Lokayukta

ಗುಂಡಿ ಬಿದ್ದ ವೈಟ್ ಟಾಪಿಂಗ್ ರಸ್ತೆ: ಪೂಜೆ ಮಾಡಿ ಆಪ್ ಆಕ್ರೋಶ, ಲೋಕಾಯುಕ್ತ ತನಿಖೆಗೆ ಆಗ್ರಹ
ವೈಟ್ ಟಾಪಿಂಗ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗಿದ್ದ ನಗರದ ಹಲಸೂರು ಕೆರೆ ಬಳಿಯ ಡಿ.ಭಾಸ್ಕರನ್ ರಸ್ತೆಯಲ್ಲಿ ಗುಂಡಿ ಬಿದ್ದ ಸ್ಥಳಕ್ಕೆ ಬುಧವಾರ ಪೂಜೆ ಸಲ್ಲಿಸಿ ವಿಭಿನ್ನವಾಗಿ ಪ್ರತಿಭಟಿಸಿದ ಆಮ್ ಆದ್ಮಿ ಪಕ್ಷದವರು ರಸ್ತೆ ಕುಸಿತಕ್ಕೆ ಕಳಪೆ ಕಾಮಗಾರಿ, ಭ್ರಷ್ಟಾಚಾರ ಕಾರಣ ಎಂದು ಆರೋಪಿಸಿದರು.

ಕಲಬುರಗಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿಯ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆಸಲಾಗಿದೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಗಡುವು ಮುಗಿದರೂ ಆಸ್ತಿ ವಿವರ ಸಲ್ಲಿಸದ ಶಾಸಕರು: ಹೆಸರು ಪ್ರಕಟಿಸಿದ ಲೋಕಾಯುಕ್ತ
ಆಸ್ತಿ ವಿವರ ಸಲ್ಲಿಸದ ಕರ್ನಾಟಕದ ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರ ಪಟ್ಟಿಯನ್ನು ಲೋಕಾಯುಕ್ತ ಬಹಿರಂಗಡಿಸಿದೆ. ಆಯ್ಕೆಯಾದ ಮೂರು ತಿಂಗಳೊಳಗೆ ಸದಸ್ಯರು ತಮ್ಮ ಆಸ್ತಿ ವಿವರನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಇದೆ.

ಬೆಂಗಳೂರು: ಲಂಚ ಪಡೆಯುತ್ತಿದ್ದ ಬೆಸ್ಕಾಂ, ಕೆಐಎಡಿಬಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ವಿದ್ಯುತ್ ಸಂಪರ್ಕ ಬದಲಾವಣೆ ಮಾಡಲು ರೂ.7.50 ಲಕ್ಷ ಲಂಚ ಪಡೆಯುತ್ತಿದ್ದ ಆರೋಪದಡಿ ಬೆಸ್ಕಾಂ ಮುಖ್ಯ ಪ್ರಧಾನ ವ್ಯವಸ್ಥಾಪಕ ಎಂ.ಎಲ್. ನಾಗರಾಜ್ ಹಾಗೂ ಕಾರು ಚಾಲಕ ಮುರುಳಿಕೃಷ್ಣ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

600 ಕೋಟಿ ರೂ. ಭ್ರಷ್ಟಾಚಾರ ಆರೋಪ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತಕ್ಕೆ ದೂರು
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಲ್ಲಿ 600 ಕೋಟಿ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಕಳಂಕಿತ ಅಧಿಕಾರಿಗಳಿಗೆ ಮತ್ತೆ ಹುದ್ದೆ: ಸರ್ಕಾರದ ನಿರ್ಧಾರಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಅಸಮಾಧಾನ
ಕಳಂಕಿತ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸ್ಸು ಮಾಡಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್, ತಮ್ಮ ಸಂಸ್ಥೆಗೆ ರಾಜ್ಯ ಸರ್ಕಾರದಿಂದ ಉತ್ತೇಜಕ ಪ್ರತಿಕ್ರಿಯೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಲಂಚ: ವಾಣಿಜ್ಯ ತೆರಿಗೆ ಇಲಾಖೆಯ ಜಂಟಿ ಆಯುಕ್ತೆ ಲೋಕಾಯುಕ್ತರ ಬಲೆಗೆ
25 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಳಗಾವಿ ವಿಭಾಗದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

ಮಂಗಳೂರು: ಒಂದು ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕೃಷಿ ಇಲಾಖೆ ಅಧಿಕಾರಿ
ಕೃಷಿ ಇಲಾಖೆಯ ಉಪನಿರ್ದೇಶಕರೊಬ್ಬರು 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಕಾಲಮಿತಿಯೊಳಗೆ ತನಿಖೆ ಪೂರ್ಣಗೊಳಿಸಿ: ಲೋಕಾಯುಕ್ತಕ್ಕೆ ಹೈಕೋರ್ಟ್ ನಿರ್ದೇಶನ
ಲೋಕಾಯುಕ್ತರು ತನಿಖೆಯನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡುವ ಮೂಲಕ ತಮ್ಮ ಮನೆಯನ್ನು ಕ್ರಮಬದ್ಧಗೊಳಿಸಬೇಕು, ಇಲ್ಲವಾದರೆ ಪ್ರಾಸಿಕ್ಯೂಷನ್ ಎಂಬ ಕತ್ತಿಯು ಸಾರ್ವಜನಿಕ ಸೇವಕರ ತಲೆಯ ಮೇಲೆ ತೂಗುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

