Lok Sabha

'ಉಚ್ಛಾಟನೆಯಿಂದ ಮಹುವಾಗೆ ಮತ್ತಷ್ಟು ಪ್ರಚಾರ, ಜನಪ್ರಿಯತೆ': ಮೊದಲ ಬಾರಿಗೆ ಮೌನ ಮುರಿದ ಮಮತಾ ಬ್ಯಾನರ್ಜಿ!
ಲೋಕಸಭೆಯಲ್ಲಿ ಪ್ರಶ್ನೆಗಳನ್ನು ಕೇಳಲು ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, 'ಉಚ್ಛಾಟನೆಯಿಂದ ಮಹುವಾ ಮೋಯಿತ್ರಾಗೆ ಮತ್ತಷ್ಟು ಪ್ರಚಾರ ಸಿಗಲಿದ್ದು, ಆಕೆ ಮತ್ತಷ್ಟು ಜನಪ್ರಿಯಳಾಗುತ್ತಾರೆ ಎಂದು ಹೇಳಿದ್ದಾರೆ.

ಲೋಕಸಭೆಯಲ್ಲಿ 700 ಕ್ಕೂ ಹೆಚ್ಚು ಖಾಸಗಿ ಮಸೂದೆಗಳು ಬಾಕಿ!
ಲೋಕಸಭೆಯಲ್ಲಿ 700ಕ್ಕೂ ಹೆಚ್ಚು ಖಾಸಗಿ ಮಸೂದೆಗಳು ಬಾಕಿ ಉಳಿದಿದ್ದು, ಅವುಗಳಲ್ಲಿ ಹಲವು ದಂಡದ ನಿಬಂಧನೆಗಳು ಮತ್ತು ಚುನಾವಣಾ ಕಾನೂನುಗಳನ್ನು ತಿದ್ದುಪಡಿ ಮಾಡುವಂತೆ ಕೋರಿವೆ.

ಮೇಲ್ಮನೆಯಲ್ಲೂ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ ಅಂಗೀಕಾರ! ಸಂಸತ್ ಕಲಾಪ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ
ಸಂಸತ್ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಒದಗಿಸುವ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಲ್ಲೂ ಗುರುವಾರ ಅಂಗೀಕಾರವಾಯಿತು. ಇದರೊಂದಿಗೆ ಸಂಸತ್ತಿನ ಉಭಯ ಸದನಗಳಲ್ಲಿಯೂ ಮಸೂದೆ ಅಂಗೀಕಾರವಾಗಿದೆ.

ಲೋಕಸಭೆ, ರಾಜ್ಯ ವಿಧಾನಸಭೆಗಳಲ್ಲಿ ಎಸ್ಸಿ/ಎಸ್ಟಿಗೆ ಮೀಸಲಾತಿ ವಿಸ್ತರಣೆ: ಸುಪ್ರೀಂ ಕೋರ್ಟ್ ಪರಿಶೀಲನೆ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಎಸ್ಸಿ/ಎಸ್ಟಿ ಮೀಸಲಾತಿಯ ಗಡುವನ್ನು ವಿಸ್ತರಿಸಲು ಸಂಸತ್ತು ತನ್ನ ಸಂವಿಧಾನಾತ್ಮಕ ಅಧಿಕಾರವನ್ನು ಬಳಸಬಹುದೇ ಎಂಬುದನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ.

454-2: ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆ ಅಸ್ತು, ಇಂದು ರಾಜ್ಯಸಭೆಯಲ್ಲಿ ಮಂಡನೆ
ನೂತನ ಸಂಸತ್ತು ಕಟ್ಟಡದ ಕೆಳಮನೆಯ ಲೋಕಸಭೆಯಲ್ಲಿ ಬುಧವಾರ ಮಹಿಳಾ ಮೀಸಲಾತಿ ಮಸೂದೆಯನ್ನು 454 ಮತಗಳ ಬಹುಮತದಿಂದ ಅಂಗೀಕರಿಸುವ ಮೂಲಕ ಇತಿಹಾಸ ನಿರ್ಮಿಸಿದೆ. ಸಂಸತ್ತಿನಲ್ಲಿ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆಯಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಮಸೂದೆಯ ವಿರುದ್ಧ ಕೇವಲ ಇಬ್ಬರು ಸಂಸದರು ಮತ ಚಲಾಯಿಸಿದ್ದಾರೆ.

ಲೋಕಸಭೆಯಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ; ನಾಳೆ ರಾಜ್ಯಸಭೆಯಲ್ಲಿ ಮಂಡನೆ ಸಾಧ್ಯತೆ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡುವ ಬಹು ನಿರೀಕ್ಷಿತ ನಾರಿ ಶಕ್ತಿ ವಂದನ್ ವಿಧೇಯಕ(ಮಹಿಳಾ ಮೀಸಲಾತಿ ಮಸೂದೆ)ಯನ್ನು ಬುಧವಾರ ಲೋಕಸಭೆಯಲ್ಲಿ...

ಹಳೇ ಸಂಸತ್ ಭವನಕ್ಕೆ ವಿದಾಯ: ಪ್ರಧಾನಿ ಮೋದಿ ಸೇರಿ ಲೋಕಸಭಾ, ರಾಜ್ಯಸಭಾ ಸದಸ್ಯರ ಗ್ರೂಪ್ ಫೋಟೋ
ಹಳೇ ಸಂಸತ್ ಭವನದಿಂದ ಕಲಾಪಗಳು ಹೊಸ ಸಂಸತ್ ಕಟ್ಟಡಕ್ಕೆ ಮಂಗಳವಾರ ಸ್ಥಳಾಂತರಗೊಂಡಿದ್ದು, ಇದಕ್ಕೂ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ, ಲೋಕಸಭೆ ಹಾಗೂ ರಾಜ್ಯಸಭೆ ಸದಸ್ಯರು ಒಟ್ಟಾಗಿ ಗ್ರೂಪ್ ಫೋಟೋ ತೆಗೆಸಿಕೊಂಡರು.

ವಿಶೇಷ ಅಧಿವೇಶನ: ಉಭಯ ಸದನಗಳು ಮುಂದೂಡಿಕೆ; ನಾಳೆ ಹೊಸ ಸಂಸತ್ ಭವನದಲ್ಲಿ ಕಲಾಪ ಮುಂದುವರಿಕೆ
ಸಂಸತ್ ನ ಸುಧೀರ್ಘ 75 ವರ್ಷಗಳ ಪಯಣ ಕುರಿತ ಚರ್ಚೆಯ ನಂತರ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪವನ್ನು ನಾಳೆಗೆ ಮುಂದೂಡಲಾಯಿತು. ಮಂಗಳವಾರ ಮಧ್ಯಾಹ್ನ ಹೊಸ ಸಂಸತ್ ಭವನದಲ್ಲಿ ಮತ್ತೆ ಕಲಾಪ ಪುನರ್ ಆರಂಭವಾಗಲಿದೆ.

ಲೋಕಸಭೆಯಲ್ಲಿ GST ತಿದ್ದುಪಡಿ ಮಸೂದೆ ಅಂಗೀಕಾರ; ಆನ್ಲೈನ್ ಗೇಮಿಂಗ್, ಕುದುರೆ ರೇಸ್ ಮೇಲೆ ಶೇ.28 ರಷ್ಟು ತೆರಿಗೆ
ಕೇಂದ್ರ ಸರ್ಕಾರ ಆನ್ಲೈನ್ ಗೇಮಿಂಗ್, ಕ್ಯಾಸಿನೊಗಳು ಮತ್ತು ಕುದುರೆ ರೇಸ್ ಕ್ಲಬ್ಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ವಿಧಿಸಲು ಕೇಂದ್ರಿಯ ಮತ್ತು ಸಮಗ್ರ ಜಿಎಸ್ಟಿ ಕಾನೂನು ತಿದ್ದುಪಡಿ ಮಸೂದೆಯನ್ನು ಶುಕ್ರವಾರ ಲೋಕಸಭೆ ಅಂಗೀಕರಿಸಿದೆ.

