Lok Sabha polls

ಡಿ.ಕೆ ಸುರೇಶ್ ಸೋಲಿಸಲು ತಂತ್ರ: ವೈರತ್ವ ಮರೆತು ಕುಮಾರಸ್ವಾಮಿ-ಯೋಗೇಶ್ವರ್ ಒಗ್ಗಟ್ಟಿನ ಮಂತ್ರ; ಗೌಡರ ಜೊತೆ ಸಿಎಂ ಚರ್ಚೆ
ಮುಂಬರುವ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಹಿನ್ನೆಲೆ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬಿಜೆಪಿಯ ಸಿಪಿ ಯೋಗೇಶ್ವರ್ ಮತ್ತು ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ರಾಜಕೀಯ ಬದ್ಧ ವೈರತ್ವ ಮರೆತು ಒಂದಾಗಿದ್ದಾರೆ.

ಲೋಕಸಭಾ ಚುನಾವಣೆ: ಜನವರಿಗೂ ಮುನ್ನವೇ ರಾಜ್ಯದ ಕೈ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಧ್ಯತೆ- ಡಿಸಿಎಂ ಡಿಕೆ ಶಿವಕುಮಾರ್
ಲೋಕಸಭೆ ಚುನಾವಣೆಗೆ ರಾಜ್ಯದ ಕಾಂಗ್ರೆಸ್‌ನ ಅಭ್ಯರ್ಥಿಗಳ ಪಟ್ಟಿ ಜನವರಿಗೂ ಮುನ್ನವೇ ಬಿಡುಗಡೆ ಮಾಡಿದರೆ ಆಶ್ಚರ್ಯವೇನಿಲ್ಲ, ಹತ್ತು ದಿನಗಳೊಳಗೆ ವರದಿ ನೀಡುವಂತೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಕಾಂಗ್ರೆಸ್ ಟಾಂಗ್
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಮತ್ತು ಜಾತ್ಯತೀತ ಜನತಾದಳ ಮೈತ್ರಿ ಕುರಿತ ಮಾತುಕತೆಯ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಜೆಡಿಎಸ್ ಪಕ್ಷಕ್ಕೆ ರಾಜ್ಯಾಧ್ಯಕ್ಷ ಅಂತ ಒಬ್ಬರಿದ್ದರು ಈ ಚಿತ್ರದಲ್ಲಿ ಅವರೆಲ್ಲಿದ್ದಾರೆ? ಎಂದು ಟಾಂಗ್ ನೀಡಿದೆ.

ಬಿಜೆಪಿ ಡಿಸೆಂಬರ್‌ನಲ್ಲಿ ಲೋಕಸಭಾ ಚುನಾವಣೆ ಘೋಷಣೆ ಸಾಧ್ಯತೆ, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್ ಬುಕ್: ಮಮತಾ ಬ್ಯಾನರ್ಜಿ
ಭಾರತೀಯ ಜನತಾ ಪಕ್ಷವು ಡಿಸೆಂಬರ್‌ನಲ್ಲಿ ಲೋಕಸಭೆ ಚುನಾವಣೆ ಘೋಷಿಸುವ ಸಾಧ್ಯತೆಯಿದ್ದು, ಪ್ರಚಾರಕ್ಕಾಗಿ ಎಲ್ಲಾ ಹೆಲಿಕಾಪ್ಟರ್‌ಗಳನ್ನುಕಾಯ್ದಿರಿಸಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ವಾರಣಾಸಿಯಿಂದ ಪ್ರಿಯಾಂಕಾ ಕಣಕ್ಕಿಳಿಸಲು ಯುಪಿ ಕಾಂಗ್ರೆಸ್ ಉತ್ಸುಕ!
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಹಿರಿಯ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಕಣಕ್ಕಿಳಿಸಲು ಉತ್ತರ ಪ್ರದೇಶ ಕಾಂಗ್ರೆಸ್ ಸಮಿತಿಯು ಉತ್ಸುಕವಾಗಿದೆ. ಈ ಬಗ್ಗೆ ಶೀಘ್ರದಲ್ಲೇ ವರಿಷ್ಠರಿಗೆ ಪ್ರಸ್ತಾವನೆ ಕಳುಹಿಸಲಿದೆ ಎಂದು ಪಕ್ಷದ ನೂತನ ರಾಜ್ಯಾಧ್ಯಕ್ಷ ಅಜಯ್ ರೈ ಭಾನುವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ಅನ್ಯ ಪಕ್ಷಗಳ ಕಾರ್ಯಕರ್ತರು ಕಾಂಗ್ರೆಸ್ ಸೇರಲು ಒಲವು- ಡಿಸಿಎಂ ಡಿಕೆ ಶಿವಕುಮಾರ್
2024ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿಯ ಕೆಲವು ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆ ಇದೆ ಎಂಬ ಊಹಾಪೋಹಗಳ ನಡುವೆಯೇ, ಅನ್ಯ ಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ ಸೇರಲು ಒಲವು ತೋರಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಸಚಿವ ಕೆ ಎಚ್ ಮುನಿಯಪ್ಪ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ ಎಂದು ಆಹಾರ ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಬುಧವಾರ ಹೇಳಿದ್ದಾರೆ.

ಲೋಕಸಭಾ ಚುನಾವಣೆ: ದೆಹಲಿಯಲ್ಲಿ ಕಾಂಗ್ರೆಸ್ ಗೆ ಬಿಸಿತುಪ್ಪವಾದ ಎಎಪಿ! ಎಚ್ಚರಿಕೆ ಸಂದೇಶ ರವಾನೆ
2024ರ ಲೋಕಸಭೆ ಚುನಾವಣೆಯಲ್ಲಿ ರಾಷ್ಟ್ರರಾಜಧಾನಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಎಪಿ ಬಿಸಿತುಪ್ಪವಾಗುವ ಲಕ್ಷಣಗಳು ಗೋಚರಿಸುತ್ತಿವೆ. ದೆಹಲಿಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಲು ಮನಸ್ಸು ಮಾಡಿದ್ದರೆ INDIA ಒಕ್ಕೂಟದಿಂದ ಹೊರ ಬರುವುದಾಗಿ ಆಮ್ ಆದ್ಮಿ ಪಕ್ಷ ಬುಧವಾರ ಎಚ್ಚರಿಕೆ ನೀಡಿದೆ.

ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಬಿಜೆಪಿ ನಮ್ಮನ್ನು ಗುರಿಯಾಗಿಸುತ್ತಿದೆ: ಸಿಎಂ ಸಿದ್ದರಾಮಯ್ಯ
2024ರ ಲೋಕಸಭಾ ಚುನಾವಣೆಯಲ್ಲಿ ಸೋಲುವ ಭೀತಿಯಲ್ಲಿರುವ ಬಿಜೆಪಿ ನಮ್ಮನ್ನು ಗುರಿಯಾಗಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ.

