Lokayukta raid

ಲೋಕಾಯುಕ್ತ ದಾಳಿ: ಕೆಆರ್ ಪುರ ತಹಶೀಲ್ದಾರ್ ಅಜಿತ್ ರೈ ಬಂಧನ
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು ಕೆಆರ್ ಪುರ ತಹಶೀಲ್ದಾರ್ ಅಜಿತ್ ರೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಲೋಕಾಯುಕ್ತ ಬೇಟೆ: ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ದಾಳಿ, ದಾಖಲೆಗಳ ವಶ
ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ ಮುಂದುವರಿದಿದೆ. ರಾಜ್ಯಾದ್ಯಂತ ಇಂದು ಬುಧವಾರ ಬೆಳ್ಳಂಬೆಳಗ್ಗೆ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ(Lokayukta raid) ನಡೆದಿದೆ.

ಲಂಚ ಪಡೆಯುವಾಗ ಪಾಂಡವಪುರ ತಹಶೀಲ್ದಾರ್ ಸೌಮ್ಯ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ
ಮಲೆಕ್ಕಿಗನ ವರ್ಗಾವಣೆಗಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಾಂಡವಪುರ ತಹಶೀಲ್ದಾರ್ ಕೆ.ಸಿ.ಸೌಮ್ಯ ಅವರು ಗುರುವಾರ ಸಂಜೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ದಾಳಿಯಲ್ಲಿ ಬೆಸ್ಕಾಂ ಎಂಜಿನಿಯರ್‌ನ ಮನೆಯಲ್ಲಿ 5.6 ಕೋಟಿ ಮೌಲ್ಯದ ಆಸ್ತಿ ಜಪ್ತಿ
ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದರು.

ಭ್ರಷ್ಟ ಅಧಿಕಾರಿಗಳ ಬೇಟೆ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ; ಮನೆ, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ
ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ರಾಜ್ಯದಲ್ಲಿ ಮುಂದುವರಿದಿದೆ. ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಇತ್ತ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿಮಾಡಿದ್ದಾರೆ.

ಬೆಂಗಳೂರು ಸೇರಿ ಹಲವೆಡೆ ಲೋಕಾಯುಕ್ತ ದಾಳಿ: ಬಿಬಿಎಂಪಿ ಎಡಿಟಿಪಿ ಗಂಗಾಧರಯ್ಯ ಮನೆ ಮೇಲೆ ರೇಡ್, ದಾಖಲೆಗಳ ಪರಿಶೀಲನೆ
ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಸೋಮವಾರ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ಮಾಡಿದ್ದು, ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಕೆಲ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದೆ.

ಬಿಜೆಪಿ ಶಾಸಕ ಮಾಡಾಳ್, ಪುತ್ರನ ಮೇಲಿನ ಲೋಕಾಯುಕ್ತ ದಾಳಿ ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ಜಗದೀಶ್ ಶೆಟ್ಟರ್
ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತರ ದಾಳಿ ಹಾಗೂ ಅವರ ಪುತ್ರ ಪ್ರಶಾಂತ್ ಮಾಡಾಳ್ ಬಂಧನ ಮುಂಬರುವ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿನ ಬಿಜೆಪಿ ಗೆಲುವಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಜಗದೀಶ ಶೆಟ್ಟರ್ ಭಾನುವಾರ ಹೇಳಿದರು.

ಲೋಕಾಯುಕ್ತ ದಾಳಿ: ಪುತ್ರನ ಮನೆ-ಕಚೇರಿಯಲ್ಲಿ 8 ಕೋಟಿ ರೂ. ನಗದು ಪತ್ತೆ; ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಾಪತ್ತೆ!
ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಕೆ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರ ಕಚೇರಿ ಮತ್ತು ನಿವಾಸದಲ್ಲಿ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು 8.12 ಕೋಟಿ ರೂಪಾಯಿ ಲೆಕ್ಕಕ್ಕೆ ಸಿಗದ ನಗದನ್ನು ವಶಪಡಿಸಿಕೊಂಡಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದಲ್ಲಿ ಲೋಕಾಯುಕ್ತ ಶೋಧ ಅಂತ್ಯ: ಕೆಜಿಗಟ್ಟಲೆ ಚಿನ್ನಾಭರಣ, ನಗದು, ಆಸ್ತಿ ಪತ್ರ ವಶ
ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದ ಮಾಡಾಳ್ ನಿವಾಸದಲ್ಲಿ ಸತತ 10 ಗಂಟೆಗಳ ಕಾಲ ಲೋಕಾಯುಕ್ತ ಪೊಲೀಸರು ನಡೆಸಿದ್ದ ಶೋಧ ಕಾರ್ಯ ಮುಕ್ತಾಯಗೊಂಡಿದ್ದು ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿದೆ.

