Lokayukta raid

ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: 30ಕ್ಕೂ ಹೆಚ್ಚು ಕಡೆ ಪರಿಶೀಲನೆ; ಕಂತೆ ಕಂತೆ ನೋಟು, ಚಿನ್ನಾಭರಣ ಪತ್ತೆ
ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಬೆಳ್ಳಂಬೆಳಿಗ್ಗೆ ಶಾಕ್ ನೀಡಿದ್ದು, ಬೆಂಗಳೂರು, ಬಳ್ಳಾರಿ, ರಾಮನಗರ ಸೇರಿದಂತೆ ರಾಜ್ಯದ 30 ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಅಧಿಕಾರಿಗಳ ಮನೆಯಲ್ಲಿ ಕಂತೆ ಕಂತೆ ನೋಟು, ಚಿನ್ನ, ಬೆಳ್ಳಿ ಆಭರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಅವ್ಯವಹಾರ ಮತ್ತು ಅಕ್ರಮ ಆರೋಪ: 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ
ಅವ್ಯವಹಾರ ಹಾಗೂ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿನ ಹತ್ತು ಸರ್ಕಾರಿ ಆಸ್ಪತ್ರೆಗಳ ಮೇಲೆ ದಾಳಿ ನಡೆಸಿದ್ದಾರೆ.

ಬೆಸ್ಕಾಂ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ: 1.44 ಕೋಟಿ ರೂ ಮೌಲ್ಯದ ಆಸ್ತಿ ಜಪ್ತಿ
ಲೋಕಾಯುಕ್ತ ಪೊಲೀಸರು ಮಂಗಳವಾರ ಬೆಳ್ಳಂಬೆಳಗ್ಗೆ ಬೆಸ್ಕಾಂ ಅಧಿಕಾರಿಯ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಿದ್ದು, ದಾಳಿ ವೇಳೆ ಕೋಟ್ಯಾಂತರ ರುಪಾಯಿ ಮೌಲ್ಯದ ಆಸ್ತಿಗಳು ಪತ್ತೆಯಾಗಿವೆ.

ಬೆಂಗಳೂರಿನ ಮೂರು ಕಡೆ ಸೇರಿ ರಾಜ್ಯದ 63 ಕಡೆ ಲೋಕಾಯುಕ್ತ ದಾಳಿ: 25 ಲಕ್ಷ ರೂ. ಮೌಲ್ಯದ ವಜ್ರ, 3 ಕೆಜಿ ಚಿನ್ನ, ನಗದು ಹಣ ವಶ
ಮಂಗಳವಾರ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಬೆಂಗಳೂರಿನ ಮೂರು ಕಡೆ ಸೇರಿ ರಾಜ್ಯದ 63ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿ ಶೋಧ ಕಾರ್ಯಾಚರಣೆ ಕೈಗೊಂಡಿದೆ.

11 ಭೂಸಮೀಕ್ಷಾ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ವಿವರ ಸಲ್ಲಿಸಲು ಅಧಿಕಾರಿಗಳಿಗೆ 3 ದಿನಗಳ ಗಡುವು
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು, ಬೆಂಗಳೂರು ನಗರ ಜಿಲ್ಲೆ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ 11 ಭೂಮಾಪನ ಕಚೇರಿಗಳ ಮೇಲೆ ಸೋಮವಾರ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲನೆ ನಡೆಸಿದರು.

17 ಅಧಿಕಾರಿಗಳ ಮೇಲೆ ಲೋಕಾಯುಕ್ತ ಭರ್ಜರಿ ದಾಳಿ: 35 ಕೋಟಿ ರೂ. ಆಸ್ತಿ ಪತ್ತೆ
ಭ್ರಷ್ಟ ಅಧಿಕಾರಿಗಳ ವಿರುದ್ಧ ತಮ್ಮ ಬೇಟೆ ಮುಂದುವರಿಸಿರುವ ಲೋಕಾಯುಕ್ತ ಪೊಲೀಸರು ಸೋಮವಾರ ಏಕಕಾಲದಲ್ಲಿ ಬೆಂಗಳೂರು ಸೇರಿ ರಾಜ್ಯಾದ್ಯಂತ 11 ಜಿಲ್ಲೆಯಲ್ಲಿನ 17 ಸರ್ಕಾರಿ ಅಧಿಕಾರಿಗಳ ಕಚೇರಿ ಮತ್ತು ಸಂಬಂಧಿಕರ ನಿವಾಸ ಸೇರಿ 69 ಕಡೆ ದಾಳಿ ಮಾಡಿ ಕೋಟ್ಯಂತರ ಮೌಲ್ಯದ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.

ರಾಜ್ಯದ 70ಕ್ಕೂ ಹೆಚ್ಚು ಕಡೆ ಲೋಕಾಯುಕ್ತ ದಾಳಿ: 17 ಸರ್ಕಾರಿ ಅಧಿಕಾರಿಗಳ ಕಚೇರಿ, ಮನೆ ಮೇಲೆ ರೇಡ್; ಅಪಾರ ಪ್ರಮಾಣದ ನಗದು, ಚಿನ್ನ ವಶಕ್ಕೆ!
ಸೋಮವಾರ ಬೆಳ್ಳಂಬೆಳಗ್ಗೆಯೇ ರಾಜ್ಯದ ವಿವಿಧ ಸರ್ಕಾರಿ ಹುದ್ದೆಯಲ್ಲಿರುವ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದು, ದಾಳಿ ವೇಳೆ ಅಪಾರ ಪ್ರಮಾಣದ ನಗದು, ಚಿನ್ನಾಭರಣಗಳು ಪತ್ತೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಭ್ರಷ್ಟ ಅಧಿಕಾರಿಗಳ ವಿರುದ್ಧ ಬೇಟೆ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಲೋಕಾಯುಕ್ತ ಪೊಲೀಸರಿಂದ ದಾಳಿ, ತೀವ್ರ ಶೋಧ
ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ಇಂದು ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರೋಬ್ಬರಿ 90 ಕಡೆ ವಿವಿಧ ಇಲಾಖೆಗಳ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ಮಾಡಿದ್ದಾರೆ.

ಲೋಕಾಯುಕ್ತ ದಾಳಿ ವೇಳೆ ಆದಾಯಕ್ಕಿಂತ ಅಧಿಕ ಆಸ್ತಿ ಪತ್ತೆ ; ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮೂರ್ತಿ ಬಂಧನ
ಸರ್ವೆ ಸೂಪರ್ ವೈಸರ್ ಕೆ.ಟಿ ಶ್ರೀನಿವಾಸ್ ಮೂರ್ತಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು, ಈ ವೇಳೆ 3 ಕೋಟಿಗೂ ಅಧಿಕ ಆಸ್ತಿ ಪತ್ತೆಯಾಗಿದೆ. ಈ ಸಂಬಂಧ ಲೋಕಾಯುಕ್ತ ಅಧಿಕಾರಿಗಳಿಂದ ಶ್ರೀನಿವಾಸಮೂರ್ತಿ ಬಂಧನವಾಗಿದೆ.

