Lok Sabha polls

ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
ಮುಂಬರುವ ಲೋಕಸಭೆ ಚುನಾವಣೆ ಬಿಜೆಪಿಗೆ ಅಗ್ನಿಪರೀಕ್ಷೆಯಾಗಿದ್ದು, ರಾಜ್ಯ ಬಿಜೆಪಿಗೂ ಮಹತ್ವದ ತಿರುವು ನೀಡಲಿದೆ ಎಂದು ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದಾರೆ.

ಬಿಜೆಪಿ ಕಾರ್ಯಕಾರಿಣಿ ಸಭೆ: ಲೋಕಸಭೆ ಚುನಾವಣೆಯಲ್ಲಿ ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬೇಡಿ- ವಿಜಯೇಂದ್ರ
ಲೋಕಸಭಾ ಚುನಾವಣೆಯಲ್ಲಿ ರಾಜಕೀಯ ಎದುರಾಳಿಗಳನ್ನು ಲಘುವಾಗಿ ಪರಿಗಣಿಸಬೇಡಿ ಎಂದು ಪಕ್ಷದ ನಾಯಕರು ಮತ್ತು ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿರುವ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ಎನ್‌ಡಿಎ ಸರ್ಕಾರದ ಸಾಧನೆಗಳನ್ನು ಜನರ ಮುಂದಿಟ್ಟು ಅದರ ಗೆಲುವಿಗೆ ಅವಿರತವಾಗಿ ಶ್ರಮಿಸುವಂತೆ ಶನಿವಾರ ಕರೆ ನೀಡಿದ್ದಾರೆ.

ಲೋಕಸಭಾ ಚುನಾವಣೆ: ಉತ್ತರ ಪ್ರದೇಶದಲ್ಲಿ 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ನೊಂದಿಗೆ ಎಸ್ಪಿ ಮೈತ್ರಿ-ಅಖಿಲೇಶ್ ಯಾದವ್
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಹಾಗೂ ಸಮಾಜವಾದಿ ಪಕ್ಷಗಳು ಮೈತ್ರಿ ಕುರಿತ ಮಹತ್ವದ ಮಾಹಿತಿ ಹೊರಬಂದಿದೆ.

ಲೋಕಸಭಾ ಚುನಾವಣೆ: ಅನಂತಕುಮಾರ್ ಹೆಗಡೆ ಯೋಗ್ಯರಲ್ಲ; ಹೊಸಬರಿಗೆ ಅವಕಾಶ ಕೊಡಿ- ಹಿರಿಯ ಬಿಜೆಪಿ ಮುಖಂಡ
ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಅವರು ತಮ್ಮ ಹುದ್ದೆಗೆ ಅನರ್ಹರು ಎಂದು ಆರೋಪಿಸಿರುವ ಬಿಜೆಪಿ ಹಿರಿಯ ಮುಖಂಡ ಜಯಂತ್ ತಿನಾಯ್ಕರ್ ಅವರಿಗೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡದಂತೆ ಪಕ್ಷದ ಹೈಕಮಾಂಡ್‌ಗೆ ಒತ್ತಾಯಿಸಿದ್ದಾರೆ.

ಲೋಕ ಸಮರ: 'ಕೈ' ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಬಗ್ಗೆ ಅಪಸ್ವರ; ಸಮರ್ಥರ ಕೊರತೆ ನೀಗಲು ಅಖಾಡಕ್ಕೆ ವರ್ಚಸ್ವಿ ಸಚಿವರು!
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಪ್ರದೇಶ ಚುನಾವಣಾ ಸಮಿತಿ (ಪಿಇಸಿ) ಸಭೆ ನಡೆಸಿ ಚರ್ಚಿಸಿತು.

ಅಮಿತ್ ಶಾ, ನಡ್ಡಾ ಜೊತೆಗೆ ಕುಮಾರಸ್ವಾಮಿ ಮಹತ್ವದ ಸಭೆ; ಜೆಡಿಎಸ್- ಬಿಜೆಪಿ ನಡುವೆ ಸೀಟು ಹಂಚಿಕೆ ಕುರಿತು ಚರ್ಚೆ
ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಬುಧವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ್ದು, ಮುಂಬರುವ ಲೋಕಸಭಾ ಚುನಾವಣೆಯ ಸಿದ್ಧತೆಗಳ ಕುರಿತು ಮಹತ್ವದ ಸಭೆ ನಡೆಸಿದ್ದಾರೆ.

ಲೋಕಸಮರ: ಶಕ್ತಿ ಕೇಂದ್ರವಾದ ದೊಡ್ಡಗೌಡರ ನಿವಾಸ; ಬಿಜೆಪಿಯ ಎರಡು ಬಣಗಳಿಗೂ ದೇವೇಗೌಡರು ಅನಿವಾರ್ಯ!
ಜೆಡಿಎಸ್- ಬಿಜೆಪಿ ಮೈತ್ರಿಯ ನಂತರ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ನಿವಾಸ ಶಕ್ತಿ ಕೇಂದ್ರವಾಗಿದೆ. ರಾಜ್ಯ ರಾಜಕಾರಣದಲ್ಲಿ ತಮ್ಮ ಪ್ರಾಬಲ್ಯವನ್ನು ಸಾಬೀತು ಪಡಿಸುತ್ತಿದ್ದಾರೆ. ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ನಾಯಕರು ದೇವೇಗೌಡರ ನಿವಾಸಕ್ಕೆ ಎಡತಾಕುತ್ತಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸದಂತೆ ವಿ ಸೋಮಣ್ಣ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿ!
ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದ ಮಾಜಿ ಸಚಿವ, ಬಿಜೆಪಿ ನಾಯಕ ವಿ ಸೋಮಣ್ಣ ಅವರ ಮನವೊಲಿಸುವಲ್ಲಿ ಬಿಜೆಪಿ ಹೈಕಮಾಂಡ್ ಯಶಸ್ವಿಯಾಗಿದೆ.

ಲೋಕಸಭಾ ಚುನಾವಣೆ: ಪಕ್ಷದ ಅಭ್ಯರ್ಥಿ ಗೆಲ್ಲಿಸದ ಸಚಿವರ ತಲೆದಂಡ- ಡಾ. ಜಿ.ಪರಮೇಶ್ವರ್
ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸದ ಸಚಿವರ ತಲೆದಂಡ ಆಗಲಿದೆ ಎಂಬ ಎಚ್ಚರಿಕೆಯನ್ನು ಹೈಕಮಾಂಡ್ ಕೊಟ್ಟಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

