Lokayukta cops

ಲೋಕಾಯುಕ್ತ ದಾಳಿ: 50 ಕೋಟಿ ರೂಪಾಯಿ ಅಕ್ರಮ ಆಸ್ತಿ ಪತ್ತೆ
ದಾಳಿ ವೇಳೆ ಸರ್ಕಾರಿ ಅಧಿಕಾರಿಗಳು ಹೊಂದಿರುವ 49.83 ಕೋಟಿ ರೂ.ಗಳ ಅಕ್ರಮ ಆಸ್ತಿ (ಡಿಎ) ಪತ್ತೆಯಾಗಿದೆ. ಇದರಲ್ಲಿ 37.95 ಕೋಟಿ ರೂ. ಮೌಲ್ಯದ ಸ್ಥಿರ ಆಸ್ತಿ ಮತ್ತು 11.88 ಕೋಟಿ ರೂ.ಗಳ ಚರಾಸ್ತಿ ಸೇರಿವೆ.

ರಾಜ್ಯಾದ್ಯಂತ ಲೋಕಾಯುಕ್ತ ಪೊಲೀಸರ ದಾಳಿ: 35.31 ಕೋಟಿ ರೂ ಅಕ್ರಮ ಆಸ್ತಿ ಪತ್ತೆ
ಬೆಂಗಳೂರು ನಗರ, ಮೈಸೂರು, ದಾವಣಗೆರೆ, ಮಂಡ್ಯ, ಬೀದರ್, ಹಾವೇರಿ, ಧಾರವಾಡ, ಗದಗ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೋಪಿ ಅಧಿಕಾರಿಗಳು ಮತ್ತು ಅವರ ಸಂಬಂಧಿಕರ 47 ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಲಾಯಿತು.

ಮಾಜಿ ಸಚಿವ ಗೋಪಾಲಯ್ಯ ವಿರುದ್ಧದ ಅಬಕಾರಿ ಪ್ರಕರಣ: ಲೋಕಾಯುಕ್ತ ಪೊಲೀಸರಿಗೆ ಕೋರ್ಟ್ ತರಾಟೆ, ಮರು ತನಿಖೆಗೆ ಆದೇಶ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಅವಧಿಯಲ್ಲಿ 2 ಲಕ್ಷ ಮೆಟ್ರಿಕ್ ಟನ್‌ನಷ್ಟು ಕಾಕಂಬಿಯನ್ನು ನಿಯಮಬಾಹಿರವಾಗಿ ರಫ್ತು ಮಾಡಲು ಅನುಮತಿ ನೀಡಿದ್ದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಮುಕ್ತಾಯ ವರದಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ.

ಲಂಚ ಪಡೆಯುವಾಗ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಲಂಚ ಪಡೆಯುವ ವೇಳೆ ಹನುಮಂತ ನಗರ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೇಬಲ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 11 ಸಾವಿರ ರೂ. ಲಂಚ: ವೈದ್ಯರಿಂದ ಹಣ ವಾಪಸ್ ಕೊಡಿಸಿದ ಲೋಕಾಯುಕ್ತ ಪೊಲೀಸರು
ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲು ವೈದ್ಯರು 11 ಸಾವಿರ ರೂ. ಲಂಚ ಸ್ವೀಕರಿಸಿರುವುದು ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಹಣವನ್ನು ವಾಪಸ್ ಕೊಡಿಸಿದ್ದಾರೆ.

