Lok Sabha

ರಾಹುಲ್ ಗಾಂಧಿ ಲೋಕಸಭೆ ಸದಸ್ಯತ್ವ ಪುನಃಸ್ಥಾಪಿಸಿದ ಸ್ಪೀಕರ್ ಓಂ ಬಿರ್ಲಾ: ಇಂದಿನ ಕಲಾಪದಲ್ಲಿ ಭಾಗಿ!
ಮೋದಿ ಉಪನಾಮ ಟೀಕೆ ಪ್ರಕರಣಕ್ಕೆ ಸಂಬಂಧಿಸಿ ಸೂರತ್ ನ್ಯಾಯಾಲಯವು ಕಾಂಗ್ರೆಸ್ ಮುಖಂಡ ರಾಹುಲ್ಗಾಂಧಿ ಅವರಿಗೆ ವಿಧಿಸಿದ್ದ 2 ವರ್ಷಗಳ ಜೈಲು ಶಿಕ್ಷೆ ಪ್ರಕರಣಕ್ಕೆ ಸುಪ್ರಿಂಕೋರ್ಟ್ ತಡೆಯಾಜ್ಞೆ ವಿಧಿಸಿದ ಬೆನ್ನಲ್ಲೇ, ರಾಹುಲ್ ಗಾಂಧಿಯವರ ಸಂಸತ್ ಸದಸ್ಯತ್ವವನ್ನು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಪುನಃಸ್ಥಾಪಿಸಿದ್ದಾರೆ.

ರಾಷ್ಟ್ರಪತಿಯನ್ನು ಮುಖ್ಯಸ್ಥರನ್ನಾಗಿಸುವ ಐಐಎಂ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ
ದೇಶದ ಎಲ್ಲಾ ಐಐಎಂಗಳಿಗೆ ರಾಷ್ಟ್ರಪತಿಗಳನ್ನು ಸಂದರ್ಶಕ ಮುಖ್ಯಸ್ಥರನ್ನಾಗಿ ನೇಮಕ ಮಾಡಲು ಅವಕಾಶ ಕಲ್ಪಿಸುವ ಐಐಎಂ ಮಸೂದೆ 2023 ಅನ್ನು ಲೋಕಸಭೆಯಲ್ಲಿ ಶುಕ್ರವಾರ ಅಂಗೀಕರಿಸಲಾಗಿದೆ.

ಲೋಕಸಭೆಯಲ್ಲಿ ಧ್ವನಿ ಮತದ ಮೂಲಕ ದೆಹಲಿ ಸೇವಾ ಮಸೂದೆ ಅಂಗೀಕಾರ
ಕೇಂದ್ರ ಸರ್ಕಾರ ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ಸಂಬಂಧ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಬದಲಾಯಿಸುವ ರಾಷ್ಟ್ರ ರಾಜಧಾನಿ ದೆಹಲಿ ಪ್ರದೇಶ ಸರ್ಕಾರ ತಿದ್ದುಪಡಿ ಮಸೂದೆ, 2023 ಅನ್ನು ಗುರುವಾರ ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಂಗೀಕರಿಸಲಾಗಿದೆ.

ಮಣಿಪುರ ವಿಚಾರವಾಗಿ ಮುಂದುವರಿದ ವಿಪಕ್ಷಗಳ ಪ್ರತಿಭಟನೆ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ
ಮಣಿಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆ ಮುಂದುವರಿದಿದ್ದು, ಲೋಕಸಭೆ ಕಲಾಪಕ್ಕೆ ಗುರುವಾರವೂ ಅಡ್ಡಿಯುಂಟಾಯಿತು. ಪ್ರತಿಭಟನೆ ನಡುವೆಯೇ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಮಣಿಪುರ ಹಿಂಸಾಚಾರ: ವಿಪಕ್ಷಗಳಿಂದ ಮುಂದುವರಿದ ಪ್ರತಿಭಟನೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಮಣಿಪುರ ಹಿಂಸಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಆಗಸ್ಟ್ 8 ರಂದು ಲೋಕಸಭೆಯಲ್ಲಿ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ; ಪ್ರಧಾನಿ ಮೋದಿಯಿಂದ ಉತ್ತರ!
ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಿಪಕ್ಷಗಳು ಈಗಾಗಲೇ ಅವಿಶ್ವಾಸ ನಿರ್ಣಯ ಮಂಡಿಸಿವೆ. ಲೋಕಸಭೆಯಲ್ಲಿ ಆಗಸ್ಟ್ 8 ಮತ್ತು 10ರ ನಡುವೆ ಅವಿಶ್ವಾಸ ನಿರ್ಣಯದ ಮೇಲೆ ಚರ್ಚೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉತ್ತರ ನೀಡುವ ಸಾಧ್ಯತೆ ಇದೆ.

ಮಣಿಪುರ ಪರಿಸ್ಥಿತಿ ಕುರಿತ ಪ್ರಧಾನಿ ಹೇಳಿಕೆಗೆ ವಿಪಕ್ಷಗಳಿಂದ ಮುಂದುವರೆದ ಪ್ರತಿಭಟನೆ: ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ
ಇಂದು ಕೂಡಾ ಲೋಕಸಭೆಯಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸಿ, ಗದ್ದಲ ಉಂಟುಮಾಡಿದವು. ಇದರಿಂದಾಗಿ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಖಾಸಗಿ ವಲಯಕ್ಕೆ ಲಿಥಿಯಂ ಗಣಿಗಾರಿಕೆಗೆ ಅವಕಾಶ ನೀಡುವ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ
ಭಾರತದ ಕಾರ್ಯತಂತ್ರದ ಲಿಥಿಯಂ ನಿಕ್ಷೇಪವನ್ನು ಖಾಸಗಿ ವಲಯಕ್ಕೆ ತೆರೆಯುವ ಕ್ರಮದಲ್ಲಿ ಲೋಕಸಭೆಯಲ್ಲಿ ಶುಕ್ರವಾರ ಗಣಿ ಮತ್ತು ಖನಿಜ (ಅಭಿವೃದ್ಧಿ ಮತ್ತು ನಿಯಂತ್ರಣ) ತಿದ್ದುಪಡಿ ಮಸೂದೆ, 2023 ಅನ್ನು ಅಂಗೀಕರಿಸಿತು.

30 ವರ್ಷಗಳಿಂದ ಹೈಕೋರ್ಟ್ನಲ್ಲಿ 71,000 ಕ್ಕೂ ಹೆಚ್ಚು ಪ್ರಕರಣ ಬಾಕಿ: ಕೇಂದ್ರ ಸರ್ಕಾರ
ಸುಮಾರು 30 ವರ್ಷಗಳಿಂದ ದೇಶದ ವಿವಿಧ ಹೈಕೋರ್ಟ್ಗಳಲ್ಲಿ 71,000 ಕ್ಕೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಎಂದು ಲೋಕಸಭೆಗೆ ಶುಕ್ರವಾರ ಕೇಂದ್ರ ಸರ್ಕಾರ ತಿಳಿಸಿದೆ.

