆ ಪರಿಣಾಮ?
ಕೇಸರಿ ಪಕ್ಷ ಬಿಜೆಪಿ ಕೇಂದ್ರದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೆ ಮರಳುವ ವಿಶ್ವಾಸದಲ್ಲಿದೆ, ಆದರೆ ಕಾಂಗ್ರೆಸ್ ಮತ್ತು ಅದರ I.N.D.I.A ಬ್ಲಾಕ್ ಪಾಲುದಾರರು ಮೋದಿ-ಶಾ ಅವರನ್ನು ಸ್ಪರ್ಧೆಯಲ್ಲಿ ಕಟ್ಟಿಹಾಕಲು ಪ್ರಯತ್ನಿಸುತ್ತಿದೆ.

