Lok Sabha

ಅದಾನಿ ಜೊತೆಗಿನ ಪ್ರಧಾನಿ ವಿದೇಶ ಪ್ರವಾಸ; ವಿವರಗಳಿಗಾಗಿ ಲೋಕಸಭೆಯಲ್ಲಿ ನಿಲುವಳಿ ಸೂಚನೆ ಮಂಡಿಸಿದ ಕಾಂಗ್ರೆಸ್
ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಪ್ರಧಾನಿ ನರೇಂದ್ರ ಮೋದಿ ಉತ್ತರಿಸಿದ ಒಂದು ದಿನದ ನಂತರ, ಕಾಂಗ್ರೆಸ್ ಸಂಸದ ಮಾಣಿಕ್ಕಂ ಠಾಗೋರ್ ಅವರು ಗುರುವಾರ ಲೋಕಸಭೆಯಲ್ಲಿ 'ಅದಾನಿ ಜೊತೆಗಿನ ಪ್ರಧಾನಿ ವಿದೇಶ ಪ್ರವಾಸದ ವಿವರಗಳನ್ನು' ಕೋರಿ ನಿಲುವಳಿ ಸೂಚನೆಯನ್ನು ಮಂಡಿಸಿದರು.

ಲೋಕಸಭೆಯಲ್ಲಿ ವಂದನಾ ನಿರ್ಣಯ; 'ರಚನಾತ್ಮಕ ಟೀಕೆಗಳ ಜಾಗದಲ್ಲಿ ಈಗ ಬಲವಂತದ ಟೀಕೆ: ವಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
ಕೆಲವರು ಭಾರತದ ಬೆಳವಣಿಗೆಯ ಕಥೆಯನ್ನು ಒಪ್ಪಿಕೊಳ್ಳಲು ನಿರಾಕರಿಸುತ್ತಿದ್ದು, ರಚನಾತ್ಮಕ ಟೀಕೆಗಳ ಜಾಗದಲ್ಲಿ ಈಗ ಬಲವಂತದ ಟೀಕೆ ಸ್ಥಾನ ಪಡೆಯುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಲೋಕಸಭೆಯಲ್ಲಿ ವಿಪಕ್ಷಗಳನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧದ ಟೀಕೆಗೆ ಹಕ್ಕುಚ್ಯುತಿ ಮಂಡನೆ; ನೋಟಿಸ್ಗೆ ಉತ್ತರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಫೆಬ್ರುವರಿ 7 ರಂದು ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮಾಡಿದ ಟೀಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹಕ್ಕುಚ್ಯುತಿ ಮಂಡನೆ ನೋಟಿಸ್ಗೆ ತಮ್ಮ ಉತ್ತರವನ್ನು ಲೋಕಸಭೆಯ ಸಚಿವಾಲಯಕ್ಕೆ ಕಳುಹಿಸಿದ್ದಾರೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಕೇಂದ್ರ ಸರ್ಕಾರದಿಂದ ಅದಾನಿ ರಕ್ಷಣೆ: ಲೋಕಸಭೆಯಲ್ಲಿ ಪ್ರಧಾನಿ ಮೋದಿ ಹೇಳಿಕೆ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿ ಗೌತಮ್ ಅದಾನಿಯನ್ನು ರಕ್ಷಿಸುತ್ತಿದೆ ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಬುಧವಾರ ಪುನರುಚ್ಚರಿಸಿದ್ದಾರೆ.

ಪುರಾವೆ ಇಲ್ಲದೇ ಆರೋಪ ಮಾಡಬೇಡಿ, ಸದನದ ಘನತೆ ಕಾಪಾಡಿ: ಕಾಂಗ್ರೆಸ್ ಸಂಸದರಿಗೆ ಲೋಕಸಭಾ ಸ್ಪೀಕರ್ ಸೂಚನೆ
ಸತ್ಯ ಮತ್ತು ಪುರಾವೆಗಳಿಲ್ಲದೆ ಆರೋಪ ಮಾಡಬಾರದು ಎಂದು ಕಾಂಗ್ರೆಸ್ ಸಂಸದರೊಬ್ಬರ ಹೇಳಿಕೆಗೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಬುಧವಾರ ಹೇಳಿದ್ದಾರೆ.

ಲೋಕಸಭೆಯಲ್ಲಿ ಹೇಳಿಕೆ ನೀಡಿದ ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಆಗ್ರಹ
ಲೋಕಸಭೆಯಲ್ಲಿ ಮಾಡಿದ ಕೆಲವು ಆಕ್ಷೇಪಾರ್ಹ ಹೇಳಿಕೆಗಳಿಗಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅವುಗಳನ್ನು ದಾಖಲೆಗಳಿಂದ ತೆಗೆದುಹಾಕಬೇಕು ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಬುಧವಾರ ಒತ್ತಾಯಿಸಿದ್ದಾರೆ.

ಅದಾನಿ ವಿಚಾರವಾಗಿ ಗದ್ದಲ; ಲೋಕಸಭೆ, ರಾಜ್ಯಸಭೆ ಮಧ್ಯಾಹ್ನಕ್ಕೆ ಮುಂದೂಡಿಕೆ
ಅದಾನಿ ಗ್ರೂಪ್ ವಿರುದ್ಧ ಅಮೆರಿಕ ಮೂಲದ ಸಂಶೋಧನಾ ಸಂಸ್ಥೆ ಹಿಂಡೆನ್ಬರ್ಗ್ ಮಾಡಿರುವ ಆರೋಪದ ಬಗ್ಗೆ ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳ ಗದ್ದಲದ ನಡುವೆಯೇ ಲೋಕಸಭೆಯನ್ನು ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.

ಆರು ದಿನ ಮುಂಚಿತವಾಗಿ ಸಂಸತ್ ಮುಂಗಾರು ಅಧಿವೇಶನ ಮುಕ್ತಾಯ: ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ
ಈ ಬಾರಿಯ ಸಂಸತ್ ಮುಂಗಾರು ಅಧಿವೇಶನ ಆರು ದಿನ ಮುಂಚಿತವಾಗಿ ಮುಕ್ತಾಯವಾಗಿದೆ. ಡಿಸೆಂಬರ್ 7 ರಂದು ಆರಂಭವಾಗಿದ್ದ ಅಧಿವೇಶನ ಡಿಸೆಂಬರ್ 29ಕ್ಕೆ ಮುಗಿಯಬೇಕಿತ್ತು. ಆದರೆ, ಆರು ದಿನ ಮುಂಚಿತವಾಗಿ ಮುಕ್ತಾಯವಾಗಿದ್ದು, ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ.

ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಸಂಸದರು ಮಾಸ್ಕ್ ಧರಿಸುವಂತೆ ಹೇಳಿದ ಸ್ಪೀಕರ್, ಸಭಾಪತಿ
ವಿಶ್ವದ ಹಲವು ರಾಷ್ಟ್ರಗಳಲ್ಲಿ ಕೋವಿಡ್-19 ಪ್ರಕರಣಗಳು ಏರಿಕೆಯಾಗುತ್ತಿರುವ ಬೆನ್ನಲ್ಲೇ, ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ಗುರುವಾರ ಸಂಸದರಿಗೆ ಮಾಸ್ಕ್ ಧರಿಸಲು ಮತ್ತು ಕೋವಿಡ್ ನಿಯಮಾವಳಿಗಳ ಬಗ್ಗೆ ಜಾಗೃತಿ ಮೂಡಿಸಲು ಸಲಹೆ ನೀಡಿದ್ದಾರೆ.

