Loksabha Election 2019

ಲೋಕಸಭೆ ಚುನಾವಣೆ: ಮಧ್ಯಾಹ್ನ 1 ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ. 37.2ರಷ್ಟು ಮತದಾನ!
ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ನಡೆಯುತ್ತಿಯುವ ಮತದಾನ ಪ್ರಕ್ರಿಯೆಯಲ್ಲಿ ಮಧ್ಯಾಹ್ನ 1 ಗಂಟೆಯವರೆಗೂ ಶೇ. 36.31ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ: ಕರ್ನಾಟಕದ 14 ಕ್ಷೇತ್ರದಲ್ಲಿ ಮತದಾನ ಆರಂಭ
ಏಳು ಹಂತಗಳ ಲೋಕಸಭೆ ಚುನಾವಣೆಯಲ್ಲಿ ಎರಡನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಕರ್ನಾಟಕದ ಒಟ್ಟು 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ.

ಲೋಕಸಭೆ ಚುನಾವಣೆ: 2ನೇ ಹಂತದ ಮತದಾನಕ್ಕೆ ಖಾಕಿ ಕಣ್ಗಾವಲು!
ಹಾಲಿ ಲೋಕಸಭಾ ಚುನಾವಣೆ ನಿಮಿತ್ತ ನಡೆಯುತ್ತಿರುವ 2ನೇ ಹಂತದ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಮತದಾನದ ವೇಳೆ ಯಾವುದೇ ರೀತಿಯ ಅವಘಡಗಲು ಸಂಭವಿಸದಂತೆ ಚುನಾವಣಾ ಆಯೋಗ ಕ್ರಮ ಕೈಗೊಂಡಿದ್ದು, ಭದ್ರತೆಗಾಗಿ ಅಪಾರ ಪ್ರಮಾಣದ ಪೊಲೀಸರನ್ನು ನಿಯೋಜಿಸಿದೆ.

ಲೋಕಸಭೆ ಚುನಾವಣೆ: 11 ಗಂಟೆ ವೇಳೆಗೆ ಕರ್ನಾಟಕದಲ್ಲಿ ಶೇ. 19.58ರಷ್ಟು ಮತದಾನ
ಹಾಲಿ ಲೋಕಸಭಾ ಚುನಾವಣೆಯ ನಿಮಿತ್ತ ಇಂದು ನಡೆಯುತ್ತಿಯುವ ಮತದಾನ ಪ್ರಕ್ರಿಯೆಯಲ್ಲಿ ಬೆಳಗ್ಗೆ 9 ಗಂಟೆಯವರೆಗೂ ಕರ್ನಾಟಕದಲ್ಲಿ ಶೇ.7.85ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ.

ಮತದಾರರ ಕಟ್ಟಿಹಾಕಲು ಮಂಡ್ಯದಲ್ಲಿ ಮಂಜುನಾಥ ಸ್ವಾಮಿ ಮೇಲೆ ಆಣೆ ಪ್ರಮಾಣದ ರಾಜಕೀಯ? ಫೋಟೋ ವೈರಲ್
ಹಾಲಿ ಲೋಕಸಭಾ ಚುನಾವಣೆಯಲ್ಲಿ ಭಾರಿ ಚರ್ತೆಗೆ ಕಾರಣವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಇದೀಗ ಆಣೆ ಪ್ರಮಾಣದ ರಾಜಕೀಯ ವೈರಲ್ ಆಗಿದ್ದು, ಮತದಾರರಿಗೆ ಹಣದ ಆಮಿಷವಲ್ಲದೇ ಆಣೆ ಪ್ರಮಾಣದ ಮೂಲಕ ಮತದಾರರನ್ನು ಕಟ್ಟಿಹಾಕುವ ಪ್ರಯತ್ನ ಕೂಡ ನಡೆಸಲಾಗಿತ್ತು ಎಂಬ ಆರೋಪ ಕೇಳಿಬಂದಿದೆ.

ಒಡಿಶಾದಲ್ಲಿ ನಕ್ಸಲರ ಅಟ್ಟಹಾಸ: ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ!
ಲೋಕಸಭಾ ಚುನಾವಣೆ ನಿಮಿತ್ತ ದೇಶಾದ್ಯಂತ 2ನೇ ಹಂತದ ಮತದಾನಕ್ಕೆ ಸಜ್ಜಾಗಿರುವಂತೆಯೇ ಅತ್ತ ಒಡಿಶಾದಲ್ಲಿ ನಕ್ಸಲರು ತಮ್ಮ ಅಟ್ಟಹಾಸ ಮೆರೆದಿದ್ದು, ಮಹಿಳಾ ಚುನಾವಣಾ ಅಧಿಕಾರಿಯನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಕೋಮು ಹೇಳಿಕೆ: ಕಾಂಗ್ರೆಸ್ ನ ನವಜೋತ್ ಸಿಂಗ್ ಸಿದು ವಿರುದ್ಧ ಎಫ್ ಐಆರ್!
ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಹಾಗೂ ಪಂಜಾಬ್ ಕಾಂಗ್ರೆಸ್ ಮುಖಂಡ ನವಜೋತ್ ಸಿಂಗ್ ಸಿಧು ವಿರುದ್ಧ ಎಫ್ ಐಆರ್ ದಾಖಲಾಗಿದ್ದು, ಸಿಧು ಕೋಮು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಾಗಿದೆ ಎಂದು ತಿಳಿದುಬಂದಿದೆ.

ವಯನಾಡ್ ನಲ್ಲಿ ರಾಹುಲ್ ಗಾಂಧಿ ಟೆಂಪಲ್ ರನ್, ಪುಲ್ವಾಮ ಸಂತ್ರಸ್ಥರು, ತಂದೆ, ಅಜ್ಜಿಗೆ ಪೂಜೆ!
ಹಾಲಿ ಲೋಕಸಭಾ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ದಕ್ಷಿಣ ಭಾರತದಿಂದ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇರಳದ ವಿವಿಧ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು: ಪ್ರಚಾರದ ವೇಳೆ ಬಲವಂತವಾಗಿ ಮುಸ್ಲಿಂ ಧ್ವಜ ತೆರವುಗೊಳಿಸಿದ ಬಿಜೆಪಿ ಕಾರ್ಪೊರೇಟರ್!
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಪರ ಪ್ರಚಾರದ ವೇಳೆ ಬಿಜೆಪಿ ಕಾರ್ಪೋರೇಟರ್ ಒಬ್ಬರು ಮುಸ್ಲಿಂ ಸಮುದಾಯದ ಧ್ವಜವನ್ನು ಬಲವಂತವಾಗಿ ತೆರವುಗೊಳಿಸಿದ ಘಟನೆ ಬೆಳಕಿಗೆ ಬಂದಿದೆ.

