Lokayukta

ಹಿಂದೂಗಳಿಗೆ ಸೇರಿದ ಸ್ಮಶಾನ ಒತ್ತುವರಿ ಮಾಡಿದ ಬಿಬಿಎಂಪಿ; ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ; ಜಮೀರ್ ಅಹ್ಮದ್ ಕೈವಾಡ ಶಂಕೆ!
ಜೆಜೆ ನಗರ ವಾರ್ಡ್ನ ಗೋರಿಪಾಳ್ಯದಲ್ಲಿದ್ದ ಹಿಂದೂ ಸಮುದಾಯಕ್ಕೆ ಸೇರಿದ ಸ್ಮಶಾನವನ್ನು ಬಿಬಿಎಂಪಿ ಒತ್ತುವರಿ ಮಾಡಿಕೊಂಡಿದ್ದು, ಸ್ಥಳದಲ್ಲಿ ಅಕ್ರಮವಾಗಿ ಕ್ರೀಡಾ ಸಂಕೀರ್ಣ ನಿರ್ಮಾಣ ಮಾಡುತ್ತಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ನಕಲಿ ದಾಖಲೆ ನೀಡಿ ಕೋಟಿಗಟ್ಟಲೆ ಬಿಬಿಎಂಪಿ ಟೆಂಡರ್; ಲೋಕಾಯುಕ್ತಕ್ಕೆ ಆರ್ಟಿಐ ಕಾರ್ಯಕರ್ತ ದೂರು
ಬಿಬಿಎಂಪಿ ಟೆಂಡರ್ ಪಡೆಯುವಲ್ಲಿ ಅವ್ಯವಹಾರ ನಡೆದಿದೆ ಎಂಬ ದೂರಿನ ಮೇರೆಗೆ ಬಿಬಿಎಂಪಿ ಮತ್ತು ಬಿಎಂಟಿಎಫ್ ಅಧಿಕಾರಿಗಳು ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಆರೋಪಿಸಿ ಆರ್ಟಿಐ ಕಾರ್ಯಕರ್ತ ಎಸ್ ಭಾಸ್ಕರನ್ ಅವರು ಗುತ್ತಿಗೆದಾರ ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದಾರೆ.

ಯಾದಗಿರಿಯಲ್ಲಿ ಕಲುಶಿತ ನೀರು ಪ್ರಕರಣ; TNIE ವರದಿ ಆಧರಿಸಿ ಲೋಕಾಯುಕ್ತ ಸ್ವಯಂ ಪ್ರೇರಿತ ದೂರು ದಾಖಲು
ಯಾದಗಿರಿಯಲ್ಲಿ ಕಲುಶಿತ ನೀರು ಸೇವನೆಯ ಪರಿಣಾಮ 2 ಸಾವನ್ನಪ್ಪಿ, 34 ಮಂದಿ ಅನಾರೋಗ್ಯಕ್ಕೀಡಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರಕಟಿಸಿದ್ದ ವರದಿಯನ್ನು ಆಧರಿಸಿ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್, ಸ್ವಯಂ ಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ತನಿಖೆಗೆ ಆದೇಶಿಸಿದ್ದಾರೆ.

ಬಿಡಿಎ ಮೇಲೆ ಲೋಕಾಯುಕ್ತ ದಾಳಿ: ಮೂವರ ಬಂಧನ, ದೂರುಗಳ ಸ್ವೀಕಾರಕ್ಕೆ ವಿಶೇಷ ಕೌಂಟರ್ ವ್ಯವಸ್ಥೆ
ಬಿಡಿಎನಲ್ಲಿ ಭ್ರಷ್ಟಾಚಾರ ನಡೆಯುತ್ತಿರುವುದರ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರು ಬಂದ ಹಿನ್ನೆಲೆಯಲ್ಲಿ ಬಿಡಿಎ ಕೇಂದ್ರ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು, ಮೂವರನ್ನು ಬಂಧಿಸಲಾಗಿದೆ ಹಾಗೂ ಹಲವು ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅವ್ಯವಸ್ಥೆ: ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು
ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೋಗಿಗಳ ಸಹಾಯಕರು ತಂಗಲು ವ್ಯವಸ್ಥೆ ಕಲ್ಪಿಸದೇ ಇರುವುದು ಸೇರಿದಂತೆ ಅಲ್ಲಿನ ಅವ್ಯವಸ್ಥೆಗಳ ಕುರಿತು ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಎಂದು ತಿಳಿದುಬಂದಿದೆ.

ಲಂಚ ಪ್ರಕರಣ: ಇಬ್ಬರು ಅಧಿಕಾರಿಗಳಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ನೀಡಿದ ಕರ್ನಾಟಕ ನ್ಯಾಯಾಲಯ
ಮಹತ್ವದ ತೀರ್ಪಿನಲ್ಲಿ, ಇಲ್ಲಿನ ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಭ್ರಷ್ಟಾಚಾರ ಪ್ರಕರಣದಲ್ಲಿ ಉಪ ತಹಶೀಲ್ದಾರ್ ಮತ್ತು ಗ್ರಾಮ ಲೆಕ್ಕಿಗರಿಗೆ ನಾಲ್ಕು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು (ಆರ್ಐ) ಶನಿವಾರ ವಿಧಿಸಿದೆ.

ಸಂದರ್ಶನ: ಜನರು ಸಹಕರಿಸಿದರೆ, ಭ್ರಷ್ಟಾಚಾರ ಎಂಬ ಪೆಡಂಭೂತವನ್ನು ತೊಲಗಿಸಬಹುದು; ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ
ಧೈರ್ಯದಿಂದ ಯೋಚಿಸಿ ಮತ್ತು ನಂಬಿಕೆಯಿಂದ ವರ್ತಿಸಿ. ಈ ಎರಡು ತತ್ವಗಳನ್ನು ಪ್ರತೀಯೊಬ್ಬರು ಇಟ್ಟುಕೊಂಡರೆ ಭ್ರಷ್ಟಾಚಾರವನ್ನು ತೊಲಗಿಸಲು ಬಹುದೊಡ್ಡ ಮೇಲುಗೈ ಸಾಧಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ಹೇಳಿದ್ದಾರೆ,

ಹುಮ್ಮಸ್ಸಿನಿಂದ ಕೆಲಸ ಮಾಡಿ: ಪೊಲೀಸರಿಗೆ ಲೋಕಾಯುಕ್ತ ಬಿಎಸ್.ಪಾಟೀಲ್
ರಾಜ್ಯದಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ನಡೆಯುತ್ತಿದ್ದು, ಇದರಿಂದ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಇದು ಲೋಕಾಯುಕ್ತ ಪೋಲೀಸರ ಅಸಮರ್ಥತಯನ್ನು ತೋರಿಸುತ್ತಿದೆ ಎಂದು ಲೋಕಾಯುಕ್ತ ಬಿ.ಎಸ್. ಪಾಟೀಲ್ ಅವರು ಹೇಳಿದ್ದಾರೆ.

5 ಲಕ್ಷ ರೂ. ಲಂಚದ ಜೊತೆಗೆ ಲೋಕಾಯುಕ್ತಗೆ ಸಿಕ್ಕಿಬಿದ್ದ ಮಹಿಳಾ ಕೆಎಎಸ್ ಅಧಿಕಾರಿ!
ಖಾತೆ ಮಾಡಿಕೊಡಲು ಐದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಮಹಿಳಾ ಕೆಎಎಸ್ ಅಧಿಕಾರಿಯನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

