Lokayukta raid

ಲೋಕಾಯುಕ್ತ ದಾಳಿ: ಶಾಸಕ ಪುತ್ರನ ಕಚೇರಿ-ನಿವಾಸದಲ್ಲಿ ಸಿಕ್ಕಿದ್ದು 8 ಕೋಟಿ ರೂ. ಗೂ ಅಧಿಕ ನಗದು, ಸಿಎಂ ಹೇಳಿದ್ದೇನು?
ಗುತ್ತಿಗೆದಾರರಿಂದ 40 ಲಕ್ಷ ಲಂಚ ಪಡೆದು ಸಿಕ್ಕಿಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಪ್ರಶಾಂತ್‌ಕುಮಾರ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರು 6 ಕೋಟಿ 10 ಲಕ್ಷ ರೂಪಾಯಿ ವಶಪಡಿಸಿಕೊಂಡಿದ್ದಾರೆ. ಅವರ ಕಚೇರಿಯಲ್ಲಿ 2 ಕೋಟಿ 2 ಲಕ್ಷ ರೂಪಾಯಿ ಪತ್ತೆಯಾಗಿದೆ.

ಲೋಕಾಯುಕ್ತ ಮರು ಸ್ಥಾಪನೆ ಮಾಡಿದ್ದೇ ಭ್ರಷ್ಟಚಾರ ನಿಗ್ರಹಕ್ಕೆ, ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗುತ್ತದೆ: ಸಿಎಂ ಬೊಮ್ಮಾಯಿ
ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್ ಕಚೇರಿ ಮತ್ತು ನಿವಾಸದ ಲೋಕಾಯುಕ್ತ ದಾಳಿ ವೇಳೆ ಕೋಟಿ ಕೋಟಿ ನಗದು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ-ನಿವಾಸದಿಂದ 6 ಕೋಟಿ ರೂ. ನಗದು ವಶ: ಸಿಎಂ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ
ವಿಧಾನಸಭೆ ಚುನಾವಣೆ ಹೊತ್ತಿನಲ್ಲಿ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ BWSSB ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಕಚೇರಿಯಲ್ಲಿ ನಿನ್ನೆ ಮಾರ್ಚ್ 2 ಗುರುವಾರ ಸಾಯಂಕಾಲದಿಂದ ಇಂದು ಶುಕ್ರವಾರ ಬೆಳಗಿನ ಜಾವದವರೆಗೂ ಲೋಕಾಯುಕ್ತ ದಾಳಿ ಮುಂದುವರಿದಿದ್ದು ಈ ವೇಳೆ ರಾಶಿ ರಾಶಿ ಹಣ ಪತ್ತೆಯಾಗಿದೆ.

ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳದ್ದು ಇನ್ನೆಷ್ಟು? ಐಟಿ, ಇಡಿ, ಸಿಬಿಐಗಳು ಬಾಳೆಹಣ್ಣಿನ ಸಿಪ್ಪೆ ತೆಗೆಯುತ್ತಿವೆಯೇ ಅಮಿತ್ ಶಾ ಅವರೇ?
ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ, ಕೆಎಎಸ್ ಅಧಿಕಾರಿ ಮಾಡಾಳು ಪ್ರಶಾಂತ್ ಅವರು ಲಂಚ ಸ್ವೀಕರಿಸಿ ಸಿಕ್ಕಿಬಿದ್ದಿರುವ ಪ್ರಕರಣ ಕಾಂಗ್ರೆಸ್ ರೊಟ್ಟಿ ಕೈಯಿಂದ ಜಾರಿ ತುಪ್ಪಕ್ಕೆ ಬಿದ್ದಂತಾಗಿದೆ.

ಲೋಕಾಯುಕ್ತ ದಾಳಿ ವೇಳೆ ಸಿಕ್ಕಿದ್ದು 1.62 ಕೋಟಿ; ಬಿಜೆಪಿ ಶಾಸಕನ ಪುತ್ರ ಸೇರಿ ಐವರ ಬಂಧನ!
ಲಂಚ ಪಡೆಯುವಾಗ ದಾವಣಗೆರೆಯ ಚೆನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಇದೇ ವೇಳೆ ಪ್ರಶಾಂತ್ ಸೇರಿದಂತೆ ಐವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ರಾಜ್ಯದ ಹಲವು ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ದಾಳಿ: ಕಡತಗಳ ಪರಿಶೀಲನೆ
ಏಕಕಾಲಕ್ಕೆ ರಾಜ್ಯದ 9 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ. ಒಂಭತ್ತು ಜಿಲ್ಲೆಗಳ ಆರ್ ಟಿಓ ಚೆಕ್ ಪೋಸ್ಟ್ ಗಳ ಮೇಲೆ ಬೆಳಗ್ಗೆ 4 ಗಂಟೆಯಿಂದ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ.

ಬೆಂಗಳೂರಿನ 10 ಜಾಹೀರಾತು ಸಂಸ್ಥೆಗಳ ಮೇಲೆ ಲೋಕಾಯುಕ್ತ ದಾಳಿ
ಬಹಳ ದಿನಗಳ ನಂತರ ಮತ್ತೆ ಕಾರ್ಯಾಚರಣೆಗಿಳಿದಿರುವ ಲೋಕಾಯುಕ್ತ ಪೊಲೀಸರು, ಅಕ್ರಮ ಹೊರ್ಡಿಂಗ್ಸ್ ಪ್ರಕರಣ ಸಂಬಂಧ ಶನಿವಾರ 10...

ಸಣ್ಣ ನೀರಾವರಿ ಇಲಾಖೆ ಜೆಇ ಮನೆ ಮೇಲೆ 'ಲೋಕಾ' ದಾಳಿ
ಬೀದರ್ ನಗರದಲ್ಲಿನ ಸಣ್ಣ ನೀರಾವರಿ ಇಲಾಖೆ ಜೆಇ ಅಶೋಕ್ ಕೆಮಶೆಟ್ಟಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಶುಕ್ರವಾರ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ...

ರಾಜಕಾರಣ ಮಾಡಿ ಶ್ರೀಮಂತನಾಗಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ
ನನ್ನ ಹೆಸರಿನಲ್ಲಿರುವ ಆಸ್ತಿಪಾಸ್ತಿ ಎಲ್ಲವೂ ಪಿತ್ರಾರ್ಜಿತ ಆಸ್ತಿಯಾಗಿದ್ದು, ರಾಜಕಾರಣ ಮಾಡಿ ಶ್ರೀಮಂತನಾಗಿಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಶುಕ್ರವಾರ ಹೇಳಿದ್ದಾರೆ...

