Lokayukta police

ಲೈಸೆನ್ಸ್ ನವೀಕರಣಕ್ಕೆ ಲಂಚ: ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್ ಲೋಕಾಯುಕ್ತ ಪೊಲೀಸರ ಬಲೆಗೆ
ಲೈಸೆನ್ಸ್ ನವೀಕರಣಕ್ಕಾಗಿ ಲಂಚ ಸ್ವೀಕರಿಸುವ ವೇಳೆ ಬಿಬಿಎಂಪಿ ಹೆಲ್ತ್ ಇನ್ಸ್'ಪೆಕ್ಟರ್'ವೊಬ್ಬರು ಶನಿವಾರ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಟೆಂಡರ್ ಗಾಗಿ ಲಂಚ: 40 ಲಕ್ಷ ರೂ. ನಗದು ಹಣದೊಂದಿಗೆ ಲೋಕಾಯುಕ್ತಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪುತ್ರ!
ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ದಾಳಿ, ಪರಿಶೀಲನೆ
ನಗರದ ವೈಯಾಲಿಕಾವಲ್ ನಲ್ಲಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ- ಬಿಡಿಎ ಕಚೇರಿ ಮೇಲೆ ಲೋಕಾಯುಕ್ತರು ಇಂದು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ.

ಅಧಿಕಾರಿಯನ್ನು ಪರೀಕ್ಷಿಸಲು ಲೋಕಾಯುಕ್ತ ಪೊಲೀಸರು ವಿಫಲ, ಖುಲಾಸೆಯನ್ನು ಎತ್ತಿಹಿಡಿದ ಹೈಕೋರ್ಟ್
ಉದ್ಯೋಗ ಮತ್ತು ತರಬೇತಿ ವಿಭಾಗದ ಮಾಜಿ ಜಂಟಿ ನಿರ್ದೇಶಕ ಶಿವಲಿಂಗಮೂರ್ತಿ ಅವರನ್ನು ಭ್ರಷ್ಟಾಚಾರ ಆರೋಪದಿಂದ ಖುಲಾಸೆಗೊಳಿಸಿದ ಕರ್ನಾಟಕ ಹೈಕೋರ್ಟ್, 2003ರಲ್ಲಿ ಅವರ ಮನೆಯಿಂದ ವಶಪಡಿಸಿಕೊಂಡ 12.15 ಲಕ್ಷ ರೂಪಾಯಿ ನಗದು ಬಿಡುಗಡೆ ಮಾಡುವಂತೆ ವಿಶೇಷ ನ್ಯಾಯಾಲಯಕ್ಕೆ ಸೂಚಿಸಿದೆ.

ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲು ಲಂಚ: ಲೋಕಾಯುಕ್ತ ಪೊಲೀಸರಿಂದ ಬಿಬಿಎಂಪಿ ಅಧಿಕಾರಿಗಳ ಬಂಧನ
ನಗರದ ಹೆಚ್ಎಸ್ಆರ್ ಲೇಔಟ್ ನಲ್ಲಿನ ವಾಣಿಜ್ಯ ಸಂಕೀರ್ಣಕ್ಕೆ ಸ್ವಾಧೀನಾನುಭವ ಪತ್ರ ನೀಡಲು ಪಾವತಿಸಬೇಕಾದ ಅಧಿಕೃತ ಶುಲ್ಕದ ಮೊತ್ತವನ್ನು ಕಡತ ಮಾಡುವ ಸಂಬಂಧ ಲಂಚ ಸ್ವೀಕಾರ ಆರೋಪದ ಮೇರೆಗೆ ಬಿಬಿಎಂಪಿ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ಸೇರಿದಂತೆ ಮೂವರನ್ನು ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಮಂಗಳವಾರ ಬಂಧನಕ್ಕೊಳಪಡಿಸಿದ್ದಾರೆ.

9 ಜಿಲ್ಲೆಗಳ ತಂಬಾಕು ಉತ್ಪನ್ನ ಘಟಕಗಳ ಮೇಲೆ ಲೋಕಾಯುಕ್ತ ದಾಳಿ!
ಲೋಕಾಯುಕ್ತ ಪೊಲೀಸರು ಮಂಗಳವಾರ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ತಂಬಾಕು ಉತ್ಪನ್ನಗಳ ಉತ್ಪಾದನಾ ಘಟಕಗಳು ಮತ್ತು ಗೋದಾಮುಗಳ ಮೇಲೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದರು.

ಹುಮ್ಮಸ್ಸಿನಿಂದ ಕೆಲಸ ಮಾಡಿ: ಪೊಲೀಸರಿಗೆ ಲೋಕಾಯುಕ್ತ ಬಿಎಸ್.ಪಾಟೀಲ್
ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದ್ದು, ಇದರಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದು ಲೋಕಾಯುಕ್ತ ಪೋಲೀಸರ ಅಸಮರ್ಥತಯನ್ನು ತೋರಿಸುತ್ತಿದೆ ಎಂದು ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಹೇಳಿದ್ದಾರೆ.

ಬೆಂಗಳೂರು: ಪಡೆದ ಲಂಚದ ಹಣವನ್ನು ಹಿಂತಿರುಗಿಸುವ ವೇಳೆ ಪೊಲೀಸರಿಂದ ಕೆಎಎಸ್ ಅಧಿಕಾರಿ ಬಂಧನ
ಲಂಚ ಪಡೆಯುವಾಗ ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸುವುದು ವಾಡಿಕೆ. ಆದರೆ ಇಲ್ಲೊಂದು ವಿಭಿನ್ನ ಪ್ರಕರಣದಲ್ಲಿ ಪಡೆದ ಲಂಚದ ಹಣವನ್ನು ವಾಪಸ್ ನೀಡುವ ವೇಳೆ ಕೆ ಎಎಸ್ ಅಧಿಕಾರಿಯೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣ: ಯಡಿಯೂರಪ್ಪ, ಕುಟುಂಬ ಸದಸ್ಯರ ವಿರುದ್ಧ ಕೇಸ್ ದಾಖಲಿಸಿದ ಲೋಕಾಯುಕ್ತ ಪೊಲೀಸರು
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಹಾಗೂ ಅವರ ಕುಟುಂಬದ ಹಲವು ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಕೇಸ್...

