Lok Sabha polls

ಲೋಕಸಭೆ ಚುನಾವಣೆ: ರಾಜ್ಯದ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಶತ ಪ್ರಯತ್ನ- ಸಿ.ಟಿ.ರವಿ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿನ ಎಲ್ಲಾ 28 ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಶತ ಪ್ರಯತ್ನ ಮಾಡಲಿದೆ ಎಂದು ಬಿಜೆಪಿ ಹಿರಿಯ ಮುಖಂಡ ಸಿ.ಟಿ. ರವಿ ಭಾನುವಾರ ಹೇಳಿದ್ದಾರೆ.

ಲೋಕಸಭೆ ಚುನಾವಣೆಗೂ ಮುನ್ನಾ ಸಿಎಎ ಜಾರಿಗೆ: ಅಮಿತ್ ಶಾ
ಡಿಸೆಂಬರ್ 2019 ರಲ್ಲಿ ಸಂಸತ್ತು ಅಂಗೀಕರಿಸಿದ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಮುಂಬರುವ ಲೋಕಸಭೆ ಚುನಾವಣೆಗೂ ಮುನ್ನಾ ಅಧಿಸೂಚನೆ ಹೊರಡಿಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

'ಕೈ' ಕೊಟ್ಟ ಶೆಟ್ರು: ಬೆಳಗಾವಿ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಪ್ರಿಯಾಂಕಾ ಜಾರಕಿಹೊಳಿ ಅಥವಾ ಮೃಣಾಲ್ ಹೆಬ್ಬಾಳ್ಕರ್?
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವುದು ಹಾಲಿ ಸಂಸದೆ ಮಂಗಳಾ ಅಂಗಡಿ ಅವರ ಪುತ್ರಿ ಶ್ರದ್ಧಾ ಶೆಟ್ಟರ್ (ಜಗದೀಶ್ ಶೆಟ್ಟರ್ ಸೊಸೆ) ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಲೋಕಸಭೆಗೆ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಿದೆ.

ರಾಮನನ್ನು ರಾಜಕೀಯ ಸಾಧನವನ್ನಾಗಿ ಮಾಡಬೇಡಿ, ಆತ ಎಲ್ಲರಿಗೂ ದೇವರಾಗಿ ಉಳಿಯಲಿ: ಬಿಜೆಪಿಗೆ ಅಧೀರ್ ರಂಜನ್ ಚೌಧರಿ
ಲೋಕಸಭಾ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಯು ರಾಮನನ್ನು ರಾಜಕೀಯ ಸಾಧನವಾಗಿ ಪರಿಗಣಿಸಬಾರದು ಎಂದು ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಸೋಮವಾರ ಹೇಳಿದ್ದಾರೆ. ಚೀನಾ ಮತ್ತು ಮಾಲ್ಡೀವ್ಸ್ ಕುರಿತ ಸರ್ಕಾರದ ನೀತಿಯನ್ನೂ ಅವರು ಪ್ರಶ್ನಿಸಿದ್ದಾರೆ.

ಲೋಕಸಭಾ ಚುನಾವಣೆ: ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ರತ್ಲಾಮ್ ನಲ್ಲಿ ಫೆ.11ಕ್ಕೆ ಪ್ರಧಾನಿ ಮೋದಿ ರಣಕಹಳೆ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಶಯದೊಂದಿಗೆ ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 11 ರಂದು ಎಸ್.ಟಿ ಕ್ಷೇತ್ರ ರತ್ಲಾಮ್-ಜಬುವಾದಲ್ಲಿ ರಣಕಹಳೆ ಮೊಳಗಿಸಲಿದ್ದಾರೆ.

ಗೆಲ್ಲುವ ಅಭ್ಯರ್ಥಿಗಳ ಆಯ್ಕೆ ಮಾಡಲು ಕಾಂಗ್ರೆಸ್ ಹೈಕಮಾಂಡ್ ಹೈರಾಣ: ಸಚಿವರಿಗೆ ಬೇಡವಾಗಿದೆ 'ರಾಷ್ಟ್ರ ರಾಜಕಾರಣ'!
ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಹಿರಿಯರು ಮತ್ತು ಸಚಿವರು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಗೆ ಗೆಲ್ಲುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದು ಕಷ್ಟಕರವಾದಂತಿದೆ, ಇದರ ಪರಿಣಾಮವಾಗಿ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಲು ವಿಳಂಬವಾಗಿದೆ.

‘ಇಂಡಿಯಾ’ ಮೈತ್ರಿಕೂಟ ಲೋಕಸಭೆ ಚುನಾವಣೆಗೆ ಮಾತ್ರ, ಯಾವುದೇ ರಾಜ್ಯದ ವಿಧಾನಸಭೆ ಚುನಾವಣೆಗೆ ಅಲ್ಲ: ಕಾಂಗ್ರೆಸ್
‘ಇಂಡಿಯಾ’ ಮೈತ್ರಿಕೂಟ 2024ರ ಲೋಕಸಭೆ ಚುನಾವಣೆಗೆ ಹೊರತು ಯಾವುದೇ ರಾಜ್ಯದ ವಿಧಾನಸಭೆ ಚುನಾವಣೆಗೆ ಅಲ್ಲ ಎಂದು ಕಾಂಗ್ರೆಸ್ ಶುಕ್ರವಾರ ಸ್ಪಷ್ಟಪಡಿಸಿದೆ. ಅಲ್ಲದೆ ಲೋಕಸಭೆ ಚುನಾವಣೆಗೆ 27 ವಿರೋಧ ಪಕ್ಷಗಳ ಮೈತ್ರಿಕೂಟ...

ಲೋಕಸಭೆ ಚುನಾವಣೆಗೆ 'ಕೈ' ಭರ್ಜರಿ ಸಿದ್ಧತೆ: ಬೆಂಗಳೂರಿಗೆ ಎಲಿವೇಟೆಡ್ ಮೇಲ್ಸೇತುವೆ ಸೇರಿ ಹಲವು ಯೋಜನೆಗಳಿಗೆ ಸಂಪುಟ ಅನುಮೋದನೆ
ಲೋಕಸಭಾ ಚುನಾವಣೆಗೆ ರಾಜ್ಯ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸುತ್ತಿದ್ದು, ಗುರುವಾರ ನಡೆದ ಸಂಪುಟ ಸಭೆಯಲ್ಲಿ ಬೆಂಗಳೂರಿಗೆ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಸ್ ಬಳಿ ಎಲಿವೇಟೆಡ್ ಮೇಲ್ಸೇತುವೆಗೆ 263 ಕೋಟಿ ರೂಪಾಯಿ ಸೇರಿದಂತೆ ಹಲವು ಯೋಜನೆಗಳು ಮತ್ತು ಕಾಮಗಾರಿಗಳಿಗೆ ಹಸಿರು ನಿಶಾನೆ ತೋರಿದೆ.

ಬಂಡಾಯ ಶಮನಕ್ಕೆ 'ಹೈ ಕಮಾಂಡ್' ಸೂತ್ರ; ನಿಗಮ-ಮಂಡಳಿಗಳ ಅಧ್ಯಕ್ಷರ ಅಧಿಕಾರಾವಧಿ 2 ವರ್ಷಕ್ಕೆ ಇಳಿಕೆ
ಲೋಕಸಭೆ ಚುನಾವಣೆಗೂ ಮುನ್ನ ಪಕ್ಷದ ಕಾರ್ಯಕರ್ತರಿಗೆ ವಿವಿಧ ಮಂಡಳಿ ಮತ್ತು ನಿಗಮಗಳ ಅಧ್ಯಕ್ಷ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿಗಮ- ಮಂಡಳಿಗಳ ಅಧ್ಯಕ್ಷರ ಅವಧಿಯನ್ನು ಎರಡು ವರ್ಷಕ್ಕೆ ಇಳಿಸಿದೆ.

