Loksabha Elections 2024

ರಾಜೀವ್ ಚಂದ್ರಶೇಖರ್ ಅಫಿಡವಿಟ್ ವಿವರಗಳನ್ನು ಪರಿಶೀಲಿಸಲು ಸಿಬಿಡಿಟಿಗೆ ಚುನಾವಣಾ ಆಯೋಗ ಸೂಚನೆ
ಕೇಂದ್ರ ಸಚಿವ ಹಾಗೂ ತಿರುವನಂತಪುರಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೀವ್ ಚಂದ್ರಶೇಖರ್ ಸಲ್ಲಿಸಿರುವ ಅಫಿಡವಿಟ್‌ನಲ್ಲಿನ ವಿವರಗಳು ಸರಿಯಾಗಿವೆಯೇ ಎಂಬುದನ್ನು ಪರಿಶೀಲಿಸುವಂತೆ ಕೇಂದ್ರ ನೇರ ತೆರಿಗೆಗಳ ಮಂಡಳಿಗೆ (ಸಿಬಿಡಿಟಿ) ಚುನಾವಣಾ ಆಯೋಗ ಮಂಗಳವಾರ ನಿರ್ದೇಶನ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಆಹ್ವಾನ ತಿರಸ್ಕರಿಸಿ ಇಂಡಿಯಾ ಮೈತ್ರಿಕೂಟದ ಪಕ್ಷಗಳು ಶ್ರೀರಾಮನನ್ನು ಅವಮಾನಿಸಿವೆ: ಪ್ರಧಾನಿ ನರೇಂದ್ರ ಮೋದಿ
ಈ ವರ್ಷದ ಜನವರಿಯಲ್ಲಿ ಅಯೋಧ್ಯೆಯಲ್ಲಿ ನಡೆದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಭಾಗವಹಿಸದೆ ಇಂಡಿಯಾ ಮೈತ್ರಿಕೂಟದ ನಾಯಕರು ಶ್ರೀರಾಮನನ್ನು ಅವಮಾನಿಸಿದ್ದಾರೆ ಮತ್ತು ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದಲ್ಲಿ ಎಷ್ಟು ಮುಳುಗಿದೆ ಎಂದರೆ ಅವರು ಎಂದಿಗೂ ಅದರಿಂದ ಹೊರಬರಲು ಸಾಧ್ಯವಾಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಗ್ದಾಳಿ ನಡೆಸಿದರು.

ಪ್ರಣಾಳಿಕೆ ಬಗ್ಗೆ ಪ್ರಧಾನಿ ಮೋದಿ ಹೇಳಿಕೆ: ಚುನಾವಣಾ ಆಯೋಗದ ಮೊರೆ ಹೋದ ಕಾಂಗ್ರೆಸ್!
ಪಕ್ಷದ ಪ್ರಣಾಳಿಕೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟೀಕೆ ಮಾಡಿರುವುದರ ಬಗ್ಗೆ ಕಾಂಗ್ರೆಸ್ ಪಕ್ಷ ಚುನಾವಣಾ ಆಯೋಗದ ಮೊರೆ ಹೋಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಸ್‌ಸಿ/ಎಸ್‌ಟಿ ಮಹಿಳೆಯರ ಖಾತೆಗೆ ವಾರ್ಷಿಕ 1 ಲಕ್ಷ ರೂ. ಜಮೆ: ರಾಹುಲ್ ಗಾಂಧಿ
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಸೋಮವಾರ ವಿಶ್ವಾಸ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ.

ತಮಿಳುನಾಡು: ಬಿಜೆಪಿ ಅಭ್ಯರ್ಥಿಯ ಬೆಂಬಲಿಗರು ಎನ್ನಲಾದ ಮೂವರಿಂದ 4 ಕೋಟಿ ರೂ. ವಶ
ಫ್ಲೈಯಿಂಗ್ ಸ್ಕ್ವಾಡ್ ತಂಡವು ಭಾನುವಾರ ತಿರುನಲ್ವೇಲಿಗೆ ತೆರಳುತ್ತಿದ್ದ ಮೂವರಿಂದ 3.90 ಕೋಟಿ ರೂಪಾಯಿ ವಶಪಡಿಸಿಕೊಂಡಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ಬಳಿಯಲ್ಲಿ ಆ ಹಣವನ್ನು ಸಾಗಿಸಲು ಯಾವುದೇ ಮಾನ್ಯ ದಾಖಲೆಗಳು ಇರಲಿಲ್ಲ.

AI ಬಳಸಿ ಭಾರತದ ಚುನಾವಣೆಗೆ ಅಡ್ಡಿಪಡಿಸಲು ಚೀನಾ ಯತ್ನ!: ಮೈಕ್ರೋಸಾಫ್ಟ್ ಮಾಹಿತಿ
ಭಾರತದ ಲೋಕಸಭಾ ಚುನಾವಣೆಗೆ ಅಡ್ದಿಪಡಿಸುವುದಕ್ಕಾಗಿ ಚೀನಾ ಕೃತಕ ಬುದ್ಧಿಮತ್ತೆ ಬಳಸಿ ಯತ್ನಿಸುತ್ತಿದೆ ಎಂದು ಮೈಕ್ರೋಸಾಫ್ಟ್ ಎಚ್ಚರಿಕೆ ನೀಡಿದೆ.

ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯ ಪತ್ರ' ಬಿಡುಗಡೆ!: ಉದ್ಯೋಗ ಸೃಷ್ಟಿ, ಜಾತಿ ಗಣತಿ, ಕನಿಷ್ಠ ಬೆಂಬಲ ಬೆಲೆ, ಕೃಷಿ ಸಾಲ ಮನ್ನಾ ಸೇರಿ ಹಲವು ಭರವಸೆ!
ಮೋದಿ ಆಡಳಿತ ಶೈಲಿ ಬದಲಾವಣೆ, ಪ್ರಜಾಪ್ರಭುತ್ವ ಸರ್ಕಾರ ಸ್ಥಾಪನೆ ವಿಶ್ವಾಸ ಸೇರಿದಂತೆ ಹಲವು ಅಂಶಗಳನ್ನೊಳಗೊಂಡ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ 'ನ್ಯಾಯ ಪತ್ರ'ವನ್ನು ಇಂದು ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಬಿಡುಗಡೆ ಮಾಡಿದರು.

ಲೋಕಸಭಾ ಚುನಾವಣೆ 2024: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 90,000 ಲೀಟರ್ ಮದ್ಯ ವಶಕ್ಕೆ
ಲೋಕಸಭಾ ಚುನಾವಣೆ 2024 ಕ್ಕೆ ನೀತಿ ಸಂಹಿತೆ ಜಾರಿಯಲ್ಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು 90,443 ಲೀಟರ್ ಗಳಷ್ಟು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ.

ರಾಹುಲ್ ಗಾಂಧಿ ಆಸ್ತಿ ಎಷ್ಟು ಗೊತ್ತೇ?: ಪ್ರಿಯಾಂಕ ಜೊತೆ ಭೂಮಿ, ಗುರುಗ್ರಾಮ ಕಚೇರಿ ಹಂಚಿಕೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯಾನಾಡ್ ನಿಂದ ನಾಮಪತ್ರ ಸಲ್ಲಿಸಿದ್ದು, ಆಸ್ತಿ ವಿವರಗಳನ್ನು ಘೋಷಿಸಿಕೊಂಡಿದ್ದಾರೆ.

