Lok Sabha

ಲೋಕಸಭೆಯಲ್ಲಿ ಭದ್ರತಾ ಲೋಪ: ಆರೋಪಿಗಳ ವಿರುದ್ಧ ಯುಎಪಿಎ ಅಡಿ ಕೇಸು ದಾಖಲು, ಸಂಸತ್ತು ಆವರಣದಲ್ಲಿ ಬಿಗಿ ಭದ್ರತೆ
ಲೋಕಸಭೆಯಲ್ಲಿ ಕಲಾಪ ನಡೆಯುತ್ತಿದ್ದ ವೇಳೆ ಒಳನುಗ್ಗಿ ಗೊಂದಲ ವಾತಾವರಣ ಸೃಷ್ಟಿಸಿ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಂಸತ್ ಭದ್ರತಾ ಲೋಪ: ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರ ತೀವ್ರ ಪ್ರತಿಭಟನೆ, ಸಂಸದರ ಪದಚ್ಯುತಿಗೆ ಆಗ್ರಹ
ಸಂಸತ್ ಭವನದಲ್ಲಿ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಂತುಕರಿಗೆ ಪಾಸ್ ನೀಡಿದ ಆರೋಪದ ಮೇರೆಗೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಕಚೇರಿ ಎದುರು ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದ್ದು, ಸಂಸದರ ಪದಚ್ಯುತಿಗೆ ಆಗ್ರಹಿಸಿದರು.

ಸಂಸತ್ ಕಲಾಪ: ಡರೆಕ್ ಒಬ್ರಿಯಾನ್ ಬೆನ್ನಲ್ಲೇ 5 ಲೋಕಸಭಾ ಸದಸ್ಯರ ಅಮಾನತು
ಲೋಕಸಭೆ ಭದ್ರತಾ ಲೋಪ ಪ್ರಕರಣದ ಬೆನ್ನಲ್ಲೇ ಸಂಸತ್ ನ ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ ಮುಂದುವರೆದಿದ್ದು, ಇದೀಗ ಡರೆಕ್ ಒಬ್ರಿಯಾನ್ ಬೆನ್ನಲ್ಲೇ ಲೋಕಸಭೆಯ 5 ಮಂದಿ ಸದಸ್ಯರನ್ನು ಅಮಾನತು ಮಾಡಲಾಗಿದೆ.

ಲೋಕಸಭೆಯಲ್ಲಿ ಭದ್ರತಾ ಲೋಪ: ಬೆಳಗಾವಿ ಸುವರ್ಣಸೌಧದಲ್ಲಿ ಹೆಚ್ಚಿದ ಭದ್ರತೆ, ಎಲ್ಲೆಡೆ ಕಟ್ಟೆಚ್ಚರ
ಲೋಕಸಭೆಯಲ್ಲಿ ‘ಭದ್ರತಾ ಲೋಪ’ ನಡೆದು ಆಗಂತುಕರು ಸದನದೊಳಗೆ ನುಗ್ಗಿ ಅವಾಂತರ ಸೃಷ್ಟಿಸಿದ ಬೆನ್ನಲ್ಲೇ ಬೆಳಗಾವಿಯ ಸುವರ್ಣಸೌಧದಲ್ಲಿ ಭದ್ರತೆ ಹೆಚ್ಚಿಸಿ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ.

ಲೋಕಸಭೆಯಲ್ಲಿ ಭಾರೀ ಭದ್ರತಾ ವೈಫಲ್ಯ: ಸಂಸದರ ಸಭೆ ಕರೆದ ಲೋಕಸಭಾಧ್ಯಕ್ಷ
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಭದ್ರತಾ ಲೋಪವನ್ನು ಕೂಲಂಕಷವಾಗಿ ಪರಿಶೀಲಿಸಲಾಗುತ್ತಿದೆ. ಈ ವಿಷಯದ ತಮ್ಮ ಆತಂಕ, ವಿಚಾರಗಳನ್ನು ತಿಳಿಸಲು ಇಂದು ಸಾಯಂಕಾಲ ಎಲ್ಲಾ ಪಕ್ಷಗಳ ಸಂಸದರ ಸಭೆಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪ: ಅಶ್ರುವಾಯು ಸಿಡಿಸುತ್ತಾ ಗ್ಯಾಲರಿಯಿಂದ ನುಗ್ಗಿದ ಇಬ್ಬರು, ನಾಲ್ವರು ವಶಕ್ಕೆ
ಲೋಕಸಭೆಯಲ್ಲಿ ಇಂದು ಬುಧವಾರ ಭಾರೀ ಭದ್ರತಾ ಲೋಪವಾಗುವ ಘಟನೆ ನಡೆದಿದ್ದು, ಸಂಸತ್ತಿನ ಮೇಲೆ ದಾಳಿಯ 22 ನೇ ವಾರ್ಷಿಕೋತ್ಸವದಂದು ಇಬ್ಬರು ಒಳನುಸುಳಿ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಸದನದ ಸುತ್ತಲೂ ಓಡಾಡಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ.

ಪುದುಚೇರಿ, ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮಹಿಳಾ ಮೀಸಲಾತಿ ವಿಸ್ತರಿಸುವ 2 ಮಸೂದೆಗೆ ಲೋಕಸಭೆ ಅಂಗೀಕಾರ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ರಷ್ಟು ಮೀಸಲಾತಿಯನ್ನು ಕಲ್ಪಿಸುವ ಸಂವಿಧಾನ(106ನೇ ತಿದ್ದುಪಡಿ) ಕಾಯ್ದೆಯ ನಿಬಂಧನೆಗಳನ್ನು ಕೇಂದ್ರಾಡಳಿತ ಪ್ರದೇಶಗಳಾದ ಪುದುಚೇರಿ ಮತ್ತು ಜಮ್ಮು-ಕಾಶ್ಮೀರ...

ಲೋಕಸಭೆಯಿಂದ ಉಚ್ಛಾಟನೆ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಹುವಾ ಮೊಯಿತ್ರಾ, ಶೀಘ್ರದಲ್ಲೇ ಅರ್ಜಿ ವಿಚಾರಣೆ ಸಾಧ್ಯತೆ
ತಮ್ಮನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡಿರುವ ಕೇಂದ್ರ ಸರ್ಕಾರದ ನಡೆಯನ್ನು ಪ್ರಶ್ನಿಸಿ 49 ವರ್ಷದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ ಎಂದು ಪ್ರಕರಣಕ್ಕೆ ಸಂಬಂಧಿಸಿದ ವಕೀಲರು ಟಿಎನ್ಐಇಗೆ ತಿಳಿಸಿದ್ದಾರೆ.

ಮಹುವಾ ಸಂಸದ ಸ್ಥಾನದಿಂದ ಉಚ್ಚಾಟನೆ ಪ್ರಶ್ನಿಸಿ ಸುಪ್ರೀಂ ಮೊರೆ ಹೋಗಬಹುದು: ಕಾನೂನು ತಜ್ಞರು
ಉಚ್ಚಾಟಿತ ತೃಣಮೂಲ ಕಾಂಗ್ರೆಸ್(ಟಿಎಂಸಿ) ನಾಯಕಿ ಮತ್ತು ಮಾಜಿ ಲೋಕಸಭಾ ಸಂಸದೆ ಮಹುವಾ ಮೊಯಿತ್ರಾ ಅವರು ಭಾರತೀಯ ಸಂವಿಧಾನದ 32ನೇ ವಿಧಿಯ ಅಡಿಯಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಬಹುದು ಎಂದು ಕಾನೂನು ತಜ್ಞರು...

